ರಾಮದುರ್ಗ: ಸುರೇಬಾನದಿಂದ ಹಂಪಿಹೊಳಿ, ಬೆನ್ನೂರ, ಚಿಕ್ಕತಡಸಿ, ಹಿರೇತಡಸಿ ಮಾರ್ಗವಾಗಿ ಸಂಚರಿಸುವ ಬಸ್ ಸಮಯಕ್ಕೆ ಸರಿಯಾಗಿ ಬಾರದಿರುವ ಕಾರಣದಿಂದ ಆಕ್ರೋಶಗೊಂಡ ಚಿಕ್ಕತಡಸಿ ಗ್ರಾಮಸ್ಥರು ವಿದ್ಯಾರ್ಥಿಗಳೊಂದಿಗೆ ಬಸ್ ತಡೆದು ಪ್ರತಿಭಟನೆ ನಡೆಸಿದರು.
ಬೆಳಗ್ಗೆ 9ಗಂಟೆಗೆ ಬರಬೇಕಾದ ಬಸ್ 11:30ಕ್ಕೆ ಚಿಕ್ಕತಡಸಿ ಗ್ರಾಮಕ್ಕೆ ಆಗಮಿಸಿದ್ದರಿಂದ ಆಕ್ರೋಶಗೊಂಡ ವಿದ್ಯಾರ್ಥಿಗಳು ಹಾಗೂ ಪಾಲಕರು ಬಸ್ ತಡೆದು ಅಧಿಕಾರಿಗಳ ಕ್ರಮಕ್ಕೆ ಆಕ್ರೋಶ ವ್ಯಕ್ತಪಡಿಸಿದರು.
ಹಂಪಿಹೊಳಿ, ಚಿಕ್ಕತಡಸಿ ಸೇರಿದಂತೆ ತಾಲೂಕಿನ ವಿವಿಧ ಗ್ರಾಮಗಳ ವಿದ್ಯಾರ್ಥಿಗಳು ಸುರೇಬಾನ, ರಾಮದುರ್ಗದಲ್ಲಿರುವ ಶಾಲಾ-ಕಾಲೇಜುಗಳಿಗೆ ಪ್ರತಿದಿನ ಬರಬೇಕಾದರೆ ಕಾಲೇಜು ವಿದ್ಯಾರ್ಥಿಗಳಿಗೆ ಬೆಳಗ್ಗೆ 6ಗಂಟೆಗೆ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಬೆಳಗ್ಗೆ 9 ಗಂಟೆಗೆ ಹಾಗೂ ಮರಳಿ ವಿದ್ಯಾರ್ಥಿಗಳು ತಮ್ಮ ಮನೆ ಸೇರಲು ಸಂಜೆ 5ಗಂಟೆಗೆ ಬಸ್ ಸಮಯ ನಿಗ ದಿ ಮಾಡಲಾಗಿದೆ. ಆದರೆ ಕಳೆದ ನಾಲ್ಕೈದು ತಿಂಗಳಿಂದ ಸಮಯಕ್ಕೆ ಸರಿಯಾಗಿ ಬಸ್ ಬರದೆ ತಮ್ಮ ಮಕ್ಕಳ ವ್ಯಾಸಂಗಕ್ಕೆ ತೊಂದರೆಯಾಗುತ್ತಿದೆ ಎಂದು ಆರೋಪಿಸಿದರು.
ಸ್ಥಳೀಯ ಜನಪ್ರತಿನಿ ಧಿಗಳು, ಸಾರಿಗೆ ಇಲಾಖೆ ಅಧಿಕಾರಿಗಳು ವಿದ್ಯಾರ್ಥಿಗಳ ವ್ಯಾಸಂಗದ ಕಡೆಗೆ ಗಮನ ಹರಿಸದೇ ಬೇಜವಾಬ್ದಾರಿಯಿಂದ ವರ್ತಿಸುತ್ತಿದ್ದಾರೆ ಎಂದು ಮಕ್ಕಳ ಪಾಲಕರು ಆಕ್ರೋಶ ವ್ಯಕ್ತಪಡಿಸಿದರು. ನಂತರ ಸಮಯ ಮೀರಿ ಬಂದ್ ಬಸ್‌ನ್ನೇ ವಿದ್ಯಾರ್ಥಿಗಳ ಶಾಲಾ ಆವರಣದೊಳಕ್ಕೆ ತೆಗೆದುಕೊಂಡು ಹೋಗಲಾಯಿತು. ನಂತರ ಮೊದಲಿನಂತೆ ಬೆಳಗ್ಗೆಯಿಂದ ಸಂಜೆವರೆಗೆ ಸುರೇಬಾನದಿಂದ ಕುಳಗೇರಿ ಕ್ರಾಸ್ ವರೆಗೆ ಒಂದು ಪ್ರತ್ಯೇಕ ಬಸ್ ಸಂಚಾರ ವ್ಯವಸ್ಥೆಗೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಕ್ರಮ ತೆಗೆದುಕೊಳ್ಳಬೇಕು. ಇಲ್ಲವಾದಲ್ಲಿ ಸಾರಿಗೆ ಘಟಕದ ಎದುರು ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಗ್ರಾಮಸ್ಥರು ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ನಾಗನಗೌಡ ಕುಲಕರ್ಣಿ, ಶಿವನಗೌಡ ಕುಲಕರ್ಣಿ, ಸಂತೋಷ ಹರನಟ್ಟಿ, ಹೊಳಬಸು ಹರನಟ್ಟಿ, ಕಲ್ಲನಗೌಡ ಪಾಟೀಲ ಸೇರಿದಂತೆ ವಿದ್ಯಾರ್ಥಿಗಳು ಪಾಲ್ಗೊಂಡಿದರು.