ದಾವಣಗೆರೆ: ಕರ್ನಾಟಕ ಲೋಕಸೇವಾ ಆಯೋಗದಿಂದ ಡಿಪ್ಲೋಮಾ ಕಮರ್ಷಿಯಲ್ ಪ್ರಾಕೀrಸ್ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ ಶುಕ್ರವಾರ ವಿದ್ಯಾರ್ಥಿ ಕಾಂಗ್ರೆಸ್ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಕರ್ನಾಟಕ ಲೋಕಸೇವಾ ಆಯೋಗ ಈಚೆಗೆ ಆಹ್ವಾನಿಸಲಾಗಿದ್ದ ಶೀಘ್ರಲಿಪಿಗಾರರು ಮತ್ತು ಬೆರಳಚ್ಚುಗಾರರ ಹುದ್ದೆಗಳಿಗೆ ಡಿಪ್ಲೋಮಾ ಕಮರ್ಷಿಯಲ್ ಪ್ರಾಕೀrಸ್ ಪೂರೈಸಿದ ಅನೇಕ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದರು.
ಕರ್ನಾಟಕ ಲೋಕಸೇವಾ ಆಯೋಗದವರು ಡಿಪ್ಲೋಮಾ ಕಮರ್ಷಿಯಲ್ ಪ್ರಾಕೀrಸ್‌ನ 3 ವರ್ಷದ ಒಟ್ಟು 41 ವಿಷಯಗಳಲ್ಲಿ ಉತೀರ್ಣ ಹೊಂದಿ 5125 ಅಂಕಗಳಿಗೆ ಶೇಕಡವಾರು ಪರಿಗಣಿಸಿ, ಆಯ್ಕೆ ಮಾಡುತ್ತಿರುವುದು ಅತ್ಯಂತ ಖಂಡನೀಯ ಎಂದು ವಿದ್ಯಾರ್ಥಿಗಳು ದೂರಿದರು.
ಪಿಯುಸಿ ವಿದ್ಯಾರ್ಥಿಗಳಿಗೆ ಕೇವಲ 1100 ಅಂಕಗಳಿಗೆ ಶೇಖಡವಾರು ಪರಿಗಣಿಸಿ, ಆಯ್ಕೆ ಮಾಡುತ್ತಿರುವಾಗ ಡಿಪ್ಲೋಮಾ ಕಮರ್ಷಿಯಲ್ ಪ್ರಾಕೀrಸ್ ವಿದ್ಯಾರ್ಥಿಗಳಿಗೆ 5125 ಅಂಕಗಳಿಗೆ ಶೇಕಡವಾರು ಪರಿಗಣಿಸುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.
ಕೂಡಲೇ ಡಿಪ್ಲೋಮಾ ಕಮರ್ಷಿಯಲ್ ಪ್ರಾಕೀrಸ್ ವಿದ್ಯಾರ್ಥಿಗಳಿಗೆ ಆಗುತ್ತಿರಯವ ಅನ್ಯಾಯ ತಪ್ಪಿಸಿ, ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು. ಸಂಘಟನೆ ಜಿಲ್ಲಾ ಅಧ್ಯಕ್ಷ ಮಹಮ್ಮದ್ ಮುಜಾಹಿದ್ ಪಾಷಾ, ಏಜಾಜ್, ಪ್ರವೀಣ್ ಇತರರು ಇದ್ದರು.