Advertisement

ಕನ್ನಡಿಗರ ಉದ್ಯೋಗಕ್ಕಾಗಿ ಹೋರಾಟ: ಚಂದ್ರಶೇಖರ್‌

02:22 AM Jul 05, 2019 | Team Udayavani |

ಬೆಂಗಳೂರು: ಬ್ಯಾಂಕಿಂಗ್‌ ಕ್ಷೇತ್ರದಲ್ಲಿ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಕಾಂಗ್ರೆಸ್‌ ರಾಜ್ಯಸಭಾ ಸದಸ್ಯ ಜಿ.ಸಿ. ಚಂದ್ರಶೇಖರ್‌ ಅಭಿನಂದನೆ ಸಲ್ಲಿಸಿದ್ದಾರೆ. ಆದರೆ, ಕನ್ನಡಿಗರಿಗೆ ಉದ್ಯೋಗ ದೊರಕಿಸಿಕೊಡಲು ಹೋರಾಟ ಮುಂದುವರೆಸುವುದಾಗಿ ಹೇಳಿದ್ದಾರೆ. ಜೂನ್‌ ಮೂರರಂದು ಈ ಕುರಿತು ಕೇಂದ್ರ ಹಣಕಾಸು ಸಚಿವರಿಗೆ ಪತ್ರ ಬರೆದಿದ್ದ ಜಿ.ಸಿ.ಚಂದ್ರಶೇಖರ್‌, ಕಳೆದ ವಾರ ರಾಜ್ಯಸಭೆಯಲ್ಲಿ ರಾಷ್ಟ್ರಪತಿ ಭಾಷಣದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು, ಬ್ಯಾಂಕಿಂಗ್‌ ನೇಮಕಾತಿಯಲ್ಲಿ ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಪ್ರಸ್ತಾಪಿಸಿ, ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸುವಂತೆ ಮನವಿ ಮಾಡಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next