Advertisement

ಚುನಾವಣಾ ಅಕ್ರಮ ಎಸಗಿದರೆ ಕಠಿಣ ಕ್ರಮ

01:08 PM Mar 14, 2017 | |

ಮೈಸೂರು: ನಂಜನಗೂಡು ಉಪ ಚುನಾವಣೆಗೆ ಸಂಬಂಧಿಸಿದಂತೆ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ನಡೆಸುವ ಸಭೆ, ಸಮಾರಂಭ, ರ್ಯಾಲಿಗಳಿಗೆ ಕನಿಷ್ಠ 24 ಗಂಟೆ ಮುಂಚಿತವಾಗಿ ಅನುಮತಿ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಿ.ರಂದೀಪ್‌ ತಿಳಿಸಿದರು.

Advertisement

ಉಪ ಚುನಾವಣೆ ಹಿನ್ನೆಲೆಯಲ್ಲಿ ಸೋಮವಾರ ಜಿಲ್ಲಾಧಿಕಾರಿಯವರ ಕಚೇರಿಯ ನ್ಯಾಯಾಲಯ ಸಭಾಂಗಣ ದಲ್ಲಿ ಕರೆಯಲಾಗಿದ್ದ ರಾಜಕೀಯ ಪಕ್ಷಗಳ ಸಭೆಯಲ್ಲಿ ಮಾತನಾಡಿದರು. ಮೈಸೂರು ಮಹಾ ನಗರಪಾಲಿಕೆ ಆಯುಕ್ತ ಜಿ.ಜಗದೀಶ್‌ ಅವರನ್ನು ಚುನಾವಣಾಧಿಕಾರಿ ಹಾಗೂ ನಂಜನಗೂಡು ತಾಲೂಕು ತಹಶೀಲ್ದಾರ್‌ ದಯಾನಂದ್‌ ಅವರನ್ನು ಸಹಾಯಕ ಚುನಾವಣಾಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದೆ.

ಮಾ.14ರಂದು ಚುನಾ ವಣಾ ಅಧಿಸೂಚನೆ ಹೊರಡಿಸಲಿದ್ದು, ಅಂದಿನಿಂದ ಭಾನುವಾರ ಹೊರತು ಪಡಿಸಿ ಮಾ.21ರ ವರೆಗೆ ನಾಮ ಪತ್ರಗಳನ್ನು ನಂಜನಗೂಡು ಹಳೇ ತಾಲೂಕು ಕಚೇರಿಯಲ್ಲಿ ಸ್ವೀಕರಿಸ ಲಾಗುವುದು. ಮಾ.14 ರಂದು ಬೆಳಗ್ಗೆ 9 ಗಂಟೆಯಿಂದ ನಾಮಪತ್ರ ಸಲ್ಲಿಸಲು ಬೇಕಾಗುವ ನಮೂನೆಯನ್ನು ವಿತರಿಸ ಲಾಗುವುದು. ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆವರೆಗೆ ನಾಮಪತ್ರ ಸ್ವೀಕರಿಸಲಾಗುವುದು ಎಂದರು.

ಚುನಾವಣೆಗೆ ಸ್ಪರ್ಧಿಸಲಿಚ್ಛಿಸುವ ಅಭ್ಯರ್ಥಿಗಳು ನಮೂನೆ 2ಇ ರಲ್ಲಿನ ನಾಮಪತ್ರ ಮತ್ತು ನಮೂನೆ 26ರಲ್ಲಿನ ಪರಿಷ್ಕೃತ ಪ್ರಮಾಣ ಪತ್ರಗಳ ನಮೂನೆಗಳನ್ನು ಚುನಾವಣಾಧಿ ಕಾರಿಗಳ ಕಚೇರಿಯಿಂದ ಪಡೆದು ಕೊಳ್ಳಬಹುದು. ರಾಜಕೀಯ ಪಕ್ಷಗಳಿಂದ ಸ್ಪರ್ಧಿಸಲು ಇಚ್ಚಿಸುವ ಅಭ್ಯರ್ಥಿಗಳ ಸಂಬಂಧ ಆಯೋಗ ನಿಗದಿಪಡಿಸಿರುವ ಪ್ರಪತ್ರ ಎ, ಮತ್ತು ಬಿಯನ್ನು ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನಾಂಕ ಮಾ.21ರ ಮಧ್ಯಾಹ್ನ 3 ಗಂಟೆಯೊಳಗಾಗಿ ಸಲ್ಲಿಸಬೇಕು ಎಂದು ತಿಳಿಸಿದರು.

ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಚುನಾವಣಾಧಿಕಾರಿಗಳ ಕಚೇರಿಗೆ ಅಭ್ಯರ್ಥಿ ಹಾಗೂ ನಾಲ್ವರು ಸೂಚಕರು ಸೇರಿದಂತೆ ಒಟ್ಟು 5 ಜನರಿಗೆ ಮಾತ್ರ ಪ್ರವೇಶವಿರುತ್ತದೆ. ಪ್ರತಿ ಅಭ್ಯರ್ಥಿಯ ಚುನಾವಣಾ ವೆಚ್ಚವನ್ನು ಆಯೋಗ 28 ಲಕ್ಷ ರೂ. ನಿಗದಿ ಪಡಿಸಿದ್ದು, ಚುನಾವಣಾಧಿಕಾರಿಗಳ ಕಚೇರಿಯ 100 ಮೀಟರ್‌ 
ವ್ಯಾಪ್ತಿಯಲ್ಲಿ ಅಭ್ಯರ್ಥಿಗಳಿಗೆ ಸಂಬಂಧಿಸಿದ ಮೂರು ವಾಹನಗಳಿಗೆ ಪ್ರವೇಶವಿರುತ್ತವೆ. ನಾಮಪತ್ರ ಸಲ್ಲಿಸುವಾಗ ಅಭ್ಯ ರ್ಥಿಯೊಂದಿಗೆ ಬರುವ ವಾಹನಗಳ ವೆಚ್ಚವನ್ನು ಅಭ್ಯರ್ಥಿಗಳ ವೆಚ್ಚಕ್ಕೆ ಸೇರಿಸಲಾಗುವುದು ಎಂದರು.

Advertisement

ಚುನಾವಣಾ ಮುಗಿದ 30 ದಿನದೊಳಗಾಗಿ ಲೆಕ್ಕವನ್ನು ನಿಗದಿತ ನಮೂನೆಯಲ್ಲಿ ಚುನಾವಣಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು. ನೀತಿ ಸಂಹಿತೆ ಹಿನ್ನೆಲೆಯಲ್ಲಿ 15-20 ಮತಗಟ್ಟೆಗಳಿಗೆ ಒಬ್ಬ ಸೆಕ್ಟರ್‌ ಅಧಿಕಾರಿಯನ್ನು ನೇಮಕ ಮಾಡಲಾಗಿರುತ್ತದೆ. ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ನಡೆಸುವ ಸಭೆ, ಸಮಾರಂಭ ಹಾಗೂ ಪ್ರಚಾರ ಕಾರ್ಯಕ್ರಮಗಳನ್ನು ಚಿತ್ರೀಕರಿಸಲು ಫ್ಲೈಯಿಂಗ್‌ ಸ್ಕ್ವಾಡ್‌ಗಳನ್ನು ನೇಮಕ ಮಾಡಲಾಗಿದೆ ಎಂದು ತಿಳಿಸಿದರು.

ಚುನಾವಣಾ ಅಕ್ರಮಗಳನ್ನು ಮಾಡಿದಲ್ಲಿ ನಿಯಮಾನುಸಾರ ಕ್ರಮ ವಹಿಸಲಾಗುವುದು. ಆಮಿಷ ಒಡ್ಡಲು ಬಳಸುವ ವಸ್ತುಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುವುದು ಎಂದು ಹೇಳಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ವೆಂಕಟೇಶ್‌, ಚುನಾವಣಾಧಿಕಾರಿ ಜಿ. ಜಗದೀಶ್‌ ಹಾಗೂ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಸಭೆಯಲ್ಲಿ ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next