Advertisement

ಜಲಜೀವನ ಮಿಷನ್‌ ಯೋಜನೆ ಯಶಸ್ಸಿಗೆ ಶ್ರಮಿಸಿ

06:13 PM Jan 22, 2022 | Team Udayavani |

ಹಾವೇರಿ: ಜಿಲ್ಲೆಯಲ್ಲಿ ಜಲಜೀವನ ಮಿಷನ್‌ ಯೋಜನೆಗೆ ದೊಡ್ಡ ಪ್ರಮಾಣದಲ್ಲಿ ಹಣ ವೆಚ್ಚ ಮಾಡಲಾಗುತ್ತಿದ್ದು, ದೂರದೃಷ್ಟಿಯಿಂದ ಉತ್ತಮ ರೀತಿಯಲ್ಲಿ ಕೆಲಸ ನಿರ್ವಹಿಸಬೇಕು ಎಂದು ಸಂಸದ ಶಿವಕುಮಾರ ಉದಾಸಿ ಅ ಧಿಕಾರಿಗಳಿಗೆ ಸೂಚನೆ ನೀಡಿದರು.

Advertisement

ನಗರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಜಿಲ್ಲಾ ಅಭಿವೃದ್ಧಿ ಸಮನ್ವಯ ಉಸ್ತುವಾರಿ ಸಮಿತಿ (ದಿಶಾ) ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಲಜೀವನ ಯೋಜನೆಯಡಿ ಮನೆ, ಅಂಗನವಾಡಿ ಹಾಗೂ ಶಾಲೆಗಳಿಗೆ ನಳದ ನೀರು ಸಂಪರ್ಕ ಕಲ್ಪಿಸಲಾಗುತ್ತಿದೆ. ಇಂತಹ ದೊಡ್ಡ ಯೋಜನೆ ಸಮರ್ಪಕವಾಗಿ ಬಳಕೆಯಾಗಬೇಕು.

ಈ ಯೋಜನೆಯ ಕಾಮಗಾರಿಗೆ 400 ಕೋಟಿ ವೆಚ್ಚ ಮಾಡಲಾಗುತ್ತಿದ್ದು, ಇದರ ಬಳಕೆ ಎಷ್ಟು ದಿನ ಬರಬಹುದು ಹಾಗೂ ಮುಂದಿನ ದಿನಗಳಲ್ಲಿ ಕಾಮಗಾರಿ ದುರಸ್ತಿಗೆ ಬೇಕಾದ ಹಣಕಾಸಿನ ಕ್ರಿಯಾಯೋಜನೆಯನ್ನು ತಯಾರಿಸಬೇಕು. ಬಹಳ ಬದ್ಧತೆಯಿಂದ ಕೆಲಸ ನಿರ್ವಹಿಸುವುದು ಮುಖ್ಯವಾಗಿದೆ ಎಂದು ತಿಳಿಸಿದರು.

ತೋಟಗಾರಿಕೆ ಪ್ರದೇಶ ವಿಸ್ತೀರ್ಣಕ್ಕೆ ಪ್ರೋತ್ಸಾಹಿಸಬೇಕು. ಪ್ರಥಮ ಬಾರಿಗೆ ಶುಂಠಿ ಬೆಳೆಯಲು 31 ಸಾವಿರ ರೂ. ಸಹಾಯಧನ ಸೌಲಭ್ಯವಿದೆ. ಉದ್ಯೋಗ ಖಾತ್ರಿ ಯೋಜನೆಯಡಿ ಕೃಷಿ ಹಾಗೂ ತೋಟಗಾರಿಕೆ ಚಟುವಟಿಕೆಗಳಿಗೆ ಆದ್ಯತೆ ನೀಡಬೇಕು ಎಂದು ಸೂಚನೆ ನೀಡಿದರು.

ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಹಮ್ಮದ ರೋಷನ್‌ ಮಾತನಾಡಿ, ಡಿಸೆಂಬರ್‌ ಅಂತ್ಯದವೆರೆಗ 49,11,980 ಮಾನವ ದಿನಗಳನ್ನು ಸೃಜಿಸಲಾಗಿದೆ ಹಾಗೂ 19353.42 ಲಕ್ಷ ರೂ. ಆರ್ಥಿಕ ಪ್ರಗತಿ ಸಾಧಿಸಲಾಗಿದೆ. ಜಿಲ್ಲೆಯಲ್ಲಿ ಮಹಾತ್ಮಗಾಂಧಿ  ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ ಹಾಗೂ ತೋಟಗಾರಿಕೆ ಇಲಾಖೆಯ ಒಗ್ಗೂಡಿಸುವಿಕೆಯಡಿ ತೋಟಗಾರಿಕೆ ಬೆಳೆಗಳವಾರು 19 ಕ್ಲಸ್ಟರ್‌ಗಳನ್ನು ರಚಿಸಲಾಗಿದೆ. ತೋಟಗಾರಿಕೆ ಬೆಳೆಗಳಾದ ಅಡಕೆ, ಬಾಳೆ, ಪೇರಲೆ, ಪಪ್ಪಾಯ ಮತ್ತು ವೀಳ್ಯದೆಲೆ ಬೆಳೆಗಳಿಗೆ ಉತ್ತೇಜನ ನೀಡಲಾಗುತ್ತಿದೆ.

Advertisement

2,500 ಎಕರೆ ಕ್ಲಸ್ಟರ್‌ ಪ್ರದೇಶ ವಿಸ್ತರಿಸಲಾಗಿದ್ದು, 1950 ಫಲಾನುಭವಿಗಳು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡಿದ್ದಾರೆ. 1.25 ಲಕ್ಷ ಮಾನವ ದಿನಗಳನ್ನು ಸೃಜನೆ ಮಾಡಲಾಗಿದೆ ಹಾಗೂ 361.25 ಲಕ್ಷ ರೂ. ವೆಚ್ಚ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಸಾಮಾಜಿಕ ಭದ್ರತಾ ಯೋಜನೆಯಡಿ ಮಾಸಾಶನ ಪಡೆಯುತ್ತಿರುವ ಫಲಾನುಭವಿಗಳಿಗೆ ಆಯಾ ತಿಂಗಳಲ್ಲಿ ಮಾಸಾಶನ ದೊರೆಯುವಂತೆ ಕ್ರಮ ವಹಿಸಬೇಕು. ಘನತ್ಯಾಜ್ಯ ಹಾಗೂ ದ್ರವತ್ಯಾಜ್ಯ ನಿರ್ವಹಣೆಗೆ ಸೂಕ್ತ ರೀತಿಯಲ್ಲಿ ಕ್ರಮ ಕೈಗೊಳ್ಳಲು ವ್ಯವಸ್ಥೆಯಾಗಬೇಕು. ಜಿಲ್ಲೆಯ ನಿರುದ್ಯೋಗಿ ಯುವಕ-ಯುವತಿಯರಿಗೆ ಬೇಡಿಕೆ ಇರುವ ಕ್ಷೇತ್ರಗಳಲ್ಲಿ ತರಬೇತಿ ನೀಡಿ ಉದ್ಯೋಗ ಕಲ್ಪಿಸುವ ಕೆಲಸವಾಗಬೇಕೆಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕೃಷಿ, ತೋಟಗಾರಿಕೆ, ಆರೋಗ್ಯ, ಹೆಸ್ಕಾಂ ಸೇರಿದಂತೆ ವಿವಿಧ 18 ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದ ಸಂಸದರು, ಅರ್ಹ ಫಲಾನುಭವಿಗಳಿಗೆ ಯೋಜನೆಗಳು ತಲುಪಬೇಕು ಹಾಗೂ ನಿಗದಿತ ಗುರಿ ಸಾಧಿಸುವಂತೆ ಸೂಚನೆ ನೀಡಿದರು. ಸಭೆಯಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿ ಕಾರಿ ಮಹಮ್ಮದ ರೋಷನ್‌, ಜಿಪಂ ಉಪ ಕಾರ್ಯದರ್ಶಿ ಎಸ್‌.ಬಿ.ಮುಳ್ಳಳ್ಳಿ ಇತರರಿದ್ದರು.

ಜಲಜೀವನ್‌ ಯೋಜನೆಯ ಕಾಮಗಾರಿಗೆ 400 ಕೋಟಿ ವೆಚ್ಚ ಮಾಡಲಾಗುತ್ತಿದ್ದು, ಇಂತಹ ದೊಡ್ಡ ಯೋಜನೆ ಸಮರ್ಪಕವಾಗಿ ಬಳಕೆಯಾಗಬೇಕು. ಮುಂದಿನ ದಿನಗಳಲ್ಲಿ ಕಾಮಗಾರಿ ದುರಸ್ತಿಗೆ ಬೇಕಾದ ಹಣಕಾಸಿನ ಕ್ರಿಯಾಯೋಜನೆ ತಯಾರಿಸಿ, ಬಹಳ ಬದ್ಧತೆಯಿಂದ ಕೆಲಸ ನಿರ್ವಹಿಸಬೇಕು.
ಶಿವಕುಮಾರ ಉದಾಸಿ, ಸಂಸದರು

Advertisement

Udayavani is now on Telegram. Click here to join our channel and stay updated with the latest news.

Next