Advertisement

ವಿದ್ಯಾರ್ಥಿನಿ ನಿಗೂಢ ಆತ್ಮಹತ್ಯೆ: ಸಿಐಡಿ ತನಿಖೆಗೆ ಒತ್ತಾಯ

01:38 PM Jul 17, 2019 | Suhan S |

ಬಾಗಲಕೋಟೆ: ಜಿಲ್ಲೆಯ ಜಮಖಂಡಿ ಪಟ್ಟಣದ ರಾಯಲ್ ಪ್ಯಾಲೇಸ್‌ ಕಾಲೇಜಿನಲ್ಲಿ ನಡೆದ ವಿದ್ಯಾರ್ಥಿನಿ ಪ್ರಿಯಾಂಕ ಮೇತ್ರಿ ಸಾವಿನ ಪ್ರಕರಣ ಮರುದಾಖಲಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಮಾದಿಗ ಮಹಾಸಭಾ ಜಿಲ್ಲಾ ಘಟಕ ಪ್ರತಿಭಟನೆ ನಡೆಸಿತು.

Advertisement

ಮಂಗಳವಾರ ಪ್ರತಿಭಟನಾ ಮೆರವಣಿಗೆ ನಡೆಸಿದ ಘಟಕದ ಕಾರ್ಯಕರ್ತರು ಪೊಲೀಸ್‌ ಅಧಿಕಾರಿಗಳ ವಿರುದ್ದ ಘೋಷಣೆ ಕೂಗುತ್ತಾ ಆಕ್ರೋಶ ವ್ಯಕ್ತಪಡಿಸಿದರು. ನಂತರ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ ಅವರಿಗೆ ಮನವಿ ಸಲ್ಲಿಸಿದರು.

ಪ್ರತಿಭಟನೆ ವೇಳೆ ಮಾತನಾಡಿದ ರಾಜ್ಯಾಧ್ಯಕ್ಷ ಮುತ್ತಣ್ಣ ಬೆಣ್ಣೂರ ಮಾತನಾಡಿ, ರಾಯಲ್ ಪ್ಯಾಲೇಸ್‌ ಕಾಲೇಜಿನ ವಿದ್ಯಾರ್ಥಿನಿ ಪ್ರಿಯಾಂಕ ಸಾವಿನ ಪ್ರಕರಣವನ್ನು ಪೊಲೀಸರು ಅಸಹಜ ಸಾವು ಎಂದು ದಾಖಲಿಸಿಕೊಂಡು ಪ್ರಕರಣ ಮುಚ್ಚಿಹಾಕಲು ಪ್ರಯತ್ನಿಸುತ್ತಿದ್ದಾರೆ. ಜಮಖಂಡಿ ಗ್ರಾಮೀಣ ಠಾಣೆಯ ಪಿಎಸ್‌ಐ ಮತ್ತು ಡಿವೈಎಸ್ಪಿ ಅವರನ್ನು ಅಮಾನತು ಮಾಡಬೇಕು ಎಂದು ಆಗ್ರಹಿಸಿದರು.

ಜಮಖಂಡಿ ಪೊಲೀಸ್‌ ಠಾಣೆಯ ಪಿಎಸ್‌ಐ, ಡಿವೈಎಸ್‌ಪಿ ಅವರ ಮೇಲೆ ಶಿಸ್ತು ಕ್ರಮ ತೆಗೆದುಕೊಳ್ಳಬೇಕು. ತಪ್ಪಿತಸ್ಥರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ಪ್ರಕರಣ ಮತ್ತೆ ದಾಖಲಿಸುವ ಕುರಿತು ಪೊಲೀಸ್‌ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು. ಕಾಲೇಜು ಆಡಳಿತ ಮಂಡಳಿ ಸದಸ್ಯರನ್ನು ವಿಚಾರಣೆ ಒಳಪಡಿಸಲಾಗುವುದು. ಡಿವೈಎಸ್‌ಪಿ ನೇತೃತ್ವದಲ್ಲಿ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಕ್ರಮ ತೆಗೆದುಕೊಳ್ಳಲಾಗುವುದು ಎಸ್ಪಿ ಲೋಕೇಶ ಜಗಲಾಸಾರ್‌ ಭರವಸೆ ನೀಡಿದರು.

Advertisement

ಮಾದಿಗ ಸಮಾಜದ ರಾಜ್ಯ ಉಪಾಧ್ಯಕ್ಷ ಹಣಮಂತ ಮಾದರ, ಜಿಲ್ಲಾಧ್ಯಕ್ಷ ಶಿವಾನಂದ ಬಿಸನಾಳ, ಸಂಚಾಲಕ ಫಕೀರಪ್ಪ ಮಾದರ, ಕೆಎಂಎಎಸ್‌ನ ಅಧ್ಯಕ್ಷ ಲಗಮಪ್ಪಾ ಮಾದರ, ಉಪಾಧ್ಯಕ್ಷೆ ಪ್ರೇಮಾ ಕಲಕೇರಿ, ನ್ಯಾ.ಎ.ಜೆ. ಸದಾಸಿವ ವರದಿ ಜಾರಿಗೆ ಹೋರಾಟ ಸಮಿತಿಯ ಜಿಲ್ಲಾಧ್ಯಕ್ಷ ಶಿವಾನಂದ ಟವಳಿ, ಮುಖಂಡರಾದ ರಾಜು ಮನ್ನಿಕೇರಿ, ಹನುಮಂತ ಮಾದರ, ವಿಠuಲ ಹೊಸಮನಿ, ಶಿವಾನಂದ ಟವಳಿ, ಹನುಮಂತ ದೊಡ್ಡಮನಿ, ಜಿಲ್ಲಾ ಮಾತಂಗ ಸಮಿತಿ ಜಿಲ್ಲಾಧ್ಯಕ್ಷ ಶ್ರೀಕಾಂತ ಪೂಜಾರಿ ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next