Advertisement

ವಿದ್ಯಾರ್ಥಿ ನಿಲಯ ಸ್ಥಾಪನೆ ಪರಿಶೀಲನೆ

12:05 PM Jan 17, 2022 | Team Udayavani |

ಆಳಂದ: ಪಟ್ಟಣ ಹೊರವಲಯದ ಉಮರಗಾ ಹೆದ್ದಾರಿಯಲ್ಲಿನ ನಿವೇಶನದಲ್ಲಿ ಜಿಲ್ಲಾ ವೀರಶೈವ ಸಮಾಜದ ಆಶ್ರಯದಲ್ಲಿ ಸಮಾಜದ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ವಸತಿ ನಿಲಯ ಕಟ್ಟಡ ನಿರ್ಮಾಣಕ್ಕೆ ಸಮಾಜದ ಜಿಲ್ಲಾಧ್ಯಕ್ಷ ಅರುಣಕುಮಾರ ಪಾಟೀಲ ಕೊಡಲ ಹಂಗರಗಾ ನೇತೃತ್ವದಲ್ಲಿ ಮುಖಂಡರು ಸ್ಥಳ ಪರಿಶೀಲನೆ ನಡೆಸಿದರು.

Advertisement

ಬಳಿಕ ಮಾತನಾಡಿದ ಅರುಣ ಕುಮಾರ ಪಾಟೀಲ, ಸಮಾಜದಲ್ಲಿ ಕಡುಬಡವ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಮತ್ತು ಸಾಮಾಜಿಕವಾಗಿ ಅನುಕೂಲ ಕಲ್ಪಿಸುವ ಉದ್ದೇಶದಿಂದ ಬಹುದಿನಗಳ ಬೇಡಿಕೆಯಾದ ವಿದ್ಯಾರ್ಥಿ ವಸತಿ ನಿಲಯ ಕಟ್ಟಡ ನಿರ್ಮಿಸಲು ಉದ್ದೇಶಿಸಿ ಸ್ಥಳ ಪರಿಶೀಲಿಸಲಾಗಿದೆ. ಈ ನಿಟ್ಟಿನಲ್ಲಿ ಸಮಾಜ ಬಾಂಧವರು ಹಾಗೂ ಉಳಿದವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಈ ಕಾರ್ಯ ಕೈಗೆತ್ತಿಕೊಳ್ಳಲಾಗುತ್ತಿದೆ ಎಂದು ಹೇಳಿದರು.

ವೀರಶೈವ ಸಮಾಜದ ವಿದ್ಯಾರ್ಥಿಗಳಿಗೆ ಪಟ್ಟಣ ಸೇರಿದಂತೆ ತಾಲೂಕಿನ ಯಾವ ಕಡೆಯೂ ವಸತಿ ನಿಲಯಗಳಿಲ್ಲ. ಇದರಿಂದಾಗಿ ಜಿಲ್ಲಾ ವೀರಶೈವ ವಸತಿನಿಲಯಕ್ಕೆ ದಾಖಲಾ ಗುತ್ತಿದ್ದಾರೆ. ಆದ್ದರಿಂದ ಪಟ್ಟಣದಲ್ಲೇ ವಸತಿ ನಿಲಯ ಕಟ್ಟಡ ಕಟ್ಟಿ ಅವರಿಗೆ ಅನುಕೂಲ ಮಾಡುವ ಉದ್ದೇಶದಿಂದ ಪ್ರಥಮಬಾರಿಗೆ ಈ ಕಾರ್ಯಕ್ಕೆ ಮುಂದಾಗಿದ್ದೇವೆ ಎಂದರು.

ಜಿಲ್ಲಾ ವೀರಶೈವ ಸಮಾಜದ ಹಿರಿಯ ಉಪಾಧ್ಯಕ್ಷ ಕಲ್ಯಾಣಪ್ಪ ಪಾಟೀಲ ಮಳಖೇಡ, ಪುರಸಭೆ ಉಪಾಧ್ಯಕ್ಷ ಈರಣ್ಣಾ ಹತ್ತರಕಿ, ಹಿರಿಯರಾದ ಸಿದ್ಧರಾಮ ಪಾಟೀಲ ದಣ್ಣೂರ, ಚಂದ್ರಕಾತ ನಿಂಗದಳ್ಳಿ ಮತ್ತಿತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next