ಸಭೆಯಲ್ಲಿ ಮಾತನಾಡಿದರು.
Advertisement
ಕಳೆದ ಚುನಾವಣೆಯಲ್ಲಿ ಸೋತ ನಂತರವೂ ಜನರ ಬಳಿ ಇದ್ದು,ಅವರ ಕಷ್ಟ ಸುಖವನ್ನು ಆಲಿಸಿ, ಸರಕಾರದಿಂದ ಮತ್ತು ವೈಯಕ್ತಿಕವಾಗಿ ಸಮಸ್ಯೆ ಪರಿಹರಿಸಲು ಪ್ರಯತ್ನಿಸಿದ್ದೇನೆ. ತಾಲೂಕಿನಲ್ಲಿ ಅಭಿವೃದ್ಧಿಗೆ ಮತದಾರರ ಆಶೀರ್ವಾದವಿದ್ದರೆ ಗ್ರಾಮೀಣ ಅಭಿವೃದ್ಧಿ ಮತ್ತು ಪಟ್ಟಣದ ಅಭಿವೃದ್ಧಿಗೆ ಕ್ರಮಕೈಗೊಳ್ಳಲಾಗುತ್ತದೆ. ಸರಕಾರದ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ತಲುಪಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ನಡೆಸಲಾಗುತ್ತದೆ. ಈಗಾಗಲೇ ತಾಲೂಕಿನ ಎಲ್ಲಾ ಗ್ರಾಪಂ ವ್ಯಾಪ್ತಿಯಲ್ಲಿ ಕಾರ್ಯಕರ್ತರ ಸಭೆ ನಡೆಸಲಾಗಿದೆ ಎಂದರು.
ಶಕ್ತಿ ಮೀರಿ ಪ್ರಯತ್ನಿಸಬೇಕು. ಕ್ಷೇತ್ರದಲ್ಲಿ ಈ ಬಾರಿ ಬದಲಾವಣೆಯನ್ನು ಮತದಾರರು ನಿರೀಕ್ಷಿಸಿದ್ದು, ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸಬೇಕು ಎಂದರು. ಮಹಿಳಾ ಕಾಂಗ್ರೆಸ್ ಕಾರ್ಯಧ್ಯಕ್ಷೆ ಸೌಮ್ಯ ಮಾತನಾಡಿ, ಪಟ್ಟಣ ಹಾಗೂ ಗ್ರಾಮೀಣ ಭಾಗದಲ್ಲಿ ಮಹಿಳೆಯರು ಕಾಂಗ್ರೆಸ್ ಪಕ್ಷದ ಬಗ್ಗೆ ವಿಶ್ವಾಸವಿದ್ದು, ಈ ಬಾರಿ ಬದಲಾವಣೆ ಬಯಸಿದ್ದಾರೆ. ಮಹಿಳೆಯರಿಗೆ ಅನೇಕ ಕಾರ್ಯಕ್ರಮ ನೀಡಿರುವ ಕಾಂಗ್ರೆಸ್ ಸರಕಾರ ಮತ್ತೆ ಅಧಿ ಕಾರಕ್ಕೆ ತರಲು ಇಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಅತ್ಯಧಿಕ ಮತದಿಂದ ಗೆಲುವು ಸಾಧಿಸಲು ಕಾರ್ಯಕರ್ತರು ಶ್ರಮಿಸಬೇಕು ಎಂದರು. ಸಭೆಯ ಅಧ್ಯಕ್ಷತೆಯನ್ನು ಪ.ಪಂ.ಬೂತ್ ಸಮಿತಿ ಅಧ್ಯಕ್ಷ ಸ್ಟೈಲೋ ದಿನೇಶ್ ಶೆಟ್ಟಿ ವಹಿಸಿದ್ದರು. ಮುಖಂಡರಾದ ಕಾನುವಳ್ಳಿ ಕೃಷ್ಣಪ್ಪ ಗೌಡ, ಕೆ.ಎಂ.ರಮೇಶ್ ಭಟ್, ಕೆ.ಸಿ.ವೆಂಕಟೇಶ್, ರಫಿಕ್ ಅಹಮದ್, ಎಚ್. ಕೆ.ಸುಬ್ರಹ್ಮಣ್ಯ, ನಾರಾಯಣ,ನಾಗರಾಜ್, ವಸಂತಿ, ಶಕೀಲಾ ಇದ್ದರು