Advertisement

ಸುಳ್ಳು ಸುದ್ದಿ ನಿಯಂತ್ರಣಕ್ಕೆ ಶೀಘ್ರದಲ್ಲೇ ಕಠಿನ ಕಾನೂನು: ಡಾ| ಪರಮೇಶ್ವರ್‌

08:59 PM Jul 28, 2023 | Team Udayavani |

ತುಮಕೂರು: ಸುಳ್ಳು ಸುದ್ದಿಗಳು ಸಮಾಜಕ್ಕೆ ಬಹಳ ಅಪಾಯಕಾರಿ. ಹಾಗಾಗಿ ಅವುಗಳನ್ನು ನಿಯಂತ್ರಿಸಲು ಸದ್ಯದಲ್ಲೇ ಕಠಿನ ಕಾನೂನು ರಚಿಸುವ ಬಗ್ಗೆ ರಾಜ್ಯ ಸರಕಾರ ಚಿಂತನೆ ನಡೆಸಿದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ| ಜಿ. ಪರಮೇಶ್ವರ್‌ ತಿಳಿಸಿದರು.

Advertisement

ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ ಘಟಕದಿಂದ ಏರ್ಪಡಿಸಿದ್ದ ಪತ್ರಿಕಾ ದಿನಾಚರಣೆ ಮತ್ತು ಪತ್ರಕರ್ತರ ಸಂಘದ ಸದಸ್ಯರಿಗೆ ಸಿದ್ಧಗಂಗಾ ಆಸ್ಪತ್ರೆಯಿಂದ ಆರೋಗ್ಯ ಸಿದ್ಧಿ ಉಚಿತ ಒಪಿಡಿ ಮತ್ತು ಇತರ ಸೌಲಭ್ಯಗಳು ಶೇ. 50 ರಿಯಾಯಿತಿ ದರದಲ್ಲಿ ಚಿಕಿತ್ಸೆ ನೀಡುವ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು.

ಪ್ರಸ್ತುತ ದಿನಗಳಲ್ಲಿ ರಾಜಕೀಯ ವ್ಯಕ್ತಿಗಳು, ಸರಕಾರ ಹಾಗೂ ಅಧಿಕಾರಿಗಳ ಕುರಿತು ಸುಳ್ಳು ಸುದ್ದಿಗಳು ಪ್ರಕಟವಾಗುತ್ತಲೇ ಇವೆ. ಇದರಿಂದ ಆಗುವ ಅನಾಹುತದ ಬಗ್ಗೆ ಯಾರೂ ಊಹಿಸಿರುವುದಿಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next