Advertisement
ಕೇರಳದಲ್ಲಿ ಯೋಜನೆ ಆರಂಭ: 2010ರಲ್ಲಿ ಕೇರಳ ಸರ್ಕಾರ ಅಲ್ಲಿನ ಶಾಲೆಗಳಲ್ಲಿ ಈ ಯೋಜನೆ ಆರಂಭಿಸಿತು. ಅದರಂತೆ ಮಕ್ಕಳಲ್ಲಿ ನವ ನಾಗರಿಕ ಸಮಾಜದ ಸುಧಾರಣೆಗಾಗಿ ನಾಗರಿಕ ಜ್ಞಾನ, ಸಂವಿಧಾನ, ಕಾನೂನು ಅರಿವು ಮೂಡಿಸಿ ನಾಯಕತ್ವ, ಧೈರ್ಯ, ಆತ್ಮ ವಿಶ್ವಾಸ, ಸ್ವಯಂ ಶಿಸ್ತು, ಸಹಾನುಭೂತಿಯಂತಹ ನೈತಿಕ ಮೌಲ್ಯಗಳನ್ನು ಬೆಳಸಿ ಸಾಮಾಜಿಕ ಸುಧಾರಣೆ ಮಾಡುವುದು ಈ ಯೋಜನೆಯ ಧ್ಯೇಯವಾಗಿದೆ ಎಂದು ಹೇಳಿದರು.
Related Articles
Advertisement
ಅದರಲ್ಲೂ ಮೊಬೈಲ್ ನಮ್ಮ ದೇಹದ ಒಂದು ಅವಿಭಾಜ್ಯ ಅಂಗ ಎನ್ನುವ ಮಟ್ಟಕ್ಕೆ ನಮ್ಮನ್ನ ಆವರಿಸಿದೆ. ಆದರೆ ವಿದ್ಯಾರ್ಥಿಗಳಿಗೆ ಅದು ಅನವಶ್ಯಕ. ಸ್ವ-ಶಿಸ್ತು ಇದ್ದರೆ ಕುಟುಂಬ ಮತ್ತು ಸಮಾಜ ಆರೋಗ್ಯವಾಗಿರುತ್ತದೆ. ಹಾಗಾಗಿ ಮಕ್ಕಳ ಕೌಟುಂಬಿಕ ಸಮಸ್ಯೆಯ ಕುರಿತು ದೂರು ನೀಡಲು ಶಾಲೆಗಳಿಗೆ ನಿಗದಿತ ಸಮಯವನ್ನು ಕೊಟ್ಟಿದ್ದೇವೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತಿ ಉಪಾಧ್ಯಕ್ಷ ಮಹೇಶ್, ತರಬೇತಿಗೆ ಆಯ್ಕೆಯಾದ ಶಾಲೆಗಳ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.
ಸ್ವಯಂ ರಕ್ಷಣಾ ಕಲೆ ತರಬೇತಿ: ತರಬೇತಿಯಲ್ಲಿ ವಿದ್ಯಾರ್ಥಿಗಳಿಗೆ ಶಿಸ್ತು, ಮಾನಸಿಕ ಮತ್ತು ದೈಹಿಕ ಸದೃಢತೆ, ಸ್ವಯಂ ರಕ್ಷಣಾ ಕಲೆ ಬಗ್ಗೆ ಪ್ರಾಯೋಗಿಕವಾಗಿ ತರಬೇತುಗೊಳಿಸಲಾಗುತ್ತದೆ. ಸಂಚಾರಿ ನಿಯಮಗಳು, ಅಪರಾಧಗಳನ್ನ ತಡೆಯುವುದರ ಬಗ್ಗೆಯೂ ತಿಳಿಸಬೇಕು. ಸಮಾಜದಲ್ಲಿರುವ ದುಶ್ಚಟಗಳಾದ ಡ್ರಗ್ಸ್, ಅಫೀಮು, ಸಿಗರೇಟ್, ಗುಟ್ಕಾ, ಮದ್ಯಪಾನದಂತಹ ದುಶ್ಚಟಗಳ ನಿರ್ಮೂಲನೆ ಮಾಡುವುದು ಮತ್ತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಬಗ್ಗೆ ತರಬೇತಿಯನ್ನು ನೀಡಬೇಕು. ವಿದ್ಯಾರ್ಥಿ ಜೀವನದಲ್ಲಿ ಎಲ್ಲವನ್ನೂ ಸಾಧಿಸುವ ಹಂಬಲರುವುದರಿಂದ ರಚನಾತ್ಮಕ ಯೋಜನೆಗಳನ್ನು ಅಳವಡಿಸಿಕೊಂಡು ಸಮಾಜಕ್ಕೆ ಉತ್ತಮವಾದ ಕೊಡುಗೆಯನ್ನು ನೀಡಬೇಕು ಎಂದು ಜಿಲ್ಲಾಧಿಕಾರಿ ಅಕ್ರಂಪಾಷಾ ಸೂಚಿಸಿದರು.
ಧನಾತ್ಮಕ ಚಿಂತನೆ ಅಗತ್ಯ: ಅಧ್ಯಕ್ಷತೆ ವಹಿಸಿದ್ದ ಕೆಎಸ್‌ಆರ್‌ಪಿ 11ನೇ ಬೆಟಾಲಿಯನ್‌ನ ಕಮಾಂಡೆಂಟ್ ಕೃಷ್ಣಪ್ಪ ಅವರು ಮಾತನಾಡಿ, ಪ್ರತಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಪಠ್ಯ ಶಿಕ್ಷಣದ ಜೊತೆಯಲ್ಲಿ ಇತರೆ ಸಾಮಾಜಿಕ ಕಾರ್ಯಗಳನ್ನು ಮಾಡುವಂತೆ ಪ್ರೋತ್ಸಾಹಿಸಬೇಕು. ವಿದ್ಯಾರ್ಥಿಗಳು ಯಾವಾಗಲೂ ಧನಾತ್ಮಕ ಅಥವಾ ರಚನಾತ್ಮಕ ಯೋಚನೆಗಳನ್ನು ರೂಪಿಸಿಕೊಳ್ಳಬೇಕು ಎಂದರು. ಭಾರತವು ಜಗತ್ತಿನಲ್ಲಿಯೇ ಅತಿ ಹೆಚ್ಚು ನೈಸರ್ಗಿಕ ಸಂಪತ್ತು ಹೊಂದಿರುವ ಶ್ರೀಮಂತ ರಾಷ್ಟ್ರ. ಆದರೆ ಅದನ್ನ ಉಳಿಸಿಕೊಳ್ಳುವ ಪ್ರಜ್ಞೆ ನಮ್ಮಲ್ಲಿಲ್ಲ. ಹೀಗೆಯೇ ಮುಂದುವರಿದರೆ ಮುಂದಿನ ದಿನಗಳಲ್ಲಿ ನಾವೆಲ್ಲ ಆಮ್ಲಜನಕದ ಬಾರ್‌ಗಳಿಗೆ ಹೋಗುವ ಸ್ಥಿತಿ ನಿರ್ಮಾಣವಾಗುತ್ತದೆಂದು ಆತಂಕ ವ್ಯಕ್ತಪಡಿಸಿದರು.