Advertisement
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೊನಾ ವೈರಸ್ ಕುರಿತು ಜನರ ಭೀತಿಯನ್ನು ಲಾಭವಾಗಿಸಿಕೊಳ್ಳಲು ಕೆಲವು ಫಾರ್ಮಿಸ್ಟ್‌ಗಳು ಮತ್ತು ಔಷಧ ವಿತರಕ ಕಂಪೆನಿಗಳು ಮಾಸ್ಕ್ ಕೊರತೆ ಸೃಷ್ಟಿಸಿ, ಹಣ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಅಂಥವರ ವಿರುದ್ಧ ಶಿಸ್ತು ಕ್ರಮ ಜರಗಿಸಲಾಗುವುದು. ಯಾರಾದರೂ ಎಂಆರ್‌ಪಿಗಿಂತ ಹೆಚ್ಚು ಬೆಲೆಗೆ ಮಾಸ್ಕ್ ಮಾರಾಟ ಮಾಡುತ್ತಿದ್ದರೆ ಸಾರ್ವಜನಿಕರು ಆರೋಗ್ಯವಾಣಿ 104ಕ್ಕೆ ಕರೆ ಮಾಡಿ ದೂರು ಸಲ್ಲಿಸಬಹುದು ಎಂದು ತಿಳಿಸಿದರು.
ಕೊರೊನಾ ಸೋಂಕು ತಗಲಿರಬಹುದು ಎಂಬ ಶಂಕೆಯಿಂದ ವಿದೇಶದಿಂದ ಬಂದ ಐದು ಮಂದಿಯನ್ನು ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ದಾಖಲಿಸಿಕೊಂಡು ನಿಗಾವಹಿಸಲಾಗಿದೆ. ಬೆಂಗಳೂರಿನ ರಾಜೀವ್‌ಗಾಂಧಿ ಆಸ್ಪತ್ರೆಯಲ್ಲಿ ಮೂವರು, ಬೀದರ್ ಮತ್ತು ಉಡುಪಿಯಲ್ಲಿ ತಲಾ ಓರ್ವರ ಸಹಿತ ಐದು ಮಂದಿ ಆಸ್ಪತ್ರೆಯಲ್ಲಿದ್ದಾರೆ. ಈ ಪೈಕಿ ಇರಾನಿ ಮೂಲ ವ್ಯಕ್ತಿಯ ಕೊರೊನಾ ಸೋಂಕು ವರದಿ ನೆಗೆಟಿವ್ ಬಂದಿದೆ. ಬೀದರ್, ಉಡುಪಿ ಸರಕಾರಿ ಆಸ್ಪತ್ರೆಗಳ ಶಂಕಿತರ ರಕ್ತ ಮಾದರಿಯನ್ನು ಬೆಂಗಳೂರಿನ ಎನ್‌ಐವಿ ಕೇಂದ್ರಕ್ಕೆ ಪರೀಕ್ಷೆಗೆಂದು ಕಳುಹಿಸಲಾಗಿದ್ದು, ಶುಕ್ರವಾರ ವರದಿಗಳು ಬರಲಿವೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದರು.
Related Articles
ಕಾರ್ಮಿಕ ಹಾಗೂ ಉದ್ಯೋಗಿ ಕೊರೊನಾ ವೈರಸ್ ಸೋಂಕಿಗೆ ಒಳಗಾದಲ್ಲಿ ಅವರಿಗೆ 28 ದಿನಗಳ ವೇತನ ಸಹಿತ ರಜೆ ನೀಡುವಂತೆ ರಾಜ್ಯ ಕಾರ್ಮಿಕ ಇಲಾಖೆ ಸುತ್ತೋಲೆ ಹೊರಡಿಸಿದೆ.
Advertisement
ಕೊರೊನಾ ಸೋಂಕಿತ ವ್ಯಕ್ತಿಗೆ 28 ದಿನಗಳ ರಜೆಯ ಅಗತ್ಯ ಇರುವುದರಿಂದ ಇಎಸ್‌ಐ ಕಾಯ್ದೆ ಅನ್ವಯವಾಗುವ ಸಂಸ್ಥೆಗಳ ಕಾರ್ಮಿಕರು ಹತ್ತಿರದ ಇಎಸ್‌ಐ ಔಷಧಾಲಯ ಅಥವಾ ಆಸ್ಪತ್ರೆಗಳಿಗೆ ತೆರಳಿ ವೈದ್ಯಾಧಿಕಾರಿಗಳಿಂದ ಪ್ರಮಾಣ ಪತ್ರ ಪಡೆಯಬೇಕು. ಇನ್ನು ಇಎಸ್‌ಐ ವೈದ್ಯಾಧಿಕಾರಿಗಳು ತುರ್ತು ಪರಿಶೀಲನೆ ನಡೆಸಿ ಈ ಸೋಂಕಿತರಿಗೆ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ನೀಡಬೇಕು ಎಂದು ಸೂಚಿಸಿದೆ.
ಪ್ರಮಾಣ ಪತ್ರ ಹೊಂದಿರುವ ಕಾರ್ಮಿಕ ಅಥವಾ ಉದ್ಯೋಗಿಗೆ ಸಂಸ್ಥೆಯ ಆಡಳಿತ ವರ್ಗ ತಕ್ಷಣದಿಂದ 28 ದಿನಗಳ ವೇತನ ಸಹಿತ ರಜೆಯನ್ನು ಕಡ್ಡಾಯವಾಗಿ ಮಂಜೂರು ಮಾಡಬೇಕು. ಇಎಸ್‌ಐ ಕಾಯ್ದೆ ಅನ್ವಯವಾಗದ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ನೌಕರರಿಗೆ ವೈರಸ್ ತಗುಲಿದಲ್ಲಿ ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಲಂ 15 (3) ಅನ್ವಯ 28 ದಿನಗಳ ವೇತನಸಹಿತ ಅನಾರೋಗ್ಯ ರಜೆ ಮತ್ತು ಇತರೆ ರಜೆಯನ್ನು ಕಡ್ಡಾಯವಾಗಿ ನೀಡಬೇಕೆಂದು ಕಾರ್ಮಿಕ ಇಲಾಖೆಯ ಉಪ ಕಾರ್ಯದರ್ಶಿ ಸಂಧ್ಯಾ ಎಲ್. ನಾಯಕ್ ತಿಳಿಸಿದ್ದಾರೆ.
ಅಂಕಿ ಅಂಶ – ರಾಜ್ಯದ ವಿವಿಧೆಡೆ ಗುರುವಾರ ಸೋಂಕು ಪರೀಕ್ಷೆಗೆ ಒಳಗಾದವರು – 46, ( ಒಟ್ಟು -321)
– ಬುಧವಾರ ಬಂದಿ ಸೋಂಕು ವರದಿಗಳು – 14 (ಎಲ್ಲಾ ನೆಗೆಟಿವ್)