ಚಿಕ್ಕಮಗಳೂರು: ಬೆಂಗಳೂರಿನಿಂದ ಕಾಫಿನಾಡಿಗೆ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಯೊಬ್ಬ ಶೃಂಗೇರಿಯ ತುಂಗಾ ನದಿಯಲ್ಲಿ ನೀರುಪಾಲಾಗಿರುವ ಘಟನೆ ಶೃಂಗೇರಿ ಶಾರದಾಂಬೆ ದೇಗುಲದ ಸಮೀಪ ನಡೆದಿದೆ.
Advertisement
ಜಿಗಣಿ ಕೃಷ್ಣ ಕಾಲೇಜಿನಲ್ಲಿ ದ್ವಿತೀಯ ಪದವಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಚಂದನ್ ಮೃತ ದುರ್ದೈವಿ ಎಂದು ತಿಳಿದು ಬಂದಿದೆ.
60ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಕಾಲೇಜಿನಿಂದ ಪ್ರವಾಸ ಬಂದಿದ್ದರು. ಈ ವೇಳೆ ತುಂಗಾ ನದಿಯಲ್ಲಿ ಈಜು ಹೋದಾಗ ಚಂದನ್ ನದಿಯಲ್ಲಿ ಮುಳುಗಿ ಸಾವನ್ನಪಿದ್ದಾನೆ ಎಂದು ತಿಳಿದು ಬಂದಿದೆ.
ಶೃಂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
Related Articles
Advertisement