Advertisement
ಗುರುವಾರ ತಮ್ಮ ಕಚೇರಿ ಸಭಾಂಗಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಈಗಾಗಲೇ ಲಾಕ್ ಡೌನ್ ನಿಯಮಗಳು ಜಾರಿಯಲ್ಲಿದ್ದರೂ ಬೆ. 6 ರಿಂದ ಸಂಜೆ 6 ರವರೆಗೆ ಜನಸಂದಣಿ ಸೇರಿರುವ ಹಲವಾರು ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್ ಚೈನ್ ಮುರಿಯುವ ಉದ್ದೇಶದಿಂದ ಜಿಲ್ಲಾಡಳಿತವು ಲಾಕ್ ಡೌನ್ ನಿಮಗಳನ್ನು ಇನ್ನೂ ಕಠಿಣಗೊಳಿಸಲು ಮುಂದಾಗಿದೆ ಎಂದು ತಿಳಿಸಿದರು.
Related Articles
Advertisement
ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ಮಾತನಾಡಿ ಅನಾವಶ್ಯಕ ವಾಹನ ಓಡಾಟವನ್ನು ನಿಷೇಧಿಸಲಾಗಿದೆ, ಅನಗತ್ಯ ಓಡಾಟ ಕಂಡುಬಂದಲ್ಲಿ ಅಂತಹ ವಾಹನಗಳನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಲಾಗುವುದು ಎಂದರು. ವ್ಯವಸಾಯ ಹಾಗೂ ವೈದ್ಯಕೀಯ ಸಂಬಂಧಿತ ಕೈಗಾರಿಕೆ/ಕಂಪನಿಗಳಿಗೆ ಮಾತ್ರ ಕಾರ್ಯ ನಿರ್ವಹಿಸಲು ಅವಕಾಶ ನೀಡಲಾಗಿದೆ ಎಂದು ತಿಳಿಸಿದರು.
ಜಿಲ್ಲಾಡಳಿತದ ಈ ಕ್ರಮಕ್ಕೆ ಸಾರ್ವಜನಿಕರು ಸಹಕರಿಸಿ ಜಿಲ್ಲೆಯಲ್ಲಿ ಕೋವಿಡ್ ಸೋಂಕು ಹರಡುತ್ತಿರುವುದನ್ನು ತಡೆಯಲು ಕೈಜೋಡಿಸುವಂತೆ ಜಿಲ್ಲಾಧಿಕಾರಿಗಳು ಮನವಿ ಮಾಡಿದರು.