Advertisement
ಶಾಲೆಯಲ್ಲಿ ಕಳೆದ ಹದಿನೈದು ದಿನಗಳ ಹಿಂದೆ ನೀರಿನ ಸಮಸ್ಯೆ ಆದಾಗ ಅಲ್ಲಿಯ ಶಾಲಾ ಸಮಿತಿಯವರು ಟ್ಯಾಂಕರ್ ಮೂಲಕ ಶಾಲೆಗೆ ಕುಡಿಯುವ ನೀರು ಸರಬರಾಜು ಮಾಡಿದ್ದರು. ನಂತರ ಫೆ.15ರಂದು ಕಾತೂರ ಗ್ರಾಪಂಗೆ ಮನವಿ ಸಲ್ಲಿಸಿದ್ದರು. ಆದರೂ ಸಹ ಪಂಚಾಯಿತಿಯವರು ಮೌನವಹಿಸಿದ್ದರಿಂದ ಆಕ್ರೋಶಗೊಂಡ ಶಾಲಾ ವಿದ್ಯಾರ್ಥಿಗಳು ಹಾಗೂ ಶಾಲಾ ಸಮಿತಿಯವರು ಜೊತೆಯಾಗಿ ಶಿರಸಿ ಹುಬ್ಬಳ್ಳಿ ರಾಜ್ಯ ಹೆದ್ದಾರಿ ಮೇಲೆ ಕುಳಿತು ಸಂಚಾರ ತಡೆ ನಡೆಸಿ ಪ್ರತಿಭಟಿಸಿದರು.
ಅಕ್ಕಮಹಾದೇವಿ ಗಾಣಗೇರ, ಪ್ರಭಾರ ಬಿಇಒ ಮುಂಡಗೋಡ ಪ್ರತಿಭಟನಾಕಾರರ ಮನವೊಲಿಕೆ: ಶಿರಸಿ ಹುಬ್ಬಳ್ಳಿ ರಾಜ್ಯ ಹೆದ್ದಾರಿಯ ಮೇಲೆ ಕುಳಿತು ಪ್ರತಿಭಟನೆ ನಡೆಸುತ್ತಿದ್ದ ಹಿನ್ನೆಲೆಯಲ್ಲಿ ಅರ್ಧ ಗಂಟೆಗಳ ಕಾಲ ಎರಡು ಬದಿಯಲ್ಲಿ ವಾಹನಗಳು ಸಾಲಾಗಿ ನಿಂತು ಪ್ರಯಾಣಿಕರು ಪರದಾಡುವಂತಾಯಿತು. ಮಾಹಿತಿ ತಿಳಿದು ಸ್ಥಳಕ್ಕಾಗಮಿಸಿದ ಸಿಪಿಐ ಸಿದ್ದಪ್ಪ ಸಿಮಾನಿ ಹಾಗೂ ಪಿಎಸ್‌ಐ ಯಲ್ಲಾಲಿಂಗ ಕುನ್ನೂರ ಪ್ರತಿಭಟನಾಕಾರರ ಮನವೊಲಿಸಿ ನೀರಿನ ಸಮಸ್ಯೆ ಬಗೆಹರಿಸಲು ಪ್ರಯತ್ನಿಸಲಾಗುವುದು ಎಂದುಹೆದ್ದಾರಿ ಮೇಲೆ ಕುಳಿತಿರುವವರನ್ನು ತೆರವುಗೊಳಿಸಿ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ನಂತರ ಶಾಲೆಗೆ ಟ್ರಾಕ್ಟರ್ ಮೂಲಕ ನೀರು ಪೂರೈಸಲಾಯಿತು.