ಅವರು ಮಲ್ಪೆ ಬಾಲಕರ ಶ್ರೀ ರಾಮ ಭಜನಾ ಮಂದಿರದಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.
Advertisement
ಉಡುಪಿ ಮಾದರಿ ಕ್ಷೇತ್ರಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಮೀನುಗಾರಿಕಾ ಫೆಡರೇಶನ್ ಅಧ್ಯಕ್ಷರಾಗಿ , ನಗರಸಭೆಯ ಅನುಭವಿ ಸದಸ್ಯರಾಗಿ, ಸಹಕಾರಿ, ಶಿಕ್ಷಣ, ಧಾರ್ಮಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಕಾರ್ಯವೈಖರಿಯಿಂದ ಓರ್ವ ದಕ್ಷ ಆಡಳಿತಗಾರರಾಗಿ ಗುರುತಿಸಿ ಕೊಂಡಿರುವ ಯಶ್ ಪಾಲ್ ಸುವರ್ಣ ಮುಂದಿನ ದಿನದಲ್ಲಿ ಓರ್ವ ಯಶಸ್ವಿ ಶಾಸಕರಾಗಿ ಕ್ಷೇತ್ರದ ಜನತೆಯ ಆಶೋತ್ತರಗಳಿಗೆ ವಿಧಾನ ಸಭೆಯಲ್ಲಿ ಗಟ್ಟಿ ಧ್ವನಿಯಾಗುವ ಮೂಲಕ ಉಡುಪಿ ಕ್ಷೇತ್ರವನ್ನು ಮಾದರಿ ಕ್ಷೇತ್ರವಾಗಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಲಿದ್ದಾರೆ. ಕಳೆದ 20 ವರ್ಷಗಳಲ್ಲಿ ಶಾಸಕ ರಘುಪತಿ ಭಟ್ ಹಾಗೂ ನನ್ನ ಅವಧಿಯಲ್ಲಿ ಉಡುಪಿಯಲ್ಲಿ ನಡೆದ ಅಭಿವೃದ್ಧಿ ಕಾರ್ಯಕ್ರಮಗಳನ್ನು ಯಶ್‌ಪಾಲ್ ಸುವರ್ಣ ಇನ್ನೂ ಉತ್ತಮ ರೀತಿಯಲ್ಲಿ ಮುಂದುವರೆಸುವ ಭರವಸೆ ಇದೆ ಎಂದರು.
ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಮಾತನಾಡಿ ಪಕ್ಷ ನನ್ನಂತಹ ಸಾಮಾನ್ಯ ಕಾರ್ಯಕರ್ತರನ್ನು ಗುರುತಿಸಿ ಅವಕಾಶ ನೀಡಿದೆ. ಕರಾವಳಿ ಭಾಗದ ಭಜನಾ ಮಂದಿರ ಸುಸಂಸ್ಕೃತ ಸಮಾಜ ನಿರ್ಮಿಸುವಲ್ಲಿ ತನ್ನದೇ ಆದ ರೀತಿಯಲ್ಲಿ ಕೊಡುಗೆ ನೀಡುತ್ತಿದೆ. ಈ ಭಜನಾ ಮಂದಿರಗಳೊಂದಿಗೆ ಹಲವು ವರ್ಷಗಳಿಂದ ನಿಕಟ ಸಂಬಂಧ ಹೊಂದಿದ್ದು ಈ ಬಾರಿಯ ಚುನಾವಣೆಯಲ್ಲಿ ರಾಷ್ಟ್ರೀಯವಾದಿ ಚಿಂತನೆಯ ಮೂಲಕ ಜನಪರ ಆಡಳಿತಕ್ಕೆ ಬಿಜೆಪಿ ಸರಕಾರವನ್ನು ಮತ್ತೂಮ್ಮೆ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಉಡುಪಿ ಕ್ಷೇತ್ರದಲ್ಲಿ ತನನ್ನು ಗೆಲ್ಲಿಸಿ ಆಶೀರ್ವದಿಸುವಂತೆ ಮನವಿ ಮಾಡಿದರು. ಸರ್ವಸ್ಪರ್ಶಿ, ಸರ್ವವ್ಯಾಪಿ ಯೋಜನೆ
ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ನಿರ್ಮಾಣಗೊಳ್ಳುತ್ತಿರುವ ಈ ಸುಸಂದರ್ಭದಲ್ಲಿ ನರೇಂದ್ರ ಮೋದಿ ನೇತೃತ್ವದಲ್ಲಿ ರಾಜ್ಯ ಹಾಗೂ ಕೇಂದ್ರದಲ್ಲಿ ಡಬಲ್ ಇಂಜಿನ್ ಸರಕಾರದ ಮೂಲಕ ಸರ್ವಸ್ಪರ್ಶಿ, ಸರ್ವವ್ಯಾಪಿ ಯೋಜನೆಗಳನ್ನು ಜಾರಿಗೆ ತರಲು ಕ್ಷೇತ್ರದ ಜನತೆಯ ಸೇವಕನಾಗಿ ಕಾರ್ಯನಿರ್ವಹಿಸಲು ಅವಕಾಶ ನೀಡುವಂತೆ ಮನವಿ ಮಾಡಿದರು.
Related Articles
Advertisement
ನಮ್ಮ ಸಮಸ್ಯೆಗಳಿಗೆ ಸದಾ ಸ್ಪಂದಿಸುವ ಯಶ್ಪಾಲ್ಕರಾವಳಿ ಜಿಲ್ಲೆಯ ಮೀನುಗಾರರ ಯಾವುದೇ ಸಮಸ್ಯೆ, ಬೇಡಿಕೆಗಳಿಗೆ ಮೀನು ಮಾರಾಟ ಫೆಡರೇಷನ್ ಅಧ್ಯಕ್ಷರಾಗಿ ಯಶ್‌ಪಾಲ್ ಸುವರ್ಣ ಸದಾ ಮೀನುಗಾರರ ಜೊತೆ ಮುಂಚೂಣಿಯಲ್ಲಿ ನಿಂತು ರಾಜ್ಯ ಹಾಗೂ ಕೇಂದ್ರ ಸರಕಾರದ ಮೂಲಕ ಪರಿಹಾರ ಕಂಡುಕೊಳ್ಳುವಲ್ಲಿ ಹಲವಾರು ಸಂದರ್ಭದಲ್ಲಿ ಯಶಸ್ವಿಯಾಗಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರಕಾರದ ಮೀನುಗಾರಿಕೆ ಸಂಬಂಧಿಸಿದ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಮ್ಮ ಸಂಸ್ಥೆಯ ಮೂಲಕ ತಲುಪಿಸಿದ್ದಾರೆ. ಈ ಬಾರಿ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಯಶ್‌ಪಾಲ್ ಸುವರ್ಣ ಸ್ಪರ್ಧಿಸುತ್ತಿದ್ದು, ಮುಂದಿನ ದಿನಗಳಲ್ಲಿ ಶಾಸಕರಾಗಿ ಮೀನುಗಾರರ ಪ್ರತಿನಿಧಿಯಾಗಿ ಕಾರ್ಯ ನಿರ್ವಹಿಸುವ ಭರವಸೆಯಿದೆ.
– ಪುರಂದರ ಕೋಟ್ಯಾನ್, ಕಾರ್ಯದರ್ಶಿ, ಸಾಂಪ್ರದಾಯಿಕ ನಾಡ ಟ್ರಾಲ್ ದೋಣಿ ಸಂಘ ರಿ. ಮಲ್ಪೆ