ಹೊಸದಿಲ್ಲಿ : ನ್ಯಾಶನಲ್ ಸ್ಕೂಲ್ ಆಫ್ ಡ್ರಾಮಾ (ಎನ್‌ಎಸ್‌ಡಿ) ಶಿಕ್ಷಕನೋರ್ವ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ವಿದ್ಯಾರ್ಥಿನಿಯೊಬ್ಬಳು ಆರೋಪಿಸಿರುವುದನ್ನು ಎಎನ್‌ಐ ವರದಿ ಮಾಡಿದೆ.
Advertisement
ರಾಷ್ಟ್ರ ರಾಜಧಾನಿಯಲ್ಲಿನ ಅತ್ಯಂತ ಪ್ರತಿಷ್ಠಿತ ರಂಗಾಭಿನಯ ತರಬೇತಿ ಸಂಸ್ಥೆಯಾಗಿರುವ ಎನ್‌ಎಸ್‌ಡಿ ಯಲ್ಲಿ ವಿದ್ಯಾರ್ಥಿನಿಯೋರ್ವಳು ಶಿಕ್ಷಕನ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಮಾಡುತ್ತಿರುವುದು ಇದೇ ಮೊದಲು ಎಂದು ಮೂಲಗಳು ಹೇಳಿವೆ.
ವಿದ್ಯಾರ್ಥಿನಿಯ ದೂರಿನ ಆಧಾರದಲ್ಲಿ ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿರುವುದಾಗಿ ತಿಳಿದು ಬಂದಿದೆ.