Advertisement

ಶೋಷಣೆ ಮುಕ್ತ ಸಮಾಜಕ್ಕೆ ಶ್ರಮಿಸಿ: ಬಣಕಾರ

10:10 PM Apr 16, 2021 | Team Udayavani |

ಹಿರೇಕೆರೂರ : ಡಾ|ಬಿ.ಆರ್‌.ಅಂಬೇಡ್ಕರ್‌ ಅವರು ನೀಡಿದ ಸಂವಿಧಾನ ಇಂದು ನಮ್ಮ ದೈನಂದಿನ ಜೀವನದ ಭಾಗವಾಗಿದೆ. ಅವರ ಆಶಯಗಳಿಗೆ ತಕ್ಕಂತೆ ನಡೆದು ಸಾಮಾಜಿಕ ನ್ಯಾಯ, ಶೋಷಣೆ ಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕೆಂದು ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಯು.ಬಿ.ಬಣಕಾರ ಹೇಳಿದರು. ಪಟ್ಟಣದ ತಹಶೀಲ್ದಾರ್‌ ಕಚೇರಿ ಸಭಾಭವನದಲ್ಲಿ ತಾಲೂಕು ಆಡಳಿತ, ಸಮಾಜ ಕಲ್ಯಾಣ ಇಲಾಖೆ ಹಾಗೂ ವಿವಿಧ ದಲಿತಪರ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಡಾ|ಬಿ. ಆರ್‌.ಅಂಬೇಡ್ಕರ್‌ ಅವರ 130ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಡಾ|ಬಿ. ಆರ್‌.ಅಂಬೇಡ್ಕರ್‌ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.

Advertisement

ಸಂವಿಧಾನ ಶಿಲ್ಪಿ ಡಾ|ಬಿ.ಆರ್‌. ಅಂಬೇಡ್ಕರ್‌ ಅವರ ಆದರ್ಶಗಳು ಎಲ್ಲ ಕಾಲಕ್ಕೂ ಶ್ರೇಷ್ಠವಾಗಿವೆ. ಭಾರತಕ್ಕೆ ಅವರು ಅಪಾರ ಕೊಡುಗೆ ನೀಡಿದ್ದಾರೆ ಹಾಗೂ ಎಲ್ಲ ಕ್ಷೇತ್ರಗಳಿಗೂ ಸಂವಿಧಾನದ ಮೂಲಕ ಅನುಕೂಲ ಕಲ್ಪಿಸಿ ಸಮಾಜಕ್ಕೆ ಉತ್ತಮ ಸಂದೇಶ ನೀಡಿದ್ದಾರೆ.

ಅವರ ಆದರ್ಶಗಳನ್ನು ಪಾಲನೆ ಮಾಡಿ ಅವರ ಕನಸುಗಳನ್ನು ಸಾಕಾರಗೊಳೊಸಬೇಕು ಎಂದರು. ಉಪನ್ಯಾಸಕ ಪಿ.ನಾಗೇಂದ್ರ ಡಾ|ಬಿ. ಆರ್‌.ಅಂಬೇಡ್ಕರ್‌ ಅವರ ಜೀವನ ಸಾಧನೆ ಕುರಿತು ಉಪನ್ಯಾಸ ನೀಡಿದರು. ಈ ಸಂದರ್ಭದಲ್ಲಿ ತಹಶೀಲ್ದಾರ್‌ ಕೆ.ಎ.ಉಮಾ, ತಾಪಂ ಅಧ್ಯಕ್ಷ ರಾಜು ಬಣಕಾರ, ಜಿಪಂ ಸದ್ಯರಾದ ಎಸ್‌. ಕೆ.ಕರಿಯಣ್ಣನವರ, ಪ್ರಕಾಶ ಬನ್ನಿಕೋಡ, ಶಿವರಾಜ ಹರಿಜನ, ಸುಮಿತ್ರಾ ಪಾಟೀಲ, ಮಾದೇವಕ್ಕ ಗೋಪಕ್ಕಳ್ಳಿ, ಸಿಪಿಐ ಆರ್‌.ಆರ್‌.ಪಾಟೀಲ, ಪಪಂ ಉಪಾಧ್ಯಕ್ಷೆ ಸುಧಾ ಚಿಂದಿ, ದಲಿತಪರ ಸಂಘಟನೆಗಳ ಮುಖಂಡರಾದ ಬಿ.ಆರ್‌ .ಪುಟ್ಟಣ್ಣನವರ, ಬಸವರಾಜ ಕಾಲ್ವಿಹಳ್ಳಿ, ಬಿ.ಎಚ್‌.ಬತ್ತಿಕೊಪ್ಪ, ಭರಮಪ್ಪ ಹೊಸಳ್ಳಿ, ಡಿ.ಟಿ.ತಿರಕಪ್ಪನವರ, ಮಾಲತೇಶ ಹೊಲಬಿಕೊಂಡ, ಸಮಾಜಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮೆಹಬೂಬ ಸಾಬ್‌ ನದಾಫ್‌ ಸೇರಿದಂತೆ ಪಪಂ ಸದಸ್ಯರು, ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು

 

 

Advertisement
Advertisement

Udayavani is now on Telegram. Click here to join our channel and stay updated with the latest news.

Next