ಬಾಗಲಕೋಟೆ: ರಾಯಚೂರಿನಲ್ಲಿ ನಡೆದ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿನಿ ಯನ್ನು ಅತ್ಯಾಚಾರಗೈದು ಕೊಲೆ ಮಾಡಿದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಒತ್ತಾಯಿಸಿ ಜಿಲ್ಲೆಯ ವಿಶ್ವ ಕರ್ಮ ಸಮಾಜ ಜಿಲ್ಲಾ ಘಟಕ ಜಿಲ್ಲಾಡಳಿತ ಭವನ ಎದುರು ಗುರುವಾರ ಪ್ರತಿಭಟನೆ ನಡೆಸಿತು.
ಅತ್ಯಾಚಾರ, ಕೊಲೆ ನಡೆಯುತ್ತಿದ್ದರೂ ರಾಜ್ಯ ಸರ್ಕಾರ ಆರೋಪಿಗಳ ಮೇಲೆ ಸೂಕ್ತ ಕ್ರಮ ತೆಗೆದುಕೊಳ್ಳುತ್ತಿಲ್ಲ. ಕೊಲೆ ಪ್ರಕರಣವನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸದೇ ಅವರ ಕುಟುಂಬದ ಜೊತೆ ಆಟವಾಡುತ್ತಿದೆ. ಅತ್ಯಾಚಾರ ಮಾಡಿದ ಆರೋಪಿಗಳನ್ನು ರಕ್ಷಣೆ ಮಾಡಲಾಗುತ್ತಿದೆ ಎಂದು ಆರೋಪಿಸಿದರು.
ಅತ್ಯಾಚಾರ, ಕೊಲೆಯಾದರು ಕೂಡಾ ಡೆತ್‌ನೋಟ್ ಇಟ್ಟುಕೊಂಡು ಪ್ರಕರಣವನ್ನು ಆತ್ಮಹತ್ಯೆ ಎಂದು ಬಿಂಬಿಸಲಾಗುತ್ತಿದೆ. ಕೂಡಲೇ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಆರೋಪಿಗೆ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು.
ಜಗನ್ನಾಥ ಸ್ವಾಮೀಜಿ, ಜಿಲ್ಲಾಧ್ಯಕ್ಷ ಮೌನೇಶ ಪತ್ತಾರ, ನಗರ ಘಟಕದ ಅಧ್ಯಕ್ಷ ನಾಗೇಶ ಬರಗಿ, ಮುಖಂಡರಾದ ವಿ.ವಿ. ಪತ್ತಾರ, ನಾಗರಾಜ ಬಡಿಗೇರ, ಈರಣ್ಣ ಪತ್ತಾರ, ಗಣೇಶ ವರಪೇಟ, ಬಾಳು ಸೂರಟೂರ, ಮೌನೇಶ ಸೊನ್ನದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
Advertisement
ಪ್ರತಿಭಟನಾ ಮೆರವಣಿಗೆ ಮೂಲಕ ಜಿಲ್ಲಾಡಳಿತಕ್ಕೆ ಆಗಮಿಸಿದ ವಿಶ್ವಕರ್ಮ ಸಮಾಜದ ಕಾರ್ಯಕರ್ತರು, ಮುಖಂಡರು ಗೃಹ ಇಲಾಖೆ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ನಂತರ ಜಿಲ್ಲಾಧಿಕಾರಿ ಆರ್.ರಾಮಚಂದ್ರನ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
Related Articles
Advertisement