ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಮಾರ್ಟಳ್ಳಿಯ ಸೇಂಟ್ ಮೇರೀಸ್ ಸಂಯುಕ್ತ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಯೋರ್ವನಿಗೆ ಕೋವಿಡ್ ಸೋಂಕು ತಗುಲಿದ್ದು ತರಗತಿಗಳಿಗೆ ರಜೆ ನೀಡಲಾಗಿದೆ.
ಪ್ರಥಮ ಪಿಯುಸಿ ವಿದ್ಯಾರ್ಥಿಗೆ ಸೋಂಕು ತಗುಲಿರುವುದು ಇಂದು ಗೊತ್ತಾದ ಹಿನ್ನೆಲೆಯಲ್ಲಿ ಕಾಲೇಜಿಗೆ ರಜೆ ಘೋಷಿಸಲಾಗಿದೆ
ಈ ಕಾಲೇಜಿನ ಪ್ರಥಮ ಪಿಯುಸಿ ವಿಭಾಗದಲ್ಲಿ ಒಟ್ಟು 142 ವಿದ್ಯಾರ್ಥಿಗಳು, ದ್ವಿತೀಯ ಪಿಯುಸಿಯಲ್ಲಿ 91 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ.
ಇದನ್ನೂ ಓದಿ:ಭಾರತದಲ್ಲಿ 40 ಸಾವಿರ ಕೋವಿಡ್ ಸೋಂಕು ಪ್ರಕರಣ ಪತ್ತೆ, 3 ತಿಂಗಳಲ್ಲಿ ಗರಿಷ್ಠ ಏರಿಕೆ
ತರಗತಿ ಕೋಣೆಗಳನ್ನು ಸ್ಯಾನಿಟೈಸೇಶನ್ ಮಾಡಲು ಸೂಚಿಸಲಾಗಿದೆ. ಎಲ್ಲ ವಿದ್ಯಾರ್ಥಿಗಳ ಗಂಟಲು ಮಾದರಿ ಪರೀಕ್ಷೆ ಮಾಡಿಸಲಾಗುವುದು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೃಷ್ಣಮೂರ್ತಿ ಉದಯವಾಣಿಗೆ ತಿಳಿಸಿದರು.
ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಪಿಯು ಕಾಲೇಜುಗಳಲ್ಲೂ ವಿದ್ಯಾರ್ಥಿಗಳ ನಡುವೆ ಭೌತಿಕ ಅಂತರ ಕಾಪಾಡಬೇಕು. ಮಾಸ್ಕ್ ಧರಿಸಬೇಕು, ಸ್ಯಾನಿಟೈಸರ್ ನೀಡಬೇಕು ಎಂದು ಪ್ರಾಂಶುಪಾಲರಿಗೆ ಸೂಚನೆ ನೀಡಲಾಗಿದೆ ಎಂದು ಅವರು ತಿಳಿಸಿದರು.