Advertisement

ಬೀದಿಬದಿ ವ್ಯಾಪಾರಸ್ಥರು ಸಂಘಟಿತರಾಗಲಿ

07:31 AM Feb 15, 2019 | Team Udayavani |

ರಾಮನಾಥಪುರ: ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರ ನೇತೃತ್ವದ ರಾಜ್ಯ ಸರ್ಕಾರವು ಬೀದಿಬದಿ ವ್ಯಾಪಾರಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಬಡವರಬಂಧು ಕಾರ್ಯಕ್ರಮ ಜಾರಿಗೆ ತಂದಿದ್ದು ಅದನ್ನು ಸಮರ್ಪಕವಾಗಿ ಬಳಸಿಕೊಳ್ಳುವ ನಿಟ್ಟಿನಲ್ಲಿ ಬೀದಿಬದಿ ವ್ಯಾಪಾರಸ್ಥರು ಸಂಘಟಿತರಾಗಬೇಕು ಎಂದು ಜಿಪಂ ಮಾಜಿ ಸದಸ್ಯ ಎಚ್‌. ಎಸ್‌.ಶಂಕರ್‌ ಸಲಹೆ ನೀಡಿದರು.

Advertisement

ರಾಮನಾಥಪುರದಲ್ಲಿ ಕರ್ನಾಟಕ ಬೀದಿಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟದ ಕೊಡಗು ಹಾಗೂ ಹಾಸನ ಜಿಲ್ಲಾ ಘಟಕದ ವತಿಯಿಂದ ರಾಮನಾಥಪುರ ಗ್ರಾಮ ಪಂಚಾಯಿತಿ ಅವರಣದಲ್ಲಿ ಹೋಬಳಿಯ ಬೀದಿಬದಿ ವ್ಯಾಪಾರಿಗಳ ಸಂಘಟನೆಯ ಒಕ್ಕೂಟದ ಸಮಿತಿ ರಚನೆಯ ಕಾರ್ಯಕ್ರವನ್ನು ಉದ್ಘಾಟಿಸಿ ಮಾತನಾಡಿದರು.

ಗುರುತಿನ ಚೀಟಿ ಪಡೆಯಿರಿ: ತಮ್ಮ ವ್ಯಾಪ್ತಿಗೆ ಬರುವ ಸ್ಥಳೀಯಸಂಸ್ಥೆ, ಗ್ರಾಮ ಪಂಚಾಯಿತಿ, ಪಟ್ಟಣ ಪಂಚಾಯಿತಿ, ನಗರಪಾಲಿಕೆ ಮತ್ತು ಪುರಸಭೆಗಳಲ್ಲಿ ವ್ಯಾಪಾರದ ಗುರುತಿನ ಚೀಟಿ ಹಾಗೂ ಪ್ರಮಾಣಪತ್ರಗಳನ್ನು ಪಡೆದರೆ ಮಾತ್ರ ಬಡವರ ಬಂಧು ಯೋಜನೆಯ ಸೌಲಭ್ಯಗಳನ್ನು ಹೊಂದಲು ಸಾಧ್ಯ ಎಂದರು.

ಸಂಘಟನೆ ಕೊರತೆ: ಕೊಡಗು ಮತ್ತು ಹಾಸನ ಜಿಲ್ಲಾಘಟಕದ ಅಧ್ಯಕ್ಷ ಕೆ.ಆರ್‌.ಜಗದೀಶ್‌ ಮಾತನಾಡಿ, ಸುಮಾರು ಇಪ್ಪತ್ತು ವರ್ಷಗಳಿಗೂ ಅಧಿಕ ಸಮಯದಿಂದ ರಾಮನಾಥಪುರದ ಬೀದಿಬದಿ ವ್ಯಾಪಾರಿಗಳು ಇದುವರೆಗೂ ಯಾವುದೇ ರೀತಿಯ ಸೌಲಭ್ಯವನ್ನು ಪಡೆದಕೊಳ್ಳದಿರುವುದು ದುರದೃಷ್ಟಕರ ಸಂಗತಿ. ತಮ್ಮಲ್ಲಿನ ಸಂಘಟನೆಯ ಕೊರತೆಯಿಂದಾಗಿ ಗುರುತಿನ ಚೀಟಿ ಮತ್ತು ಪ್ರಮಾಣಪತ್ರವನ್ನು ಪಡೆದುಕೊಂಡಿಲ್ಲ ಎಂದರು.

ಇನ್ನಾದರೂ ಗುರುತಿನಚೀಟಿ ಮತ್ತು ಪ್ರಮಾಣಪತ್ರ ಪಡೆಯಿರಿ ಎಂದು ಸಲಹೆ ನೀಡಿದರು. ರಾಜ್ಯಮಾನವ ಹಕ್ಕು ಜನಜಾಗೃತಿವೇದಿಕೆಯ ರಾಜ್ಯಾಧ್ಯಕ್ಷ ಗುರುಸ್ವಾಮಿ ಮಾತನಾಡಿ ಬೀದಿಬದಿ ವ್ಯಾಪಾರಿಗಳು ರಾಜ್ಯಾದ್ಯಂತ ಇಂದು ಹಲವು ಸಂಕಷ್ಟಗಳನ್ನು ಎದುರಿಸುತ್ತಿದ್ದು, ಸರ್ಕಾರದ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.

Advertisement

ಪದಾಧಿಕಾರಿಗಳ ಆಯ್ಕೆ: ರಾಮನಾಥಪುರ ಹೋಬಳಿಯ ನೂತನ ಅಧ್ಯಕ್ಷರಾಗಿ ಅಪ್ಪಾಜಿಶೆಟ್ಟಿ, ಉಪಾಧ್ಯಕ್ಷರಾಗಿ ಮೋಹನ್‌ಕುಮಾರ್‌, ಕಾರ್ಯದರ್ಶಿಯಾಗಿ ಕುಮಾರ್‌, ಮಹಿಳಾಘಟಕದ ಅಧ್ಯಕ್ಷರಾಗಿ ಚೇತನ, ಉಪಾಧ್ಯಕ್ಷರಾಗಿ ಉಷಾರನ್ನು ಈ ಸಂದರ್ಭದಲ್ಲಿ ಆಯ್ಕೆಮಾಡಲಾಯಿತು.

ರಾಮನಾಥಪುರ ಗ್ರಾಪಂ ಅಭಿವೃದ್ಧಿ ಅಧಿಕಾರಿಗೆ  ಬೀದಿಬದಿ ವ್ಯಾಪಾರಿಗಳಿಗೆ ಗುರುತಿನಚೀಟಿ ಮತ್ತು ಪ್ರಮಾಣಪತ್ರವನ್ನು ನೀಡಲು ಮನವಿಪತ್ರ ಸಲ್ಲಿಸಲಾಯಿತು. ಒಕ್ಕೂಟದ ಕೊಡಗು ಜಿಲ್ಲಾ ಘಟಕದ ಉಸ್ತುವಾರಿ ಕೆ ರವಿ.ಕಾರ್ಯದರ್ಶಿ ಆರ್‌. ಸತೀಶ್‌, ಸಹಕಾರ್ಯದರ್ಶಿ ದೀಕ್ಷಿತ್‌ ಕೆ.ಟಿ. ಶ್ರೀನಿವಾಸ್‌. ಘಟಕದ ನೂತನ ಅಧ್ಯಕ್ಷರು, ಪದಾಧಿಕಾರಿಗಳು ಹಾಜರಿದ್ದರು. 

Advertisement

Udayavani is now on Telegram. Click here to join our channel and stay updated with the latest news.

Next