Advertisement

ಗ್ರಾಮಗಳ ಸಮಗ್ರ ಅಭಿವೃದಿಗೆ ಶ್ರಮಿಸಿ: ಸಚಿವ ಪಾಟೀಲ

03:20 PM Jan 11, 2021 | Team Udayavani |

ಹಿರೇಕೆರೂರ: ಗ್ರಾಪಂ ನೂತನ ಸದಸ್ಯರು 5 ವರ್ಷಗಳ ಈ ಉತ್ತಮ ಅವಕಾಶ ಮಬಳಸಿಕೊಂಡು ಜವಾಬ್ದಾರಿಯಿಂದ ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ಎಲ್ಲರೂ ಶ್ರಮಿಸಬೇಕೆಂದು ಕೃಷಿ ಸಚಿವ ಬಿ.ಸಿ.ಪಾಟೀಲ ಹೇಳಿದರು.

Advertisement

ಪಟ್ಟಣದ ತರಳಬಾಳು ಸಾಂಸ್ಕೃತಿಕ ಕೇಂದ್ರದಲ್ಲಿ ಭಾನುವಾರ ಬಿಜೆಪಿ ತಾಲೂಕು ಘಟಕದಿಂದ ಆಯೋಜಿಸಿದ್ದ ಹಿರೇಕೆರೂರ ಮತ್ತು ರಟ್ಟಿಹಳ್ಳಿ ತಾಲೂಕಿನ ನೂತನ ಗ್ರಾಪಂ ಸದಸ್ಯರ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕೋವಿಡ್‌-19ರ ಸೋಂಕಿನ ಪರಿಣಾಮ ಗ್ರಾಪಂ ಚುನಾವಣೆ ನಡೆಯುವುದೇ ಅನುಮಾನ ಎಂಬ ಸ್ಥಿತಿ ನಿರ್ಮಾಣವಾಗಿತ್ತು. ಆದರೆ, ಸರ್ಕಾರ ಯಶಸ್ವಿಯಾಗಿ ಚುನಾವಣೆ ಮನಡೆಸಿದೆ. ಗ್ರಾಪಂ ಅಧ್ಯಕ್ಷರಿಗೆ ಹೆಚ್ಚಿನ ಅಧಿ  ಕಾರವಿದೆ. ನೂತನ ಗ್ರಾಪಂ ಸದಸ್ಯರು ಪಂಚಾಯತ್‌ ರಾಜ್‌ ಕಾಯ್ದೆಯ ಅಧ್ಯಯನ ಮಾಡುವ ಮೂಲಕ ಸದಸ್ಯರ ಹಕ್ಕು, ಕರ್ತವ್ಯ ಹಾಗೂ ಅಧಿಕಾರ ವ್ಯಾಪ್ತಿಯನ್ನು ತಿಳಿದುಕೊಳ್ಳಬೇಕು. ಆಗ ಮಾತ್ರ ನಿಮ್ಮನ್ನು ಯಾರೂ ಮೋಸಗೊಳಿಸಲು ಆಗುವುದಿಲ್ಲ ಎಂದು ಹೇಳಿದರು.

ಗ್ರಾಮ ಪಂಚಾಯಿತಿಗೆ ಬರುವ ಅನುದಾನ ಮತ್ತು ಯೋಜನೆಗಳನ್ನು ಸದುಪಯೊಗ ಪಡಿಸಿಕೊಂಡು ಅದಕ್ಕೆ ತಕ್ಕ ಕ್ರಿಯಾ ಯೋಜನೆಗಳನ್ನು ರೂಪಿಸಿ ಗ್ರಾಮಕ್ಕೆ ಬೇಕಾದ ಹೊಸ ಹೊಸ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ ಮೂಲಕ ಮಾದರಿ ಗ್ರಾಮಗಳನ್ನಾಗಿಸಬೇಕು ಎಂದು ತಿಳಿಸಿದರು.

ಚುನಾವಣೆಗೆ ಮೊದಲು ರಾಜ್ಯದಲ್ಲಿ ಬಿಜೆಪಿ ಗ್ರಾಮ ಸ್ವರಾಜ್ಯ ಸಮಾವೇಶ ನಡೆಸಿದ್ದರಿಂದ ರಾಜ್ಯದಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲಲು ಕಾರಣವಾಯಿತು.ದಕ್ಷಿಣ ಕರ್ನಾಟಕದಲ್ಲಿಯೂ ಬಿಜೆಪಿ ಹೆಚ್ಚು ಸ್ಥಾನ ಗೆಲ್ಲಲು ಸಾಧ್ಯವಾಯಿತು ಎಂದರು. ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಯು.ಬಿ.ಬಣಕಾರ ಪ್ರಾಸ್ತಾವಿಕವಾಗಿ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆ ಅನಿವಾರ್ಯ. ಚುನಾವಣೆ ಸಂದರ್ಭದಲ್ಲಿ ಮಾತ್ರ ಚುನಾವಣೆ ಮಾಡಬೇಕು. ಅದನ್ನು ಎಲ್ಲರೂ ಕ್ರೀಡಾ ಮನೋಭಾವದಿಂದ ಸ್ವೀಕರಿಸಬೇಕು. ನರೇಂದ್ರ ಮೋದಿ ಅವರ ಗ್ರಾಮಾಭಿವೃದ್ಧಿಯ ಕನಸು ನನಸು ಮಾಡಲು ಎಲ್ಲರೂ ಒಂದಾಗಿ ಕೆಲಸ ಮಾಡಬೇಕು ಎಂದರು.

ಇದನ್ನೂ ಓದಿ:ಮಹಿಳೆಯರು ಪ್ರಗತಿಯತ್ತ ಮುನ್ನುಗ್ಗಲಿ

Advertisement

ಬಿಜೆಪಿ ತಾಲೂಕು ಘಟಕದ ಅಧ್ಯಕ್ಷ ಷಣ್ಮುಖಯ್ಯ ಮಳಿಮಠ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಘಟಕದ ಅಧ್ಯಕ್ಷ ಸಿದ್ದರಾಜ ಕಲಕೋಟಿ, ಉಪಾಧ್ಯಕ್ಷ ದೊಡ್ಡಗೌಡ ಪಾಟೀಲ, ಪಾಲಾಕ್ಷಗೌಡ ಪಾಟೀಲ, ಟಿಎಪಿಸಿಎಂಎಸ್‌ ಅಧ್ಯಕ್ಷ ಎಸ್‌.ಎಸ್‌ .ಪಾಟೀಲ, ಎಪಿಎಂಸಿ ಅಧ್ಯಕ್ಷ ನಾರಾಯಣಪ್ಪ ಗೌರಕ್ಕನವರ, ಪಟ್ಟಣ ಪಂಚಾಯಿತಿ ಅಧ್ಯಕ್ಷ ಗುರುಶಾಂತ ಎತ್ತಿನಹಳ್ಳಿ, ತಾಪಂ ಅಧ್ಯಕ್ಷ ರಾಜು ಬಣಕಾರ, ಜಿಪಂ ಸದಸ್ಯರಾದ ಎನ್‌.ಎಂ.ಈಟೇರ, ಶಿವರಾಜ ಹರಿಜನ, ಸುಮಿತ್ರಾ ಪಾಟೀಲ, ಹನುಮಂತಗೌಡ ಭರಮಣ್ಣನವರ, ಲಿಂಗರಾಜ ಚಪ್ಪರದಹಳ್ಳಿ, ಮಹೇಶ ಗುಬ್ಬಿ, ಗಣೇಶಗೌಡ ಪಾಟೀಲ ಮತ್ತಿತರರು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next