Advertisement

ರಂಗಭೂಮಿ ಉಳಿವಿಗೆ ಶ್ರಮಿಸಿ

08:01 PM Jan 01, 2022 | Team Udayavani |

ದಾವಣಗೆರೆ: ರಂಗಭೂಮಿ ಕಲಾವಿದರಿಗೆ ಪ್ರೋತ್ಸಾಹಿಸುವ ಮೂಲಕ ಕಲೆ, ಸಂಸ್ಕೃತಿ ಉಳಿಸುವಂತಾಗಬೇಕು ಎಂದು ಕೈಗಾರಿಕೋದ್ಯಮಿ ಅಥಣಿ ಎಸ್‌. ವೀರಣ್ಣ ಹೇಳಿದರು. ಚಿತ್ತರಗಿಯ ಶ್ರೀಕುಮಾರ ವಿಜಯ ನಾಟಕ ಸಂಘದ ಕಲಾವಿದರು ಪ್ರದರ್ಶಿಸಿದ ಪಿ.ಜಿ. ಧುತ್ತರಗಿ ವಿರಚಿತ “ಮುದುಕನ ಮದುವೆ’ ಹಾಸ್ಯಭರಿತ ನಾಟಕ ಪ್ರದರ್ಶನ ಉದ್ಘಾಟಿಸಿ ಅವರು ಮಾತನಾಡಿದರು.

Advertisement

ಕಲಾವಿದರು ದೇಶ, ರಾಜ್ಯವನ್ನು ಪ್ರತಿಬಿಂಬಿಸುವಂತಹ ಕಲೆ, ಸಂಸ್ಕೃತಿಯನ್ನು ನಾಟಕದ ಮೂಲಕ ಜನಸಾಮಾನ್ಯರಿಗೆ ತಲುಪಿಸುವ ಕೆಲಸ ಮಾಡುತ್ತಿರುವವರನ್ನು ಪ್ರೋತ್ಸಾಹಿಸುವ ಮೂಲಕ ಕಲೆಯನ್ನು ಉಳಿಸಬೇಕು ಎಂದರು. ಜಿಲ್ಲಾ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ದಿನೇಶ್‌ ಕೆ. ಶೆಟ್ಟಿ ಮಾತನಾಡಿ, ಶಾಸಕ ಡಾ| ಶಾಮನೂರು ಶಿವಶಂಕರಪ್ಪ, ಮಾಜಿ ಸಚಿವ ಎಸ್‌.ಎಸ್‌.ಮಲ್ಲಿಕಾರ್ಜುನ್‌ ಕಲಾವಿದರನ್ನು ಸದಾ ಪ್ರೋತ್ಸಾಹಿಸುತ್ತಿದ್ದಾರೆ ಎಂದರು.

ರಾಜ್ಯ ವೃತ್ತಿ ಕಲಾವಿದರ ಸಂಘದ ಅಧ್ಯಕ್ಷ ಎ. ಭದ್ರಪ್ಪ ಅಧ್ಯಕ್ಷತೆ ವಹಿಸಿದ್ದರು. ಮಹಾನಗರ ಪಾಲಿಕೆ ವಿಪಕ್ಷ ನಾಯಕ ಎ. ನಾಗರಾಜ್‌, ಮಹಿಳಾ ಕಾಂಗ್ರೆಸ್‌ ಜಿಲ್ಲಾ ಅಧ್ಯಕ್ಷೆ ಅನಿತಾಬಾಯಿ ಮಾಲತೇಶ್‌, ಆಶಾ ಮುರಳಿ, ಕವಿತಾ ಚಂದ್ರಶೇಖರ್‌, ದಾಯಣಮ್ಮ, ರಾಜೇಶ್ವರಿ, ಶುಭಮಂಗಳ, ರಾಧಾಬಾಯಿ ಇದ್ದರು.

 

Advertisement

Udayavani is now on Telegram. Click here to join our channel and stay updated with the latest news.

Next