Advertisement

ಮೂಡಿಗೆರೆ ಕಾಂಗ್ರೆಸ್ ಟಿಕೆಟ್ ಗಾಗಿ ಜಟಾಪಟಿ ; ಅಸಮಾಧಾನ ಸ್ಫೋಟ

04:18 PM Dec 28, 2022 | Team Udayavani |

ಚಿಕ್ಕಮಗಳೂರು: ಮೂಡಿಗೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾಂಗ್ರೆಸ್ ನಲ್ಲಿ ಅಸಮಾಧಾನ ಸ್ಫೋಟಗೊಂಡಿದ್ದು, ಬುಧವಾರ ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಸಮ್ಮುಖದಲ್ಲೇ ಕಾರ್ಯಕರ್ತರು ಗಲಾಟೆ ಮಾಡಿಕೊಂಡಿದ್ದಾರೆ.

Advertisement

ಕಾಂಗ್ರೆಸ್ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರೇ ಪ್ರತಿಭಟನೆ ನಡೆಸಿದ್ದು, ನಯನ ಮೋಟಮ್ಮ ಸೇರಿದಂತೆ ಜಿಲ್ಲಾಧ್ಯಕ್ಷ ಅಂಶುಮಂತ್ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ನಯನಾ ಮೋಟಮ್ಮಅವರು ಮೂಡಿಗೆರೆ ಕ್ಷೇತ್ರದ ಪ್ರಬಲ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದು, ಅವರಿಗೆ ಟಿಕೆಟ್ ನೀಡದಂತೆ ಕಾಂಗ್ರೆಸ್ ಕಾರ್ಯಕರ್ತರು ಪಟ್ಟು ಹಿಡಿದಿದ್ದಾರೆ. ನಯನ ವಿರುದ್ಧ ಇರುವ ಕಾರ್ಯಕರ್ತರ ಕಡೆಗಣನೆ  ಮಾಡಲಾಗಿದೆ ಎಂದು ಆಕ್ರೋಶ ಹೊರ ಹಾಕಲಾಗಿದೆ.

ನಯನ ಪರವಿದ್ದ ಕಾರ್ಯಕರ್ತರ ಜೊತೆಗೆ ಸಭೆ ನಡೆಸುತ್ತಿದ್ದ ಜಿಲ್ಲಾಧ್ಯಕ್ಷ ಅಂಶುಮಂತ್ ಪರ-ವಿರೋಧ ಗುಂಪುಗಳ ನಡುವೆ ಗಲಾಟೆ ನಡೆದಿದೆ.

Advertisement

Udayavani is now on Telegram. Click here to join our channel and stay updated with the latest news.

Next