Advertisement
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಪ.ಜಾ., ಪ.ಪಂ. ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈ ಯೋಜನೆಯಡಿ ಬಿಡುಗಡೆಯಾಗುವ ಅನುದಾನ ದುರುಪಯೋಗವಾಗದಂತೆ ನಿಗಾ ವಹಿಸಬೇಕು. ನಿಗದಿತ ಕಾಲ ಮಿತಿಯಲ್ಲಿಯೇ ಕಾಮಗಾರಿ ಟೆಂಡರ್ ಕರೆದು, ಪೂರ್ಣಗೊಳಿಸುವ ಮೂಲಕ ಅನುದಾನ ಸರಕಾರಕ್ಕೆ ವಾಪಸ್ಸಾಗದಂತೆ ಕ್ರಮ ವಹಿಸಬೇಕು. ಯೋಜನೆಯಡಿ ಕೈಗೊಳ್ಳಲಾದ ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕು. ಇಲಾಖಾವಾರು ಸಾಧಿಸಿದ ಪ್ರಗತಿ ವಿವರವನ್ನು ಇಲಾಖೆ ಅಂತರ್ಜಾಲದಲ್ಲಿ ತಪ್ಪದೇ ಅಪ್ ಡೇಟ್ ಮಾಡಬೇಕೆಂದು ಆದೇಶಿಸಿದರು.
Related Articles
Advertisement
ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಮುದುಕಮ್ಮನವರ ಮಾತನಾಡಿ, ಸಕಾಲ ಯೋಜನೆಯಡಿ ಪ್ರಗತಿ ಸಾಧಿಸಲು ಸಂಬಂಧಿತ ಇಲಾಖೆ ಅಧಿಕಾರಿಗಳು ಹೆಚ್ಚಿನ ಆಸಕ್ತಿ ವಹಿಸಬೇಕು. ಅರ್ಜಿ ವಿಲೇವಾರಿಗೆ ವಿನಾಕಾರಣ ವಿಳಂಬ ಮಾಡಬಾರದು ಎಂದು ಸೂಚಿಸಿದರು.
ಜೀತ ಪದ್ಧತಿ ನಿಷೇಧ: ಸರಕಾರ ಈಗಾಗಲೇ ಜೀತ ಪದ್ಧತಿಯನ್ನು ನಿಷೇಧಿಸಿದ್ದು, ಜೀತ ಪದ್ಧತಿಯ ಸಂಪೂರ್ಣ ನಿರ್ಮೂಲನೆಯಾಗಬೇಕು. ಈ ನಿಟ್ಟಿನಲ್ಲಿ ಸಮಿತಿ ಕಾರ್ಯಪ್ರವೃತ್ತವಾಗಬೇಕು. ಜೀತ ಪದ್ಧತಿಯಿಂದ ಬಿಡುಗಡೆಯಾದ ಕಾರ್ಮಿಕರಿಗೆ ಸರಕಾರದಿಂದ ದೊರೆಯುವ ವಸತಿ, ವಿದ್ಯಾಭ್ಯಾಸ ಹಾಗೂ ವೈದ್ಯಕೀಯ ಸೌಲಭ್ಯಗಳನ್ನು ಕಲ್ಪಿಸಬೇಕೆಂದು ಅಪರ ಜಿಲ್ಲಾಧಿಕಾರಿಗಳು ತಿಳಿಸಿದರು.
ಜಿಪಂ ಸಿಇಒ ಡಾ|ಸುಶೀಲಾ ಬಿ. ಮಾತನಾಡಿ, ಜೀತದಾಳುಗಳನ್ನು ಗುರುತಿಸಿದ ನಂತರ ಅವರಿಗೆ ಶಿಕ್ಷಣ, ವಸತಿ ಹಾಗೂ ವೈದ್ಯಕೀಯ ವೆಚ್ಚ ಹೀಗೆ ಸರ್ಕಾರದ ಸೌಲಭ್ಯಗಳು ದೊರೆಯುವಂತೆ ಅಧಿಕಾರಿಗಳು ಕ್ರಮ ವಹಿಸಬೇಕೆಂದು ಹೇಳಿದರು.
ವಿವಿಧ ಇಲಾಖೆಗಳಲ್ಲಿನ ನಿರುಪಯುಕ್ತ ವಾಹನಗಳ ವಿಲೇವಾರಿಗೆ ಸೂಕ್ತ ಕ್ರಮ ಜರುಗಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು ಸೂಚನೆ ನೀಡಿದರು.
ಸಭೆಯಲ್ಲಿ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಜಿಯಾವುಲ್ಲಾ ಕೆ., ತೋಟಗಾರಿಕೆ ಉಪನಿರ್ದೇಶಕ ಬಿರಾದಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ ಬಿ., ಕ್ರೀಡಾ ಮತ್ತು ಯುವಜನ ಸಬಲೀಕರಣ ಇಲಾಖೆಯ ಸಹಾಯಕ ನಿರ್ದೇಶಕ ಶರಣು ಗೋಗೇರಿ, ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.