ಕೋಲ್ಕತಾ: ವೈದ್ಯರ ಮೇಲೆ ನಡೆದ ಹಲ್ಲೆ ಖಂಡಿಸಿ ಮುಷ್ಕರ ನಡೆಸುತ್ತಿರುವ ಸರ್ಕಾರಿ ಆಸ್ಪತ್ರೆಗಳ ವೈದ್ಯರಿಗೆ ಪ್ರತಿಭಟನೆಯಿಂದ ಹಿಂದೆ ಸರಿಯುವಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು 4 ಗಂಟೆಗಳ ಗಡುವು ನೀಡಿದ್ದಾರೆ.
ವೈದ್ಯರ ಪ್ರತಿಭಟನೆಯಿಂದಾಗಿ ಚಿಕಿತ್ಸೆ ಲಭಿಸದೆ ನೂರಾರು ರೋಗಿಗಳು ಪರದಾಡುತ್ತಿರುವ ಹಿನ್ನಲೆಯಲ್ಲಿ ಕೋಲ್ಕತಾದ ಎಸ್‌ಎಸ್‌ಕೆಎಮ್ ಮೆಡಿಕಲ್ ಕಾಲೇಜಿಗೆ ಆಗಮಿಸಿ ಪ್ರತಿಭಟನಾ ನಿರತರಿಗೆ ಎಚ್ಚರಿಕೆ ನೀಡಿದರು. ಆಸ್ಪತ್ರೆಗಳು 4 ಗಂಟೆಯ ಒಳಗೆ ಕಾರ್ಯ ನಿರ್ವಹಿಸಬೇಕು. ಹೊರ ರಾಜ್ಯದವರು ವೈದ್ಯರ ಮೇಲೆ ಹಲ್ಲೆ ನಡೆಸಿದ್ದಾರೆ. ನಾವು ಈ ಬಗ್ಗೆ ತನಿಖೆ ನೀಡಿ ಕ್ರಮ ಕೈಗೊಳ್ಳುತ್ತೇವೆ ಎಂದರು.
ಗುರುವಾರ ಸಂಜೆ 4.30 ರ ಒಳಗೆ ಕರ್ತವ್ಯಕ್ಕೆ ಹಾಜರಾಗಲು ಗಡುವು ನೀಡಲಾಗಿದೆ.
ವೈದ್ಯರು ನಾಲ್ಕು ದಿನಗಳಿಂದ ಕೆಲಸ ಮಾಡುತ್ತಿಲ್ಲ ಎನ್ನುವಷ್ಟು ದುರದೃಷ್ಟಕರ ವಿಚಾರ ಬೇರೆ ಇಲ್ಲ. ಯಾವ ವೈದ್ಯರು ಕರ್ತವ್ಯಕ್ಕೆ ಹಾಜರಾಗುವುದಿಲ್ಲವೋ ಅಂತಹ ವೈದ್ಯರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳುತ್ತೇನೆ ಎಂದು ಎಚ್ಚರಿಕೆ ನೀಡಿದರು.
ಜೂನ್ 10 ರಂದು 75 ವರ್ಷದ ವ್ಯಕ್ತಿಗೆ ಚಿಕಿತ್ಸೆ ನೀಡದೆ ಸಾವಿಗೆ ಕಾರಣರಾದರು ಎಂದು ವೈದ್ಯರ ಮೇಲೆ ಹಲ್ಲೆ ನಡೆಸಲಾಗಿತ್ತು.
ಹಲ್ಲೆ ಖಂಡಿಸಿ ಮೂರು ದಿನಗಳಿಂದ ವೈದ್ಯರು ಪ್ರತಿಭಟನೆ ನಡೆಸುತ್ತಿದ್ದಾರೆ.