ಮುದ್ದೇಬಿಹಾಳ: ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಯೊಬ್ಬ ಪತ್ತೆಯಾಗಿರುವ ಘಟನೆ ತಾಲೂಕಿನ ನಾಗರಬೆಟ್ಟದಲ್ಲಿ ನಡೆದಿದೆ.
ದ್ವಿತೀಯ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಅಜಯಕುಮಾರ ನುಚ್ಚಿ (17) ಮೃತ ವಿದ್ಯಾರ್ಥಿ ಎಂದು ತಿಳಿದು ಬಂದಿದೆ.
ಈತನ ಶವ ಕಾಲೇಜಿನ ಹೊಸ ಕಟ್ಟಡದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ ಆಗಿದೆ. ಮೂಗಿನಲ್ಲಿ ರಕ್ತ ಬಂದಿರುವುದು, ನಾಲಿಗೆ ಕಚ್ಚದಿರುವುದು ಅನುಮಾನಕ್ಕೆ ಪುಷ್ಠಿ ನೀಡುತ್ತಿದ್ದು ಮಗನ ಸಾವಿನಲ್ಲಿ ಸಂಶಯ ಇದೆ ಎಂದು ವಿದ್ಯಾರ್ಥಿಯ ತಂದೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಮುದ್ದೇಬಿಹಾಳ ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಿ, ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಕೈಕೊಂಡಿದ್ದಾರೆ.