Advertisement

ಪಡಿತರ ವಿತರಣೆಯಲ್ಲಿ ಲೋಪವಾದ್ರೆ ಕ್ರಮ

05:31 PM May 08, 2020 | mahesh |

ಕೋಲಾರ: ಪಡಿತರ ವಿತರಣೆಯಲ್ಲಿ ಲೋಪ ಕಂಡುಬಂದ ನ್ಯಾಯಬೆಲೆ ಅಂಗಡಿಗಳ ಲೈಸನ್ಸ್‌ ರದ್ದುಪಡಿಸಿ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಕೆ.ಗೋಪಾಲಯ್ಯ ತಿಳಿಸಿದರು. ಜಿಪಂ ಸಭಾಂಗಣದಲ್ಲಿ ನಡೆದ ಇಲಾಖೆ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಲಾಕ್‌ಡೌನ್‌ನಿಂದ ಆಹಾರದ ಕೊರತೆ ಉಂಟಾಗಬಾರದು ಎಂದು ಬಿಪಿ ಎಲ್‌ ಮತ್ತು ಎಪಿಎಲ್‌ ಪಡಿತರ ಚೀಟಿ ಹೊಂದಿರುವ ಕುಟುಂಬಗಳಿಗೆ ಈಗಾಗಲೇ 2 ತಿಂಗಳ ಪಡಿತರ ವಿತರಿಸಿದ್ದು, ಪ್ರಸ್ತುತ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಗರೀಬ್‌ ಕಲ್ಯಾಣ ಅನ್ನ ಯೋಜನೆಯಡಿಯಲ್ಲಿ 2 ತಿಂಗಳ ಪಡಿತರ ವಿತರಿಸಲಾಗುತ್ತಿದೆ ಎಂದು ವಿವರಿಸಿದರು.

Advertisement

ಪಡಿತರ ವಿತರಣೆಯ ತೂಕ ಮತ್ತು ಅಳತೆಯಲ್ಲಿ ಯಾವುದೇ ಮೋಸ ಆಗಬಾರದು. ಕಂದಾಯ, ಆಹಾರ ಹಾಗೂ ಕಾನೂನು ಮಾಪನಶಾಸ್ತ್ರ ಇಲಾಖೆಗಳನ್ನೊಳಗೊಂಡ ಅಧಿಕಾರಿಗಳ 20 ತಂಡಗಳನ್ನು ರಚಿಸಿ, ಪರಿಶೀಲನೆ ನಡೆಸಬೇಕು. ಇದರಿಂದ ನ್ಯಾಯಬೆಲೆ ಅಂಗಡಿಗಳ ಪಡಿತರ ವಿತರಕರು ಎಚ್ಚೆತ್ತು ಕೊಂಡು ನ್ಯಾಯಯುತ ಪಡಿತರವನ್ನು ಫಲಾನುಭವಿಗಳಿಗೆ ವಿತರಿಸುತ್ತಾರೆ. ಲೋಪ ಕಂಡು ಬಂದ ನ್ಯಾಯಬೆಲೆ ಅಂಗಡಿಗಳ ಲೈಸನ್ಸ್‌ನ್ಸು ರದ್ದುಪಡಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಹಳ್ಳಿಗೆ ಹೋಗಿ ಪಡಿತರ ವಿತರಿಸಲಿ: ಶಾಸಕ ಕೆ.ವೈ.ನಂಜೇಗೌಡ ಮಾತನಾಡಿ, ಮಾಲೂರು ತಾಲೂಕಿನಲ್ಲಿ 300ಕ್ಕೂ ಹೆಚ್ಚು ಹಳ್ಳಿಗಳಿದ್ದು, 94 ನ್ಯಾಯಬೆಲೆ ಅಂಗಡಿಗಳಿವೆ. ಇದರಿಂದ
ಪಡಿತರವನ್ನು ಪಡೆಯಲು 4 ರಿಂದ 5 ಕಿ. ಮೀ. ಹೋಗಬೇಕು. ಆದ್ದರಿಂದ ಹೆಚ್ಚಿನ ಜನ ಸಂಖ್ಯೆ ಇರುವ ಹಳ್ಳಿಗಳಿಗೆ ಹೋಗಿ ಪಡಿತರ ವಿತರಣೆ ಮಾಡುವ ವ್ಯವಸ್ಥೆ ಮಾಡಿಸಬೇಕೆಂದು ಸಚಿವರಲ್ಲಿ ಮನವಿ ಮಾಡಿದರು.

ಸಿಲಿಂಡರ್‌ ವಿತರಿಸಿ: ಜಿಪಂ ಅಧ್ಯಕ್ಷ ಸಿ.ಎಸ್‌. ವೆಂಕಟೇಶ್‌ ಮಾತನಾಡಿ, ನೋಂದಣಿಯಾದ 800 ಫಲಾನುಭವಿಗಳಿಗೆ ಗ್ಯಾಸ್‌ಸ್ಟೌ ಮತ್ತು ಸಿಲಿಂಡರ್‌ ವಿತರಣೆ ಆಗಿಲ್ಲ, ಕೂಡಲೇ ಅವರ
ಅರ್ಜಿ ವಿಲೇವಾರಿ ಮಾಡುವಂತೆ ತಿಳಿಸಿದರು. ಜಿಲ್ಲಾಧಿಕಾರಿ ಸಿ.ಸತ್ಯಭಾಮ ಮಾತನಾಡಿ, ಕೊರೊನಾ ಬಂದ ನಂತರ ಬೇಳೆ ಪೂರೈಕೆಯಲ್ಲಿ ಸ್ವಲ್ಪ ಕೊರತೆಯಾಗಿದೆ. ಲಾಕ್‌ಡೌನ್‌ ಜಾರಿ
ಯಾದ ಅವಧಿಯಲ್ಲಿ ಜಿಲ್ಲೆಯಲ್ಲಿ 4000 ವಲಸೆ ಕಾರ್ಮಿಕರಿಗೆ ಆಹಾರದ ಕೊರತೆ ಇರು ವುದನ್ನು ಗಮನಿಸಿ ಜಿಲ್ಲಾಡಳಿತದಿಂದ ವಿತರಣೆ ಮಾಡಲಾಗಿದೆ ಎಂದರು.

ಸಚಿವ ಕೆ.ಗೋಪಾಲಯ್ಯ ಅವರು ಗದ್ದೆ ಕಣ್ಣೂರಿನಲ್ಲಿರುವ ಆಹಾರ ದಾಸ್ತಾನು ಮಳಿ ಗೆಗೆ ಭೇಟಿ ನೀಡಿ ದಾಸ್ತಾನು ಗುಣಮಟ್ಟ, ತೂಕ ಮತ್ತು ಅಳತೆಯನ್ನು ಪರಿಶೀಲಿಸಿದರು. ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ನಾಗೇಶ್‌, ಶಾಸಕರಾದ ಕೆ.ಶ್ರೀನಿವಾಸ ಗೌಡ, ಕೆ.ಆರ್‌. ರಮೇಶ್‌ಕುಮಾರ್‌, ವಿಧಾನ ಪರಿಷತ್‌ ಸದಸ್ಯ ನಜೀರ್‌ ಅಹ್ಮದ್‌, ತೂಪಲ್ಲಿ ಆರ್‌.ಚೌಡರೆಡ್ಡಿ, ಜಿಪಂ ಉಪಾಧ್ಯಕ್ಷರಾದ ಯಶೋದಮ್ಮ, ಸಿಇಒ ಎಚ್‌.ವಿ.ದರ್ಶನ್‌ ಉಪಸ್ಥಿತರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next