Advertisement
ಈ ಬಾರಿ 13ಕ್ಕೆ 13 ವಾರ್ಡುಗಳಲ್ಲಿ ಗೆಲುವು ಸಾಧಿಸುವ ಮೂಲಕ ಪಟ್ಟಣ ಕಾಂಗ್ರೆಸ್‌ನ ಭದ್ರಕೋಟೆ ಎಂಬುದನ್ನು ಸಾಬೀತುಪಡಿಸಬೇಕು ಎಂದು ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಧ್ಯಕ್ಷ ಹಾಗೂ ಶಾಸಕ ನರೇಂದ್ರ ರಾಜುಗೌಡ ಹೇಳಿದರು.
Related Articles
Advertisement
ಜಿಪಂ ಸದಸ್ಯ ಬಸವರಾಜು ಮಾತನಾಡಿ, ಹನೂರು ಪಟ್ಟಣವನ್ನು ತಾಲೂಕು ಕೇಂದ್ರವನ್ನಾಗಿ ಮಾಡಬೇಕು ಎಂದು ಕಳೆದ 30 ವರ್ಷಗಳಿಂದಲೂ ಶ್ರಮಿಸಲಾಗುತಿತ್ತು. ಆ ಕನಸು ಇದೀಗ ಶಾಸಕ ನರೇಂದ್ರ ಅವರ ಅವಿರತ ಶ್ರಮದಿಂದ ಸಾಕಾರವಾಗಿದೆ ಎಂದರು.
ಕಾಂಗ್ರೆಸ್ ಸೋಲಿಸಲು ಕಾಂಗ್ರೆಸ್‌ನವರಿಂದ ಮಾತ್ರ ಸಾಧ್ಯ: ಹನೂರು ಕ್ಷೇತ್ರ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಸೋಲಿಸಲು ಕಾಂಗ್ರೆಸ್‌ನವರಿಂದ ಮಾತ್ರ ಸಾಧ್ಯವೇ ಹೊರತು ಬಿಜೆಪಿ ಅಥವಾ ಜೆಡಿಎಸ್ ಪಕ್ಷದವರಿಂದ ಸಾಧ್ಯವಿಲ್ಲ.
ಆದುದರಿಂದ ಕಾಂಗ್ರೆಸ್ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ವೈಯಕ್ತಿಕ ದ್ವೇಷ ಅಥವಾ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಪಕ್ಷದ ಅಭ್ಯರ್ಥಿಗಳ ಪರ ಕಾರ್ಯನಿರ್ವಹಿಸಿದಲ್ಲಿ 13ಕ್ಕೆ 13 ಸ್ಥಾನಗಳನ್ನೂ ಗೆಲ್ಲಬಹುದು ಎಂದು ತಿಳಿಸಿದರು.
ಚುನಾವಣಾ ವೀಕ್ಷಕ ಬಿ.ಕೆ.ರವಿಕುಮಾರ್ ಮಾತನಾಡಿ, ಪಕ್ಷದ ಕಚೇರಿಯಲ್ಲಿ ಇಂದಿನಿಂದಲೇ ಅರ್ಜಿಗಳನ್ನು ವಿತರಿಸಲಾಗುತ್ತಿದ್ದು ಚುನಾವಣೆಗೆ ಸ್ಫರ್ಧಿಸಲು ಇಚ್ಚಿಸುವ ಆಕಾಂಕ್ಷಿಗಳು ನಿಗದಿತ ಅರ್ಜಿಯನ್ನು ಪಡೆದು ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿ ಸಾಮಾನ್ಯ ವರ್ಗದ ಅಭ್ಯರ್ಥಿಗಳಾಗಿದ್ದಲ್ಲಿ 3ಸಾವಿರ, ಪ.ಜಾತಿ ಅಥವಾ ಪಂಗಡದ ಅಭ್ಯರ್ಥಿಗಳಾಗಿದ್ದಲ್ಲಿ 1,500 ರೂ. ಶುಲ್ಕಗಳ ಡಿಮ್ಯಾಂಡ್ ಡ್ರಾಫ್ಟ್ನೊಂದಿಗೆ ಅರ್ಜಿ ಸಲ್ಲಿಸಬೇಕು ಎಂದು ಮಾಹಿತಿ ನೀಡಿದರು.
ಚುನಾವಣಾ ವೀಕ್ಷಕರಾದ ಉಮೇಶ್, ಸುಹೇಲ್ ಅಲಿಖಾನ್, ಅರುಣ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಈಶ್ವರ್, ಕೆಂಪಯ್ಯ, ಮುಖಂಡರಾದ ಪಾಳ್ಯ ಕೃಷ್ಣ, ಜಯಪ್ರಕಾಶ್ ಗುಪ್ತ, ಚಿಕ್ಕತಮ್ಮಯ್ಯ, ಮಾದೇಶ್, ಮಹೇಶ್, ಬಸವರಾಜು ಇನ್ನಿತರರು ಇದ್ದರು.