Advertisement
ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ಮತ್ತು ಹಿಂದು ಪರ ಸಂಘಟನೆಗಳ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದು, ಘಟನೆಯಲ್ಲಿ ಸಂಸದ ಭಗವಂತ್ ಖೂಬಾ ಸೇರಿದಂತೆ ಐವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
Related Articles
Advertisement
ಸೋಮವಾರ ನಗರದಲ್ಲಿ ಎರಡು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಬೃಹತ್ ಪ್ರತಿಭಟನೆ ನಡೆಸಿ ಘಟನೆಯನ್ನು ಖಂಡಿಸಿದ್ದರು.
ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಬಿಎ ಓದುತ್ತಿದ್ದ ವಿದ್ಯಾರ್ಥಿನಿಯನ್ನು ಭಾಲ್ಕಿ ತಾಲೂಕಿನ ಗಾಯಮುಖ ಅರಣ್ಯ ಪ್ರದೇಶದಲ್ಲಿ ಶನಿವಾರ ಸಂಜೆ ಅತ್ಯಾಚಾರಕ್ಕೆ ಯತ್ನಿಸಿ ಚಾಕುವಿನಿಂದ ಕುತ್ತಿಗೆ ಕೊಯ್ದು ಹತ್ಯೆಗೈಯಲಾಗಿತ್ತು.
ಕೃತ್ಯ ಎಸಗಿರುವ ಆರೋಪಿ ಭಾಲ್ಕಿ ತಾಲೂಕಿನ ಕೋಸಂ ಗ್ರಾಮದ ಶಮಶುದ್ದೀನ್ (24) ಎಂಬ ಯುವಕನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಶಮಶುದ್ದೀನ್ ಪರಿಚಯ ಹೊಂದಿದ್ದ ಯುವತಿ ಅರಣ್ಯ ಪ್ರದೇಶಕ್ಕೆ ಆತನೊಂದಿಗೆ ತೆರಳಿದ್ದಾರೆ ಎನ್ನಲಾಗಿದ್ದು ಸಂಜೆ 6ರ ಸುಮಾರಿಗೆ ಮೃತದೇಹ ಸಿಕ್ಕಿದ್ದು, ಕೊಲೆಗೂ ಇನ್ನೂ ಖಚಿತ ಕಾರಣ ತಿಳಿದು ಬಂದಿಲ್ಲ. ಅತ್ಯಾಚಾರಕ್ಕೆ ಯತ್ನ ನಡೆದಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದು, ಶವ ಪರೀಕ್ಷೆ ವರದಿ ಬಂದ ನಂತರ ಸ್ಪಷ್ಟ ಮಾಹಿತಿ ಗೊತ್ತಾಗಲಿದೆ.
ಮೃತಳ ಸಹೋದರ ದೂರಿನ ಮೇರೆಗೆ ಧನ್ನೂರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.