ಮುಂಬೈ: ಭಾರತ ತಂಡದಲ್ಲಿ ಆಡಿದ್ದ ಆಲ್ ರೌಂಡರ್ ಕನ್ನಡಿಗ ಸ್ಟುವರ್ಟ್ ಬಿನ್ನಿ ಎಲ್ಲಾ ಮಾದರಿಯ ಕ್ರಿಕೆಟ್ ಗೆ ವಿದಾಯ ಘೋಷಿಸಿದ್ದಾರೆ.
ಅಂತಾರಾಷ್ಟ್ರೀಯ ಮತ್ತು ಪ್ರಥಮ ದರ್ಜೆ ಕ್ರಿಕೆಟ್ ನಿಂದ ದೂರ ಉಳಿಯಲು ನಾನು ನಿರ್ಧರಿಸಿದ್ದೇನೆ ಎಂದು ಸ್ಟುವರ್ಟ್ ಬಿನ್ನಿ ಹೇಳಿಕೊಂಡಿದ್ದಾರೆ.
ಇದನ್ನೂ ಓದಿ:ಟೋಕಿಯೊದಲ್ಲಿ ಮುಂದುವರಿದ ಪದಕ ಬೇಟೆ: ಜಾವೆಲಿನ್ ಥ್ರೋನಲ್ಲಿ ಬೆಳ್ಳಿ, ಕಂಚು ಭಾರತದ ಪಾಲು
ಮಾಜಿ ಕ್ರಿಕೆಟಿಗ ರೋಜರ್ ಬಿನ್ನಿ ಪುತ್ರ ಸ್ಟುವರ್ಟ್ ಬಿನ್ನಿ, ಭಾರತದ ಪರ ಆರು ಟೆಸ್ಟ್, 14 ಏಕದಿನ ಪಂದ್ಯಗಳು ಮತ್ತು ಮೂರು ಟಿ20 ಪಂದ್ಯಗಳನ್ನಾಡಿದ್ದಾರೆ.
37 ವರ್ಷದ ಸ್ಟುವರ್ಟ್ ಬಿನ್ನಿ 2014ರ ಜನವರಿಯಲ್ಲಿ ಭಾರತ ತಂಡಕ್ಕೆ ಪದಾರ್ಪಣೆ ಮಾಡಿದ್ದರು. ನ್ಯೂಜಿಲ್ಯಾಂಡ್ ವಿರುದ್ಧ ಮೊದಲ ಏಕದಿನ ಪಂದ್ಯವಾಡಿದ್ದರು. ಅದೇ ವರ್ಷ ನವೆಂಬರ್ ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ದ ಟೆಸ್ಟ್ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದ್ದರು.
ಐಪಿಎಲ್ ನಲ್ಲಿ ಮುಂಬೈ ಇಂಡಿಯನ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ ರಾಯಲ್ಸ್ ಪರ ಸ್ಟುವರ್ಟ್ ಬಿನ್ನಿ ಆಡಿದ್ದರು.