Advertisement
ನಗರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಜಿಲ್ಲಾ ಅಭಿವೃದ್ಧಿ ಸಮನ್ವಯ ಉಸ್ತುವಾರಿ ಸಮಿತಿ (ದಿಶಾ) ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಲಜೀವನ ಯೋಜನೆಯಡಿ ಮನೆ, ಅಂಗನವಾಡಿ ಹಾಗೂ ಶಾಲೆಗಳಿಗೆ ನಳದ ನೀರು ಸಂಪರ್ಕ ಕಲ್ಪಿಸಲಾಗುತ್ತಿದೆ. ಇಂತಹ ದೊಡ್ಡ ಯೋಜನೆ ಸಮರ್ಪಕವಾಗಿ ಬಳಕೆಯಾಗಬೇಕು.
Related Articles
Advertisement
2,500 ಎಕರೆ ಕ್ಲಸ್ಟರ್ ಪ್ರದೇಶ ವಿಸ್ತರಿಸಲಾಗಿದ್ದು, 1950 ಫಲಾನುಭವಿಗಳು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡಿದ್ದಾರೆ. 1.25 ಲಕ್ಷ ಮಾನವ ದಿನಗಳನ್ನು ಸೃಜನೆ ಮಾಡಲಾಗಿದೆ ಹಾಗೂ 361.25 ಲಕ್ಷ ರೂ. ವೆಚ್ಚ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಸಾಮಾಜಿಕ ಭದ್ರತಾ ಯೋಜನೆಯಡಿ ಮಾಸಾಶನ ಪಡೆಯುತ್ತಿರುವ ಫಲಾನುಭವಿಗಳಿಗೆ ಆಯಾ ತಿಂಗಳಲ್ಲಿ ಮಾಸಾಶನ ದೊರೆಯುವಂತೆ ಕ್ರಮ ವಹಿಸಬೇಕು. ಘನತ್ಯಾಜ್ಯ ಹಾಗೂ ದ್ರವತ್ಯಾಜ್ಯ ನಿರ್ವಹಣೆಗೆ ಸೂಕ್ತ ರೀತಿಯಲ್ಲಿ ಕ್ರಮ ಕೈಗೊಳ್ಳಲು ವ್ಯವಸ್ಥೆಯಾಗಬೇಕು. ಜಿಲ್ಲೆಯ ನಿರುದ್ಯೋಗಿ ಯುವಕ-ಯುವತಿಯರಿಗೆ ಬೇಡಿಕೆ ಇರುವ ಕ್ಷೇತ್ರಗಳಲ್ಲಿ ತರಬೇತಿ ನೀಡಿ ಉದ್ಯೋಗ ಕಲ್ಪಿಸುವ ಕೆಲಸವಾಗಬೇಕೆಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕೃಷಿ, ತೋಟಗಾರಿಕೆ, ಆರೋಗ್ಯ, ಹೆಸ್ಕಾಂ ಸೇರಿದಂತೆ ವಿವಿಧ 18 ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದ ಸಂಸದರು, ಅರ್ಹ ಫಲಾನುಭವಿಗಳಿಗೆ ಯೋಜನೆಗಳು ತಲುಪಬೇಕು ಹಾಗೂ ನಿಗದಿತ ಗುರಿ ಸಾಧಿಸುವಂತೆ ಸೂಚನೆ ನೀಡಿದರು. ಸಭೆಯಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿ ಕಾರಿ ಮಹಮ್ಮದ ರೋಷನ್, ಜಿಪಂ ಉಪ ಕಾರ್ಯದರ್ಶಿ ಎಸ್.ಬಿ.ಮುಳ್ಳಳ್ಳಿ ಇತರರಿದ್ದರು.
ಜಲಜೀವನ್ ಯೋಜನೆಯ ಕಾಮಗಾರಿಗೆ 400 ಕೋಟಿ ವೆಚ್ಚ ಮಾಡಲಾಗುತ್ತಿದ್ದು, ಇಂತಹ ದೊಡ್ಡ ಯೋಜನೆ ಸಮರ್ಪಕವಾಗಿ ಬಳಕೆಯಾಗಬೇಕು. ಮುಂದಿನ ದಿನಗಳಲ್ಲಿ ಕಾಮಗಾರಿ ದುರಸ್ತಿಗೆ ಬೇಕಾದ ಹಣಕಾಸಿನ ಕ್ರಿಯಾಯೋಜನೆ ತಯಾರಿಸಿ, ಬಹಳ ಬದ್ಧತೆಯಿಂದ ಕೆಲಸ ನಿರ್ವಹಿಸಬೇಕು.ಶಿವಕುಮಾರ ಉದಾಸಿ, ಸಂಸದರು