ಸಿರುಗುಪ್ಪ: ಸರ್ಕಾರಿ ಶಾಲೆಗಳ ದುಃಸ್ಥಿತಿಯಿಂದ ಬೇಸತ್ತ ವಿದ್ಯಾರ್ಥಿಗಳು ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಪತ್ರ ಬರೆಯುವ ಮೂಲಕ ಪತ್ರ ಚಳವಳಿ ಆರಂಭಿಸಿದ್ದಾರೆ.
ಬಳ್ಳಾರಿ ಜಿಲ್ಲೆ ಸಿರುಗುಪ್ಪ ತಾಲೂಕಿನ ಕರೂರು ಗ್ರಾಮದ ಸರ್ಕಾರಿ ಹಿರಿಯ, ಕಿರಿಯ ಪ್ರಾಥಮಿಕ ಶಾಲೆ ಮತ್ತು ಅಗಸರ ದ್ಯಾವಪ್ಪ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ತಾಲೂಕಿನಲ್ಲಿರುವ 45 ಪ್ರಾಥಮಿಕ, 89 ಪ್ರೌಢಶಾಲಾ ಕೊಠಡಿಗಳ ದುರಸ್ತಿಗೆ ಬೇಕಾದ ಅನುದಾನ ಬಿಡುಗಡೆ ಮಾಡುವಂತೆ ಪತ್ರದಲ್ಲಿ ಆಗ್ರಹಿಸಿದ್ದಾರೆ.
ಕರೂರಿನ ಅಗಸರ ದ್ಯಾವಪ್ಪ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಶನಿವಾರ ಸೇರಿದ 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮೋದಿ ಮತ್ತು ಕುಮಾರಸ್ವಾಮಿ ಅವರಿಗೆ ಪ್ರತ್ಯೇಕವಾಗಿ ಪತ್ರ ಬರೆಯುವ ಮೂಲಕ ಸರಕಾರಿ ಶಾಲೆಗಳಿಗೆ ಸೌಲಭ್ಯ ಒದಗಿಸುವಂತೆ ಒತ್ತಾಯಿಸಿದರು. ಸಿರುಗುಪ್ಪ ತಾಲೂಕಿನ 45 ಪ್ರೌಢಶಾಲೆ,89 ಪ್ರಾಥಮಿಕ ಶಾಲಾ ಕೊಠಡಿಗಳು ಶಿಥಿಲಗೊಂಡು ಗಂಭೀರ ಸ್ಥಿತಿಗೆ ತಲುಪಿವೆ. ಕೊಠಡಿಗಳಲ್ಲಿ ಕುಳಿತು ಪಾಠ-ಪ್ರವಚನ ಕೇಳಲು ಸಾಧ್ಯವಾಗದ ಸ್ಥಿತಿ ಇದೆ. ಈ ಕಟ್ಟಡಗಳು ಯಾವಾಗ ನಮ್ಮ ಮೇಲೆ ಬೀಳುತ್ತವೆಯೋ ಎಂಬ ಭೀತಿ ಕಾಡುತ್ತಿದೆ. 89 ಶಾಲಾ ಕೊಠಡಿಗಳ ಮೇಲ್ಛಾವಣಿಗಳು ಸಂಪೂರ್ಣ ಬೀಳುವ ಸ್ಥಿತಿಯಲ್ಲಿವೆ. ಮಳೆ ಬಂದಾಗ ಕೊಠಡಿಗಳಲ್ಲಿ ನೀರು ತೊಟ್ಟಿಕ್ಕುತ್ತಿದ್ದು, ಕೊಠಡಿಗಳ ಎಲ್ಲಾ ಗೋಡೆಗಳು ಸಂಪೂರ್ಣ ಶಿಥಿಲಗೊಂಡಿವೆ ಎಂದು
ಸಮಸ್ಯೆ ವಿವರಿಸಿದ್ದಾರೆ.