Advertisement

ದಲಿತ ಯುವಕನ ಹತ್ಯೆ: ಆರೋಪಿಗಳಿಗೆ ಕಠಿಣ ಕಾನೂನು ಕ್ರಮ: ಸಚಿವ ನಿರಾಣಿ

06:05 PM May 27, 2022 | Team Udayavani |

ಬೆಂಗಳೂರು: ಕಲುಬುರಗಿಯಲ್ಲಿ ನಡೆದ ದಲಿತ ಯುವಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದ್ದು, ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಕಲಬುರಗಿ ಜಿಲ್ಲಾ ‌ಉಸ್ತುವಾರಿ ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರು ‌ಎಚ್ಚರಿಸಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಘಟನೆ ನಡೆದ ತಕ್ಷಣವೇ ಪೊಲೀಸರು ಕಾರ್ಯೋನ್ಮುಖರಾಗಿ ತಪ್ಪಿತಸ್ಥರನ್ನು ಕಾನೂನು ಪ್ರಕಾರವಾಗಿ ಬಂಧಿಸಿದ್ದಾರೆ. ಮುಂದಿನ ಪ್ರಕ್ರಿಯೆಗಳು ಕೂಡ ಕಾನೂನು ಅಡಿಯಲ್ಲೇ ನಡೆಯಬೇಕಾಗರುವುದರಿಂದ ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದರು.

ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದರಿಂದಲೇ ಆರೋಪಿಗಳನ್ನು ತಕ್ಷಣವೇ ಬಂಧಿಸಲು ಸಾದ್ಯವಾಗಿದೆ. ನಮ್ಮ ಪೊಲೀಸರು ಸಮರ್ಥರಾಗಿದ್ದರಿಂದ ಆರೋಪಿಗಳು ತಪ್ಪಿಸಿಕೊಳ್ಳಲು ಸಾಧ್ಯವಾಗಲಿಲ್ಲ ಎಂದರು.

ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಇದನ್ನು ರಾಜಕೀಯ ಲಾಭಕ್ಕೆ ಬಳಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ.  ನಾನು ಸುದ್ದಿ ತಿಳಿಯುತ್ತಿದ್ದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜೊತೆ ದೂರವಾಣಿಯಲ್ಲಿ ಮಾತನಾಡಿ ತಪ್ಪಿತಸ್ಥರನ್ನು ತಕ್ಷಣವೇ ಬಂಧಿಸುವಂತೆ ಸೂಚಿನೆ ಕೊಟ್ಟಿದ್ದೇನೆ. ಅದರಂತೆ ಪೊಲೀಸರು ಕೂಡಲೇ ವಿಶೇಷ ತಂಡವನ್ನು ರಚಿಸಿ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ:ಲಡಾಖ್ ದುರಂತ: ಸೇನಾ ವಾಹನ ನದಿಗೆ ಉರುಳಿ ಬಿದ್ದು ಏಳು ಮಂದಿ ಯೋಧರು ಹುತಾತ್ಮ

Advertisement

ಪ್ರತಿಪಕ್ಷಗಳು ಸಾವಿನ ಪ್ರಕರಣವನ್ನು ಸಹ ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುವುದು ದುರದೃಷ್ಟಕರ. ನಾವು ನೊಂದ ಕುಟುಂಬಗಳಿಗೆ ನ್ಯಾಯ ಒದಗಿಸಿ, ಕಾನೂನು ಪ್ರಕಾರವೇ ಆರೋಪಿಗಳಿಗೆ ಶಿಕ್ಷೆಯಾಗಲು ಪ್ರಯತ್ನಿಸುತ್ತಿದ್ದೇವೆ. ಆದರೆ ಕೆಲವರು ಇದರಲ್ಲೂ ಲಾಭನಷ್ಟದ ಲೆಕ್ಕಾಚಾರ ಹಾಕುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕಾನೂನು ಪ್ರಕಾರ ಪ್ರತಿಯೊಬ್ಬರಿಗೂ ಶಿಕ್ಷೆಯಾಗಲಿದೆ. ಇದರಲ್ಲಿ ಯಾವುದೇ ಕಾರಣಕ್ಕೂ ರಾಜೀಯಾಗುವುದಿಲ್ಲ ಎಂದು ನಿರಾಣಿ ಸ್ಪಷ್ಟಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next