Advertisement
ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದೊಂದು ತೀರಾ ಕೆಳ ಹಂತದ ವರ್ತನೆಯಾಗಿದೆ. ಕ್ಯಾಂಪಸ್‌ನಲ್ಲಿರುವ ವಸತಿ ನಿಲಯಗಳಲ್ಲಿನ ವಿದ್ಯಾರ್ಥಿಗಳನ್ನು ಸರಿಯಾಗಿ ನಡೆಸಿಕೊಳ್ಳುತ್ತಿಲ್ಲ. ಹೊರ ರಾಜ್ಯದ ವಿದ್ಯಾರ್ಥಿಗಳ ಮೇಲೆ ತುಂಬಾ ಒತ್ತಡವಿದೆ. ಅಲ್ಲದೆ, ಅವರನ್ನು ತೀರಾ ಕಟುವಾಗಿ ನಡೆಸಿಕೊಳ್ಳಲಾಗುತ್ತಿದೆ.
Related Articles
Advertisement
ಆದರೆ, ಈ ವರ್ಷದಿಂದ ಆಯಾ ರಾಜ್ಯಗಳಿಂದ ವಿದ್ಯಾರ್ಥಿಗಳೆ ತರಬೇಕು ಎಂದು ನಿಯಮ ಮಾಡಿರುವುದೂ ವಿದ್ಯಾರ್ಥಿ ಆನಂದ ಆತ್ಮಹತ್ಯೆಗೆ ಕಾರಣವಾಗಿದೆ ಎಂದು ಆರೋಪಿಸಿದರು. ಉತ್ತರ ಪ್ರದೇಶದ ವಾರಣಾಸಿ ಜಿಲ್ಲೆಯ ಚೆಂಡೋಲಿ ಗ್ರಾಮದ ಪ್ರತಿಭಾವಂತ ಬಡ ವಿದ್ಯಾರ್ಥಿ ಆನಂದ ಶಕ್ತಿರಾಜ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಬಿಬಿಎ ಓದುತ್ತಿದ್ದ. ಆತನ ತಾಯಿ ತೀರಿಕೊಂಡಿದ್ದು ತಂದೆ ಬೇರೆ ಮದುವೆಯಾಗಿ ಆ ಪತ್ನಿಯೊಂದಿಗೆ ಜೀವನ ನಡೆಸುತ್ತಿದ್ದಾನೆ.
ಹೀಗಾಗಿ ಈ ವಿದ್ಯಾರ್ಥಿ ಅನಾಥವಾಗಿದ್ದು, ಬೇರೆಯವರ ಸಹಾಯದಿಂದ ಕೇಂದ್ರೀಯ ವಿಶ್ವ ವಿದ್ಯಾಲಯದಲ್ಲಿ ಪ್ರವೇಶ ಪಡೆದಿದ್ದಾನೆ. ಆದರೆ, ದಿಢೀರ್ ಕೇಂದ್ರೀಯ ವಿಶ್ವವಿದ್ಯಾಲಯದ ಮುಖ್ಯಸ್ಥರು ಹೊಸ ನಿಯಮ ಜಾರಿಗೆ ತಂದು ಹೊರ ರಾಜ್ಯಗಳಿಂದ ಬಂದಿರುವ ದಲಿತ ವಿದ್ಯಾರ್ಥಿಗಳು ತಮ್ಮ ಶಿಷ್ಯವೇತನ ಮಂಜೂರಾಗಿ ಬರಲು ವಿಳಂಬವಾಗುತ್ತದೆ. ಹೀಗಾಗಿ ಊಟದ ವೆಚ್ಚ ಭರಿಸಬೇಕು ಎಂದು ಹೇಳಿದ್ದಾರೆ.
ಇದರಿಂದಾಗಿ ವಿದ್ಯಾರ್ಥಿಗಳಿಗೆ ಏನೂ ತೋಚದಂತಾಗಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದರು. ಕಳೆದ ಐದು ವರ್ಷಗಳಿಂದ ಕೇಂದ್ರೀಯ ವಿಶ್ವವಿದ್ಯಾಲಯ ಕಾರ್ಯನಿರ್ವಹಿಸುತ್ತಿದೆ. ಈ ಹಿಂದೆ ವಿಶ್ವವಿದ್ಯಾಲಯವೇ ಹೊರ ರಾಜ್ಯಗಳ ವಿದ್ಯಾರ್ಥಿಗಳ ಪ್ರವೇಶ ಪಡೆದುಕೊಂಡು ಸ್ವತ ಅವರೆ ವಿದ್ಯಾರ್ಥಿಗಳ ಶಿಷ್ಯವೇತನವನ್ನು ತರಿಸಿಕೊಳ್ಳುತ್ತಿದ್ದರು.
ಕೇಂದ್ರೀಯ ವಿಶ್ವವಿದ್ಯಾಲಯವಾಗಿರುವುದರಿಂದ ಯಾವುದೇ ರಾಜ್ಯದ ವಿದ್ಯಾರ್ಥಿ ಪ್ರವೇಶ ಪಡೆದರೂ ಕೇಂದ್ರ ಸರಕಾರ ನೇರವಾಗಿ ಆಯಾ ರಾಜ್ಯಗಳಿಂದ ವಿದ್ಯಾರ್ಥಿಗಳ ಶಿಷ್ಯವೇತನವನ್ನು ವಿಶ್ವವಿದ್ಯಾಲಯಕ್ಕೆ ತಲುಪಿಸಬೇಕು. ಆದರೆ, ವಿದ್ಯಾರ್ಥಿಗಳೆ ಹೋಗಿ ಶಿಷ್ಯ ವೇತನ ತರುವುದಕ್ಕೆ ಆಗುತ್ತದೆಯೆ? ಈ ಹಿಂದೆ ಇರದ ಕಾನೂನು ಈಗ ತಂದಿರುವುದು ನೋಡಿದರೆ ವಿಶ್ವವಿದ್ಯಾಲಯ ಮುಖ್ಯಸ್ಥರು ದಲಿತ ವಿರೋಧಿ ನೀತಿ ಅನುಸರಿಸುತ್ತಿರುವುದು ಮೇಲ್ನೋಟಕ್ಕೆ ಕಂಡು ಬರುತ್ತದೆ ಎಂದು ಆರೋಪಿಸಿದರು.
ದಲಿತರೇ ಆಗಿರುವ ಲೋಕಸಭಾ ಸದಸ್ಯ ಡಾ| ಮಲ್ಲಿಕಾರ್ಜುನ ಖರ್ಗೆ ಅವರು ಈ ಬಗ್ಗೆ ಗಮನಹರಿಸಬೇಕು ಎಂದು ಒತ್ತಾಯಿಸಿದ ಅವರು, ಈಗ ಲೋಕಸಭೆ ಅಧಿವೇಶನ ನಡೆಯುತ್ತಿದೆ. ಕೇಂದ್ರೀಯ ವಿವಿಯಲ್ಲಿ ವಿದ್ಯಾರ್ಥಿ ಆತ್ಮಹತ್ಯೆ ಕುರಿತು ಚರ್ಚೆ ಮಾಡಬೇಕು ಎಂದು ಮನವಿ ಮಾಡಿದರು. ಈ ಆತ್ಮಹತ್ಯೆ ಬಗ್ಗೆ ಸಮಗ್ರವಾದ ತನಿಖೆ ನಡೆಸಬೇಕು ಎಂದು ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಲಾಗುವುದು ಎಂದು ಮಾನ್ಪಡೆ ತಿಳಿಸಿದರು. ಮುಖಂಡರಾದ ಶರಣಬಸಪ್ಪ ಮಮಶೆಟ್ಟಿ, ಅಶೋಕ ಮ್ಯಾಗೇರಿ ಸುದ್ದಿಗೋಷ್ಠಿಯಲ್ಲಿದ್ದರು.