Advertisement

ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಹೋರಾಟ

07:53 AM Jun 28, 2020 | Lakshmi GovindaRaj |

ಬೆಂಗಳೂರು: ದಪ್ಪ ಚರ್ಮದ ಕೇಂದ್ರ, ರಾಜ್ಯ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಪಕ್ಷದ ವತಿಯಿಂದ ತೀವ್ರ ಹೋರಾಟ ಕೈಗೆತ್ತಿಕೊಳ್ಳುವುದು ಅನಿ  ವಾರ್ಯ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ನಡೆದ ಪಕ್ಷದ ಹಿರಿಯ ಮುಖಂಡರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

Advertisement

ಪೆಟ್ರೋಲ್‌, ಡೀಸೆಲ್‌ ಅತ್ಯಂತ ದುಬಾರಿಯಾಗಿದೆ. ಬೆಲೆ ಏರಿಕೆ ಖಂಡಿಸುವುದರ ಜೊತೆಗೆ ಜನಪರ ಹೋರಾಟ ಕೈಗೆತ್ತಿಕೊಳ್ಳಲಾಗುವುದು ಎಂದು ತಿಳಿಸಿದರು. ಕಳೆದ 6 ವರ್ಷಗಳಲ್ಲಿ ದರ ಏರಿಕೆ ಮತ್ತು ಡೀಸೆಲ್‌, ಪೆಟ್ರೋಲ್‌ ಮೇಲಿನ ತೆರಿಗೆ ಮೂಲಕ ಕೇಂದ್ರ ಸರ್ಕಾರ ಸುಮಾರು 18 ಲಕ್ಷ ಕೋಟಿ ಸಂಗ್ರಹ ಮಾಡಿರುವ ಮಾಹಿತಿ ಇದೆ. ಕೋವಿಡ್‌ 19 ನಿರ್ವಹಣೆಯಲ್ಲಿ  ಕೇಂದ್ರ, ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಪರಿಸ್ಥಿತಿ ನಿರ್ವಹಣೆಗೆ ಅನುದಾನ ಬಿಡುಗಡೆ ಮಾಡದೆ ಜನರಿಗೆ ಎರಡೂ ಸರ್ಕಾರಗಳು ದ್ರೋಹ ಮಾಡಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ವೈದ್ಯರು, ಸಿಬ್ಬಂದಿಗೆ ಸೌಲಭ್ಯಗಳೇ ಇಲ್ಲ.  ರೈತರು ಮತ್ತಿತರ ಸಮುದಾಯಗಳಿಗೆ ಸರ್ಕಾರ ಘೋಷಣೆ ಮಾಡಿರುವ ಪ್ಯಾಕೇಜ್‌ ಈವರೆಗೆ ತಲುಪಿಲ್ಲ. ಎಪಿಎಂಸಿ ರಾಜ್ಯದ ಪಟ್ಟಿಯಲ್ಲಿ ಬರುವ ವಿಷಯ. ಆದರೂ, ಕೇಂದ್ರ ಸರ್ಕಾರ ಮೂಗು ತೂರಿಸುತ್ತಿದೆ. ಭೂ ಸುಧಾರಣೆ  ಕಾಯಿದೆಗೂ ತಿದ್ದುಪಡಿ ತರಲಾಗುತ್ತಿದೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next