ಬೆಂಗಳೂರು:ವಿದ್ಯುತ್ ಬಿಲ್ ದುಪ್ಪಟ್ಟು ಗೊಳಿಸಿ ಜನಸಾಮಾನ್ಯರ ಗಾಯದ ಮೇಲೆ ಬರೆಹಾಕುವುದನ್ನು ಕೂಡಲೇ ಹಿಂಪಡೆಯದಿದ್ದರೆ ರಾಜ್ಯ ಸರ್ಕಾರದ ವಿರುದ್ಧ ಬೀದಿಗಿಳಿದು ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.
ಬಿಟಿಎಂ ಲೇಔಟ್ ಹಾಗೂ ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಬಡವರಿಗೆ ಉಚಿತ ಆಹಾರದ ಕಿಟ್ ಹಾಗೂ ತರಕಾರಿ ವಿತರಣೆ ಮಾಡಿ ನಂತರ ಮಾತನಾಡಿದ ಅವರು, ಕಳೆದ 50 ದಿನಗಳಿಂದಲೂ ದುಡಿಮೆ ಇಲ್ಲದೆ ಜನಸಾಮಾನ್ಯರು ಆರ್ಥಿಕ ಸಂಕಷ್ಟಕ್ಕೆಒಳಗಾಗಿದ್ದಾರೆ.ಇಂತಹ ಸಂದರ್ಭದಲ್ಲಿ ಎಸ್ಕಾಂಗಳು ವಿದ್ಯುತ್ ದರ ಏರಿಕೆ ಮಾಡಿ ಬಿಲ್ ವಸೂಲಿಗೆ ಮುಂದಾಗಿರುವುದು ಅಕ್ಷಮ್ಯ ಅಪರಾಧ. ಕಾಂಗ್ರೆಸ್ ಈವರೆಗೂ ರಾಜ್ಯ ಸರ್ಕಾರಕ್ಕೆಎಲ್ಲಾ ರೀತಿಯ ಬೆಂಬಲ ನೀಡುತ್ತಾ ಬಂದಿದೆ.
ಇನ್ನು ಮುಂದೆ ಸರ್ಕಾರದ ಜನವಿರೋಧಿ ನೀತಿಗಳನ್ನುಸಹಿಸಿಕೊಂಡು ಸುಮ್ಮನೆ ಇರುವುದಿಲ್ಲ. ಅನಿವಾರ್ಯವಾಗಿಬೀದಿಗೆ ಇಳಿದು ಹೋರಾಟ ಮಾಡಬೇಕಾಗುತ್ತದೆ ಎಂದುಎಚ್ಚರಿಕೆ ನೀಡಿದರು.
ಜನರ ಸಂಕಷ್ಟದ ಸಮಯದಲ್ಲಿಯಾವುದೇ ರೀತಿಯ ದರಗಳನ್ನು ಏರಿಕೆ ಮಾಡಬಾರದು. ಕೂಡಲೇ ವಿದ್ಯುತ್ ದರ ಏರಿಕೆಯನ್ನು ಹಿಂಪಡೆಯಬೇಕುಎಂದು ಒತ್ತಾಯಿಸಿದರು.ಇದೇ ವೇಳೆ ಕೇಂದ್ರ ಸರ್ಕಾರ ರೈತರಿಗೆ ಹೂವು, ಹಣ್ಣು, ತರಕಾರಿ ಬೆಳೆಯುವವರಿಗೆ, ರೈತರಿಗೆ, ಕಾರ್ಮಿಕರಿಗೆ, ವಲಸೆಕಾರ್ಮಿಕರಿಗೆ, ಜನಸಾಮಾನ್ಯರಿಗೆ ಯಾವ ರೀತಿಯ ನೆರವುನೀಡಲಾಗುತ್ತಿದೆ ಎಂಬ ಬಗ್ಗೆ ಮಾಹಿತಿ ಇಲ್ಲ. ಕೇಂದ್ರ ಸರ್ಕಾರ ಎಲ್ಲ ವರ್ಗದ ಜನರನ್ನು ಕಾಪಾಡಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಬಿಟಿಎಂ ಲೇಔಟ್ ಶಾಸಕ ರಾಮಲಿಂಗಾ ರೆಡ್ಡಿ, ಜಯನಗರ ಶಾಸಕಿ ಸೌಮ್ಯಾ ರೆಡ್ಡಿ ಹಾಜರಿದ್ದರು.