ಪುತ್ತೂರು: ನಮ್ಮ ದೇಶದಲ್ಲಿ ಹುಟ್ಟಿ ಇಲ್ಲಿನ ನೀರು, ಆಹಾರ ಸಹಿತ ಎಲ್ಲ ಅವಕಾಶ ಬಳಸಿಕೊಂಡು ಪಾಕಿಸ್ಥಾನಕ್ಕೆ ಜೈಕಾರ ಹಾಕುವ ದೇಶದ್ರೋಹಿಗಳಿಗೆ ಕಠಿನ ಕಾನೂನು ಕ್ರಮದ ಅನಿವಾರ್ಯತೆ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ.
ಪುತ್ತೂರಿನಲ್ಲಿ ಶನಿವಾರ ಬಿಜೆಪಿ ಮಂಡಲ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಅವರು ಮಾಧ್ಯಮಗಳ ಜತೆ ಮಾತನಾಡಿದರು.
ರಾಜಕೀಯವಾಗಿ ಯಾವುದೇ ಪಕ್ಷಗಳಿಗೆ ಬೈಯಬಹುದು. ಅದು ಪ್ರಜಾಪ್ರಭುತ್ವದ ಹಕ್ಕು. ಆದರೆ ಈ ದೇಶದಲ್ಲಿದ್ದು ಭಾರತಮಾತೆಗೆ ಜೈಕಾರ ಹಾಕುವುದರ ಬದಲು ದೇಶದ್ರೋಹದ ಕೆಲಸ ಮಾಡುವವರ ವಿರುದ್ಧ ಕಠಿನ ಕ್ರಮ ಕೈಗೊಳ್ಳಬೇಕು ಎಂದರು.
ಇಂತಹ ವ್ಯಕ್ತಿಗಳನ್ನು ಪೊಲೀಸರು ಈಗಾಗಲೇ ಬಂಧಿಸಿ ತನಿಖೆ ನಡೆಸುತ್ತಿದ್ದಾರೆ. ಅವರ ಹಿಂದೆ ಯಾರಿದ್ದಾರೆ ಎಂಬ ಕುರಿತೂ ತನಿಖೆ ನಡೆಸಬೇಕಾಗಿದೆ. ಪಾಕಿಸ್ಥಾನಕ್ಕೆ ಜೈಕಾರ ಹಾಕಲು ಅವಕಾಶ ಮಾಡಿಕೊಟ್ಟ ಕಾರ್ಯಕ್ರಮದ ಸಂಘಟಕರ ಮೇಲೂ ದೇಶದ್ರೋಹದ ಪ್ರಕರಣ ದಾಖಲಿಸಬೇಕು ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದಿರೆ, ಪುತ್ತೂರು ಮಂಡಲಗಳ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಪಿ.ಜಿ. ಜಗನ್ನಿವಾಸ್ ರಾವ್ ಉಪಸ್ಥಿತರಿದ್ದರು.