ಮಡಿಕೇರಿ: ಪಿಯುಸಿ ಫಲಿತಾಂಶ ಪ್ರಕಟಗೊಳ್ಳುವ ಮೊದಲೇ ವಿದ್ಯಾರ್ಥಿನಿಯೊಬ್ಬಳು ಫಲಿತಾಂಶದ ಆತಂಕದ ನಡುವೆ ಆತ್ಮಹತ್ಯೆಗೆ ಶರಣಾದ ಘಟನೆ ಕುಶಾಲನಗರದ ಬಸವನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಸ್ಥಳೀಯ ಕಾಲೇಜೊಂದರ ವಿದ್ಯಾರ್ಥಿನಿ ಸಂಧ್ಯಾ ತನ್ನ ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಯುವತಿ.
ಸಂಧ್ಯಾ ಕುಶಾಲನಗರದ ಖಾಸಗಿ ಕಾಲೇಜಿನಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದು ಈ ಸಾಲಿನ ಪರೀಕ್ಷೆ ಬರೆದಿದ್ದಳು. ಫಲಿತಾಂಶದ ನಿರೀಕ್ಷೆಯಲ್ಲಿ ಆತಂಕದ ನಡುವೆ ಶನಿವಾರ ಮಧ್ಯಾಹ್ನ ಫಲಿತಾಂಶ ಬರುವ ಮುನ್ನವೇ ವಿದ್ಯಾರ್ಥಿನಿ ನೇಣಿಗೆ ಶರಣಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ನಿವೃತ್ತ ಸೈನಿಕ ಶುಭಾಷ್ ಮತ್ತು ಸೌಮ್ಯ ದಂಪತಿಗಳ ಪುತ್ರಿ. ಯಾರು ಮನೆಯಲ್ಲಿಲ್ಲದ ಸಂದರ್ಭ ನೇಣು ಬಿಗಿದು ಸಾವಿಗೀಡಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
Related Articles
ಮೃತ ವಿದ್ಯಾರ್ಥಿನಿ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದು ಫಲಿತಾಂಶ ಬಂದ ನಂತರ ನೋಡಿದಾಗ ಶೇಕಡ 67 ಅಂಕ ಗಳಿಸಿದ್ದು ತಿಳಿದು ಬಂದಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಕುಶಾಲನಗರ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮಹಜರು ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.