ಭಾನುವಾರ ಮಂಗಳೂರು ಪೊಲೀಸ್ ಕಮಿಷನರೆಟ್‌ನ ಬಜಪೆ ಮತ್ತು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆ ಹಾಗೂ ನಗರ ಸಶಸ್ತ್ರ ಪೊಲೀಸ್ ಪಡೆಯ ಸಿಎಆರ್ ಕಚೇರಿಯ ನೂತನ ಕಟ್ಟಡ ಉದ್ಘಾಟಿಸಿದ ಅನಂತರ ಅವರು ಮಾತನಾಡಿದರು.
Advertisement
ಬ್ಯಾಂಕ್ ಖಾತೆಗಳಿಂದ ಹಣ ದೋಚುವುದು, ಹ್ಯಾಕಿಂಗ್ ಮಾಡಿ ವಂಚಿಸುವುದು, ಸುಳ್ಳು ಸುದ್ದಿ, ವೈಯಕ್ತಿಕ ಅವಹೇಳನದ ಪೋಸ್ಟ್ ಮಾಡುವುದು ಮೊದಲಾದ ಸೈಬರ್ ಪ್ರಕರಣಗಳು ಹೆಚ್ಚುತ್ತಿರುವುದನ್ನು ಸರಕಾರ ಗಂಭೀರವಾಗಿ ಪರಿಗಣಿಸಿ ಪ್ರಕರಣ ದಾಖಲಿಸಿಕೊಳ್ಳಲಾಗುತ್ತಿದೆ. ಮುಂದಿನ ದಿನಗಳಲ್ಲಿ ಇಂತಹ ಅಪರಾಧಗಳನ್ನು ತಡೆಯುವುದಕ್ಕಾಗಿ ಬಲಿಷ್ಠವಾದ ಕಾನೂನನ್ನು ಅನುಷ್ಠಾನಗೊಳಿಸಲಾಗುವುದು. ಅಗತ್ಯವಿರುವ ಕಾನೂನು ತಿದ್ದುಪಡಿ ಮಾಡಲಾಗುವುದು. ಇದಕ್ಕಾಗಿ ಮಾಹಿತಿ ತಂತ್ರಜ್ಞಾನ ಮತ್ತು ಗೃಹ ಇಲಾಖೆಯನ್ನೊಳಗೊಂಡ ಸಮಿತಿ ರಚಿಸಲಾಗಿದೆ ಎಂದು ಗೃಹಸಚಿವರು ತಿಳಿಸಿದರು.
Related Articles
Advertisement
ನೈತಿಕ ಪೊಲೀಸ್‌ಗಿರಿ ನಿಯಂತ್ರಣಮಂಗಳೂರಿನಲ್ಲಿ ಪ್ರತ್ಯೇಕ ಪೊಲೀಸ್ ವಿಂಗ್ ರಚಿಸಿದ ಅನಂತರ ನೈತಿಕ ಪೊಲೀಸ್‌ಗಿರಿ ಘಟನೆಗಳು ನಿಯಂತ್ರಣಕ್ಕೆ ಬಂದಿವೆ. ಯಾವುದೇ ಧರ್ಮದವರು ನೈತಿಕ ಪೊಲೀಸ್‌ಗಿರಿ ನಡೆಸಿದರೆ ಅಥವಾ ಅದಕ್ಕೆ ಉತ್ತೇಜನ ನೀಡಿದರೆ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಗೃಹಸಚಿವರು ತಿಳಿಸಿದರು. ಕಾವೇರಿ ತಂತ್ರಾಂಶವೂ ಹ್ಯಾಕ್
ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಬಯೋಮೆಟ್ರಿಕ್, ಆಧಾರ್ ಮಾಹಿತಿ ನೀಡಿದ ಕೆಲವರ ಬ್ಯಾಂಕ್ ಖಾತೆಯಿಂದ ಹಣ ದೋಚಿರುವ ಪ್ರಕರಣದ ಕುರಿತಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಗೃಹ ಸಚಿವರು, ಹಣಕಾಸಿನ ವ್ಯವಹಾರ ಇರುವಲ್ಲಿ ಸೈಬರ್ ವಂಚನೆ ನಡೆಯುತ್ತಿದೆ. ಕಾವೇರಿ ತಂತ್ರಾಂಶವನ್ನು ಕೂಡ ಹ್ಯಾಕ್ ಮಾಡಿರುವುದು ಕಂಡುಬಂದಿದೆ. ಬಿಹಾರದ ಮೂವರು ಸೈಬರ್ ವಂಚಕರನ್ನು ಬಂಧಿಸಲಾಗಿದೆ ಎಂದು ತಿಳಿಸಿದರು.