ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಮೇಳಗಳ ಬಯಲಾಟದ ಸಂದರ್ಭದಲ್ಲಿ ಶಬ್ದಮಾಲಿನ್ಯ ನಿಯಮಾವಳಿ, ರಾಜ್ಯ ಹೈಕೋರ್ಟ್ ಆದೇಶದ ಅಂಶಗಳನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಎಲ್ಲಾ ನಿಯಮಗಳ ಅನುಸರಣೆಯು ದೇವಸ್ಥಾನ ಆಡಳಿತ ಮಂಡಳಿಯ ಸಂಪೂರ್ಣ ಜವಾಬ್ದಾರಿಯಾಗಿರುತ್ತದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಈ ಹಿಂದೆ ಜಿಲ್ಲಾಧಿಕಾರಿಯವರ 15-11-2022ರ ಆದೇಶದಲ್ಲಿ ಯಕ್ಷಗಾನವನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಿ 10 ಗಂಟೆಯಿಂದ ರಾತ್ರಿ 12.30ರವರೆಗೆ ವಿಸ್ತರಿಸಲಾಗಿತ್ತು. ಆದರೆ ಈ ಅದೇಶವನ್ನು ಪ್ರಶ್ನಿಸಿ ಕೃಷ್ಣಕುಮಾರ್ ಎಂಬವರು ಹೈಕೋರ್ಟ್ ಮೊರೆಹೋಗಿದ್ದರು. ಆ ಕುರಿತ ಹೈಕೋರ್ಟ್ ನ 28-11-2023 ಆದೇಶದಲ್ಲಿ ಯಕ್ಷಗಾನ ಮೇಳದ ಪ್ರದರ್ಶನ ಅವಧಿ ಬಗ್ಗೆ ಅರ್ಜಿದಾರರು ಸೂಕ್ತ ಪ್ರಸ್ತಾವನೆ ವಹಿಸಿ ಜಿಲ್ಲಾಧಿಕಾರಿ ಅಗತ್ಯ ಕ್ರಮ ವಹಿಸಬೇಕು ಎಂದು ಆದೇಶಿಸಿದ್ದರೂ ಯಾವುದೇ ಪ್ರಸ್ತಾವನೆ ಸಲ್ಲಿಸಿಲ್ಲ.
ಇದನ್ನೂ ಓದಿ:BCCI; ಹೊಸ ಮಾದರಿಯಲ್ಲಿ WPL ಆಯೋಜಿಸಲು ಸಿದ್ದತೆ; ಬೆಂಗಳೂರಿಗೆ ಆತಿಥ್ಯ ಅವಕಾಶ
ಅಲ್ಲದೆ ಕೋವಿಡ್ 19ರ ನಿರ್ದಿಷ್ಟ ನಿಬಂಧನೆ ಅಥವಾ ಕೋವಿಡ್ 19ರ ಪೂರ್ವ ಪದ್ಧತಿ ಯಾವುದು ಎಂಬುದರ ಬಗ್ಗೆ ಯಾವುದೇ ಉಲ್ಲೇಖವಿಲ್ಲ ಎಂದೂ ಆದೇಶದಲ್ಲಿ ಪ್ರಸ್ತಾಪಿಸಲಾಗಿದೆ.
ಇದೇ ಜ.14ರಿಂದ ಇಡೀ ರಾತ್ರಿ ಯಕ್ಷಗಾನ ನಡೆಸಲು ದೇವಸ್ಥಾನ ಆಡಳಿತ ಸಮಿತಿ ಈಗಾಗಲೇ ಮುಂದಾಗಿದ್ದು ಪತ್ರ ಹೊರಡಿಸಿದೆ.