Advertisement
ರಾಜ್ಯ ಸರ್ಕಾರ ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಹೊರಡಿಸಿದ ಪರಿಷ್ಕೃತ ಆದೇಶದನ್ವಯ ಜಿಲ್ಲೆಯಲ್ಲಿ ಜೂ.21 ರವರೆಗೆ ಸಾರ್ವಜನಿಕರ ಅಗತ್ಯ ವಸ್ತುಗಳ ಖರೀದಿಗೆ ಸೋಮವಾರದಿಂದ ಶುಕ್ರವಾರದವರೆಗೆ ಪ್ರತಿದಿನ ಬೆಳಗ್ಗೆ 8 ರಿಂದ ಮಧ್ಯಾಹ್ನ 2 ರವರೆಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ ಎಂದರು.
Related Articles
Advertisement
ಕೋವಿಡ್ ಸೂಕ್ತ ನಡವಳಿಕೆ ಕಟ್ಟುನಿಟ್ಟಾಗಿ ಪಾಲಿಸುವ ನಡಿಗೆ ಮತ್ತು ಜಾಗಿಂಗ್‌ಗೆ ಬೆಳಗ್ಗೆ 5 ರಿಂದ 10 ರವರೆಗೆ ಉದ್ಯಾನವನಗಳನ್ನು ತೆರೆಯಲು ಅನುಮತಿಯಿದೆ. ಆದರೆ ಯಾವುದೇ ಗುಂಪು ಚಟುವಟಿಕೆಗಳಿಗೆ ಅವಕಾಶವಿರುವುದಿಲ್ಲ ಎಂದು ಅವರು ಹೇಳಿದರು. ಟ್ಯಾಕ್ಸಿಗಳು ಮತ್ತು ಆಟೋ ರಿûಾಗಳನ್ನು ನಿರ್ವಹಿಸಲು ಅನುಮತಿಯಿದ್ದು, ಗರಿಷ್ಠ 2 ಪ್ರಯಾಣಿಕರನ್ನು ಮಾತ್ರ ಸಾಗಿಸಬಹುದು. ಈಗಾಗಲೇ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ಕಚೇರಿಗಳ ಜೊತೆಗೆ, ಕೃಷಿ ಮತ್ತು ಸಂಬಂಧಿತ ಕಚೇರಿಗಳು, ಪಿಡಬ್ಲುಡಿ, ವಸತಿ, ಆರ್‌ಟಿಒಎಸ್, ಸಹಕಾರ, ನಬಾರ್ಡ್ ಮತ್ತು ಕಂದಾಯ ಇಲಾಖೆ ಕಚೇರಿಗಳು ಶೇ. 50 ರಷ್ಟು ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಿಸಲು ಅನುಮತಿಯಿದೆ. ಉತ್ಪಾದನೆ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ ಕೌಶಲ್ಯ ತರಬೇತಿ ಸೇರಿದಂತೆ ನಿರ್ಮಾಣ ಚಟುವಟಿಕೆಗಳು ದುರಸ್ತಿ ಕಾರ್ಯಗಳನ್ನು ಅನುಮತಿಸಲಾಗಿದೆ ಎಂದೂ ಹೇಳಿದರು.
ಜಿಲ್ಲೆಗೆ ಸೀಮಿತ ಕ್ರಮಗಳು: ಕೋವಿಡ್ ನಿಯಂತ್ರಣಕ್ಕಾಗಿ ಸರ್ಕಾರದ ಅದೇಶದನ್ವಯ ಜಿಲ್ಲೆಯಲ್ಲಿ ಮದುವೆ ಕಾರ್ಯಕ್ರಮಗಳಿಗೆ ಅನುಮತಿ ನೀಡುವುದನ್ನು ನಿಷೇಧಿಸಿದೆ. ತಹಶೀಲ್ದಾರರು ಆಯಾ ತಾಲೂಕು ವ್ಯಾಪ್ತಿಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುವ ಸಾಧ್ಯತೆ ಕಂಡುಬಂದಲ್ಲಿ ಜಿಲ್ಲಾಧಿಕಾರಿಗಳ ಅನುಮತಿ ಪಡೆದು ಅಂತಹ ಪ್ರದೇಶಗಳನ್ನು ಮೈಕ್ರೋ ಕಂಟೈನ್ಮೆಂಟ್ ವಲಯವನ್ನಾಗಿ ಘೋಷಿಸಿ ಸಂಪೂರ್ಣ ಲಾಕ್ ಡೌನ್ ಮಾಡಬಹುದು. ಇಂತಹ ಪ್ರದೇಶಗಳಲ್ಲಿ ಅಗತ್ಯ ವಸ್ತುಗಳನ್ನು ಮನೆ ಮನೆಗೆ ತಲುಪಿಸಲು ಸ್ಥಳೀಯ ಆಡಳಿತ ಸೂಕ್ತ ವ್ಯವಸ್ಥೆ ಮಾಡಬೇಕು ಎಂದು ತಿಳಿಸಿದ್ದಾರೆ.
ರಾತ್ರಿ ಕರ್ಫ್ಯೂ: ಸರ್ಕಾರದ ಪರಿಷ್ಕೃತ ಮಾರ್ಗಸೂಚಿ ಅನ್ವಯ ಜೂ.21 ರವರೆಗೆ ರಾತ್ರಿ ಕರ್ಫ್ಯೂ ಜಾರಿಯಲ್ಲಿರಲಿದೆ. ಅಗತ್ಯ ಚಟುವಟಿಕೆಗಳನ್ನು ಹೊರತುಪಡಿಸಿ, ವ್ಯಕ್ತಿಗಳ ಚಲನೆಯನ್ನು ಸಂಜೆ 7 ರಿಂದ ಬೆಳಗ್ಗೆ 5 ರವರೆಗೆ ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ತುರ್ತು ಅಗತ್ಯವಿರುವ ರೋಗಿಗಳು ಮತ್ತು ಅವರ ಪರಿಚಾರಕರು, ವ್ಯಕ್ತಿಗಳನ್ನು ಸ್ಥಳಾಂತರಿಸಲು ಅನುಮತಿ ನೀಡಲಾಗುತ್ತದೆ.
ವಾರಾಂತ್ಯದ ಕರ್ಫ್ಯೂ: ಶುಕ್ರವಾರ ರಾತ್ರಿಯಿಂದ ಶನಿವಾರ, ರವಿವಾರ ವಾರ್ಯಂತದ ಕರ್ಫ್ಯೂ ಜಾರಿಯಲ್ಲಿರುತ್ತದೆ. ಸೋಮವಾರ ಎಂದಿನಂತೆ ಜನ ಜೀವನ ಇರಲಿದ್ದು, ಸಾಮಾಜಿಕ ಅಂತರ ಹಾಗೂ ಮಾಸ್ಕ್ ಕಡ್ಡಾಯ ಎಂದರು. ಎಡಿಸಿ ಕೃಷ್ಣಮೂರ್ತಿ, ಜಿಪಂ ಸಿಇಒ ಪ್ರಿಯಂಕಾ ಎಂ., ಎಸ್ಪಿ ಶಿವಪ್ರಕಾಶ್ ದೇವರಾಜು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು.