Advertisement
ಆದೇಶ ಹಿಂಪಡೆಯಲು ಶಾಸಕ ಕಾಮತ್ ಆಗ್ರಹಈ ಬಗ್ಗೆ ಮಾಧ್ಯಮಗಳ ಜತೆಗೆ ಪ್ರತಿಕ್ರಿಯಿಸಿರುವ ಶಾಸಕ ವೇದವ್ಯಾಸ ಕಾಮತ್, “ಕೆಲವೇ ದಿನಗಳಲ್ಲಿ ಹಬ್ಬ ಹರಿದಿನಗಳು ಆರಂಭಗೊಳ್ಳಲಿದ್ದು, ಇಂಥ ಸಂದರ್ಭದಲ್ಲಿ ಹಿಂದೂ ಸಮಾಜವನ್ನು ಕೆಣಕುವ ದುರುದ್ದೇಶದಿಂದ ರಾಜ್ಯ ಕಾಂಗ್ರೆಸ್ ಸರಕಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಹಿಂದಿನಿಂದ ನಡೆದುಕೊಂಡ ಬಂದ ಸಂಪ್ರದಾಯಕ್ಕೆ ತಡೆ ಹಾಕಲು ಶಿಕ್ಷಣ ಇಲಾಖೆ ಮೂಲಕ ಯತ್ನಿಸಿರುವುದು ಅಕ್ಷಮ್ಯ. ಕೂಡಲೇ ಈ ಆದೇಶವನ್ನು ಹಿಂಪಡೆ ಯಬೇಕು ಎಂದು ಆಗ್ರಹಿಸಿದ್ದಾರೆ.
ಬಿಜೆಪಿ ದ.ಕ. ಅಧ್ಯಕ್ಷ ಸತೀಶ್ ಕುಂಪಲ ಪ್ರತಿಕ್ರಿಯಿಸಿ “ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಮೈದಾನದಲ್ಲಿ ಧಾರ್ಮಿಕ ಆಚರಣೆಗೆ ನಿಷೇಧ ವಿಧಿಸಿರುವ ಸರಕಾರದ ಕ್ರಮ ಹಿಂದೂಗಳ ಹಬ್ಬಗಳನ್ನು ಗಮನದಲ್ಲಿರಿಸಿ ಮಾಡಿರುವಂಥದ್ದು. ಪದೇಪದೆ ಹಿಂದೂಗಳ ಭಾವನೆಗಳಿಗೆ ಧಕ್ಕೆ ತರುವಂತಹ ಘಟನೆಗಳು ನಡೆಯುತ್ತಿರುವುದು ಖಂಡನೀಯ. ಹಿಂದೂಗಳ ಹಬ್ಬಗಳಲ್ಲಿ ಭಾರತೀಯ ತೆಯ ಸಂಸ್ಕೃತಿಗಳು ಅಡಕವಾಗಿದೆ ಎನ್ನುವುದನ್ನು ಶಿಕ್ಷಣ ಇಲಾಖೆ ಅರಿಯಬೇಕು. ಸರಕಾರ ತತ್‌ಕ್ಷಣ ಈ ಸುತ್ತೋಲೆಯನ್ನು ರದ್ದುಪಡಿಸಬೇಕು ಎಂದು ಆಗ್ರಹಿಸಿದ್ದಾರೆ.