Advertisement

ಎಸ್‌ಸಿಪಿ-ಟಿಎಸ್‌ಪಿ ಯೋಜನೆ ಅನುಷ್ಠಾನಕ್ಕೆ ಶ್ರಮಿಸಿ

02:44 PM Jul 08, 2017 | Team Udayavani |

ಬೀದರ: ವಿಶೇಷ ಘಟಕ ಯೋಜನೆ (ಎಸ್‌ಸಿಪಿ) ಹಾಗೂ ಗಿರಿಜನ ಉಪಯೋಜನೆ (ಟಿಎಸ್‌ಪಿ) ಮತ್ತು ಹೈ.ಕ. ಪ್ರದೇಶಾಭಿವೃದ್ಧಿ ಕಾಮಗಾರಿಗಳಿಗೆ ಮೀಸಲಿಟ್ಟ ಅನುದಾನದ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಅಧಿಕಾರಿಗಳು ಶ್ರಮಿಸಬೇಕು ಎಂದು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಕೆ.ರತ್ನ ಪ್ರಭ ಹೇಳಿದರು.

Advertisement

ನಗರದ ಜಿಪಂ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜೀತದಾಳುಗಳ ಸಮೀಕ್ಷೆ, ವಸತಿ ಯೋಜನೆಗಳು, ಎಸ್‌ಸಿಪಿ ಮತ್ತು ಟಿಎಸ್‌ಪಿ
ಸೇರಿದಂತೆ ವಿವಿಧ ಯೋಜನಾ ಕಾರ್ಯಕ್ರಮಗಳ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ಸಭೆ ನಡೆಸಿ ಅವರು ಮಾತನಾಡಿದರು. ಎಸ್‌ಸಿಪಿ ಮತ್ತು ಟಿಎಸ್‌ಪಿ ಯೋಜನೆಗಳ ಕಾರ್ಯಕ್ರಮಗಳಿಗೆ ಸರ್ಕಾರ 27,000 ಕೋಟಿ ರೂ. ಮೀಸಲಿಟ್ಟಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡ ಸೇರಿದಂತೆ ಹಿಂದುಳಿದ ವರ್ಗಗಳ ಸಮುದಾಯದವರ ಏಳ್ಗೆಗೆ ಕಾರ್ಯಕ್ರಮಗಳನ್ನು ರೂಪಿಸಲು ಹಣದ ಕೊರತೆಯಿಲ್ಲ. ಅವರಿಗಾಗಿ ಮೀಸಲಿಟ್ಟಿರುವ ಅನುದಾನ ಸದ್ಬಳಕೆಯಾಗುವ ನಿಟ್ಟಿನಲ್ಲಿ ಅಧಿಕಾರಿಗಳು ಕಾಳಜಿ ವಹಿಸಿ ಕೆಲಸ ಮಾಡಬೇಕಿದೆ ಎಂದರು.

ಜಿಲ್ಲೆಯು ಶೈಕ್ಷಣಿಕವಾಗಿ ಇನ್ನೂ ಸುಧಾರಿಸಬೇಕಿದೆ. ಎಸ್‌ಸಿ ಹಾಗೂ ಎಸ್‌ಟಿ ಸಮುದಾಯ ದವರು ಶೈಕ್ಷಣಿಕವಾಗಿ ಇನ್ನೂ ಹಿಂದುಳಿದಿದ್ದು ಅವರನ್ನು ಸಾಕ್ಷರರನ್ನಾಗಿಸುವ ದೊಡ್ಡ ಜವಾಬ್ದಾರಿ ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗಳ ಮೇಲಿದೆ. ಶಾಲೆಯಿಂದ ಹೊರಗುಳಿದ ಎಸ್‌ಸಿ ಹಾಗೂ ಎಸ್‌ಟಿ ಮಕ್ಕಳನ್ನು ಗುರುತಿಸಿ ಅವರನ್ನು ಶಾಲೆಗೆ ಸೇರಿಸುವ ನಿಟ್ಟಿನಲ್ಲಿ ಶಾಲಾ ಹಂತದಲ್ಲಿ ವಿಶೇಷ ದಾಖಲಾತಿ ಆಂದೋಲನವು ಜನಾಂದೋಲನ ಮಾದರಿಯಲ್ಲಿ ನಡೆಯಬೇಕು. ಈ ಆಂದೋಲ
ನಕ್ಕೆ ಆಯಾ ತಾಲೂಕಿನಲ್ಲಿ ಸಂಸದರು, ಶಾಸಕರು ಸೇರಿದಂತೆ ಪಂಚಾಯಿತಿಯ ಪ್ರತಿನಿಧಿಗಳ ಸಹಕಾರ ಪಡೆಯಬೇಕು ಎಂದರು.

ಜಿಲ್ಲಾಧಿಕಾರಿಯವರ ನೇತೃತ್ವದಲ್ಲಿ ಜಿಲ್ಲೆಯಲ್ಲಿ ಅಲೆಮಾರಿ ಸಮುದಾಯದವರಿಗೆ ವಿಶೇಷ ಕ್ಯಾಂಪ್‌ ಮಾಡಿ ಅವರಿಗೆ ಆಧಾರ್‌ ಕಾರ್ಡ್‌
ನೀಡಿದ್ದಲ್ಲದೇ ಅವರಿಗಾಗಿ ಎರಡು ಎಕರೆ ಜಮೀನು ಗುರುತಿಸಲಾಗಿದೆ. ಆ ಪ್ರದೇಶದಲ್ಲಿ ಮನೆಗಳ ನಿರ್ಮಾಣ ಸೇರಿದಂತೆ ಅಲ್ಲಿ ರಸ್ತೆ,
ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕಿದೆ. ಅಲೆಮಾರಿ ಸಮುದಾಯದವರ ವಿಷಯವನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಅಗತ್ಯ ವ್ಯವಸ್ಥೆ ಮಾಡುವುದಾಗಿ ತಿಳಿಸಿದರು.

ನಗರ ಪ್ರದೇಶದಲ್ಲಿ ಸೂರಿಲ್ಲದಿರುವ ಎಸ್‌ಸಿ- ಎಸ್‌ಟಿ ಸಮುದಾಯವರನ್ನು ಗುರುತಿಸಿ ಅವರಿಗೆ ಮನೆ ಕೊಡಿಸುವ ವ್ಯವಸ್ಥೆ ಮಾಡಲಾಗುತ್ತಿದೆ  ಎಂದು ಜಿಲ್ಲಾ ಧಿಕಾರಿ ಡಾ| ಮಹಾದೇವ ತಿಳಿಸಿದರು. ಗ್ರಾಮೀಣ ಭಾಗದಲ್ಲಿ ಅರ್ಹ ಎಸ್‌ಸಿ ಹಾಗೂ ಎಸ್‌ಟಿ ಸಮುದಾಯದ ಎಲ್ಲರಿಗೂ ಮನೆ ದೊರಕಿಸಿ ಕೊಡಲಾಗುತ್ತಿದೆ ಎಂದು ಜಿಪಂ ಸಿಇಒ ಡಾ| ಸೆಲ್ವಮಣಿ ಆರ್‌. ಹೇಳಿದರು. ಹೈ.
ಕ. ಅಭಿವೃದ್ಧಿ ಮಂಡಳಿಯ ಅನುದಾನದಲ್ಲಿ ಬೀದರ ಜಿಲ್ಲೆಯಲ್ಲಿ ಒಟ್ಟು 445 ಕಾಮಗಾರಿಗಳು ಪೂರ್ಣಗೊಂಡಿವೆ. 189 ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

Advertisement

ಅಪರ ಜಿಲ್ಲಾಧಿಕಾರಿ ಡಾ| ಡಿ.ಷಣ್ಮುಖ, ಸಹಾಯಕ ಆಯುಕ್ತರಾದ ಶಿವಕುಮಾರ  ಶೀಲವಂತ, ಶರಣಬಸಪ್ಪ ಕೊಟಪ್ಪಗೋಳ,
ವಿವಿಧ ತಾಲೂಕುಗಳ ತಹಶೀಲ್ದಾರರು ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು. ಅನುದಾನ ಹೆಚ್ಚಳ ಜಮೀನು ಹೊಂದಿರದ ಪರಿಶಿಷ್ಟ ಜಾತಿ- ಪಂಗಡದ ಜನರಿಗೆ ಜಮೀನು ಖರೀದಿಸಲು ಈ ಹಿಂದೆ 3.5 ಲಕ್ಷ ಇದ್ದ ಅನುದಾನವನ್ನು ಸರ್ಕಾರ ಈಗ
15 ಲಕ್ಷ ರೂ.ವರೆಗೆ ಹೆಚ್ಚಳ ಮಾಡಿದೆ. ಫಲಾನುಭವಿಗಳನ್ನು ಆಯ್ಕೆ ಮಾಡಿದ ನಂತರ ಅಧಿ ಕಾರಿಗಳು ದೊಡ್ಡ ಕಾರ್ಯಕ್ರಮ ಆಯೋಜಿಸಿ ಶಾಸಕರು, ಜನಪ್ರತಿನಿಧಿಗಳನ್ನು ಆಮಂತ್ರಿಸಿ ಯೋಜನೆಯ ಲಾಭವನ್ನು ಅರ್ಹರಿಗೆ ತಲುಪಿಸಬೇಕು.
ಕೆ. ರತ್ನಪ್ರಭಾ ಸರ್ಕಾರದ ಅಪರ ಕಾರ್ಯದರ್ಶಿ

Advertisement

Udayavani is now on Telegram. Click here to join our channel and stay updated with the latest news.

Next