Advertisement

ಹಾಸ್ಟೆಲ್ ವಿದ್ಯಾರ್ಥಿನಿಯರ ಜೊತೆ ಅಸಭ್ಯ ವರ್ತನೆ: ಶಿಕ್ಷಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಹುಡುಗಿಯರು

03:23 PM Dec 15, 2022 | Team Udayavani |

ಮಂಡ್ಯ: ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿಯರ ಜೊತೆ ಅಸಭ್ಯ ವರ್ತನೆ ತೋರಿದ ಮುಖ್ಯ ಶಿಕ್ಷಕನಿಗೆ ವಿದ್ಯಾರ್ಥಿನಿಯರೇ ಸೇರಿ ಹಿಗ್ಗಾಮುಗ್ಗಾ ಥಳಿಸಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಇದೀಗ ವೈರಲ್ ಆಗಿದೆ.

Advertisement

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಕಟ್ಟೇರಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಮುಖ್ಯ ಶಿಕ್ಷಕ ಚಿನ್ಮಯ ಆನಂದ ಮೂರ್ತಿಗೆ ಹುಡುಗಿಯರು ಧರ್ಮದೇಟು ನೀಡಿ ಪಾಠ ಕಲಿಸಿದ್ದಾರೆ.

ಶಿಕ್ಷಕ ಚಿನ್ಮಯ ಆನಂದ ಮೂರ್ತಿ ತಡರಾತ್ರಿ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ಜೊತೆ ಅಸಭ್ಯ ವರ್ತನೆ ತೋರಿದ್ದಾನೆ. ತಕ್ಷಣವೇ ಎಚ್ಚೆತ್ತ ವಿದ್ಯಾರ್ಥಿನಿ ಸಹಪಾಠಿಗೆ ಮಾಹಿತಿ ನೀಡಿದ್ದಾಳೆ. ಕೂಡಲೇ ಕೈಯಲ್ಲಿ ಕೋಲು -ದೊಣ್ಣೆ ಹಿಡಿದ ವಿದ್ಯಾರ್ಥಿನಿಯರು ಕಾಮುಕ ಶಿಕ್ಷನ ಮೇಲೆ ದಾಳಿ ನಡೆಸಿದ್ದಾರೆ.

ಇದನ್ನೂ ಓದಿ:ಸಾಗರ: ಪ್ರವಾಸಕ್ಕೆ ಬಂದಿದ್ದ ಶಾಲಾ ಬಸ್‌ ಪಲ್ಟಿ; 5 ವಿದ್ಯಾರ್ಥಿಗಳು ಗಂಭೀರ

ಸ್ಥಳಕ್ಕೆ ಕೆ.ಆರ್.ಎಸ್ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisement

ವಿಡಿಯೋ ಬ್ಲ್ಯಾಕ್ ಮೇಲ್: ಶಿಕ್ಷಕನನ್ನು ಹಿಡಿದು ವಿಚಾರಣೆ ನಡೆಸಿದ ಪೊಲೀಸರು ಇನ್ನೂ ಹಲವು ವಿಚಾರಗಳನ್ನು ಬಹಿರಂಗ ಪಡಿಸಿದ್ದಾರೆ. ಶಿಕ್ಷಕನ ಕಾಮ ಪುರಾಣದ ಬಗ್ಗೆ ಈತನ ಮೊಬೈಲ್ ನಲ್ಲಿ ಮತ್ತಷ್ಟು ಮಾಹಿತಿ ತೊರಕಿದೆ. ಈತ ಶಿಕ್ಷಕಿಯೊಬ್ಬರನ್ನೂ ತಮ್ಮ ಕಾಮತೃಷೆಗೆ ಬಳಸಿಕೊಂಡಿದ್ದು, ಶಿಕ್ಷಕಿ ಜೊತೆಗಿನ ಖಾಸಗಿ ಕ್ಷಣಗಳ ವಿಡಿಯೋ ಮೊಬೈಲ್ ನಲ್ಲಿ ಸೆರೆಯಾಗಿದೆ. ವಿದ್ಯಾರ್ಥಿನಿಯರಿಗೆ ಆ ವಿಡಿಯೋ ತೋರಿಸಿ ತನ್ನ ಜೊತೆ ಸಹಕರಿಸದಿದ್ದರೆ ಪರೀಕ್ಷೆಯಲ್ಲಿ ಫೇಲ್ ಮಾಡುವ ಬೆದರಿಕೆವೊಡ್ಡಿದ್ದ ಎನ್ನಲಾಗಿದೆ.

ವಜಾಗೆ ಸೂಚನೆ: ಆರೋಪಿ ಶಿಕ್ಷಕನನ್ನು ವಜಾ ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಅವರು ಜಿಪಂ ಕೆಡಿಪಿ ಸಭೆಯಲ್ಲಿ ಜಿಲ್ಲಾಧಿಕಾರಿ ಹಾಗೂ ಸಿಇಒಗೆ ಸೂಚನೆ ನೀಡಿದ್ದಾರೆ.

ಹೆಣ್ಣು ಮಕ್ಕಳ ಧೈರ್ಯ ಸಮಾಜಕ್ಕೆ ಮಾದರಿಯಾಗಿದೆ. ಶಿಕ್ಷಕನನ್ನು ಸಾರ್ವಜನಿಕವಾಗಿ ಮೆರವಣಿಗೆ ನಡೆಸಿ ಇನ್ನು ಮುಂದೆ ಈ ರೀತಿಯಾಗದಂತೆ ಎಚ್ಚರಿಕೆ ನೀಡುವ ಕೆಲಸವನ್ನು ಪೊಲೀಸ್ ಇಲಾಖೆ ಕ್ರಮ ವಹಿಸಬೇಕು. ಆತನ ವಿರುದ್ಧ ಕ್ರಮ ಕೈಗೊಂಡು ಕಠಿಣ ಕ್ರಮ ವಹಿಸುವಂತೆ ಎಎಸ್ಪಿಗೆ ಸೂಚನೆ ನೀಡಿದ್ದೇನೆ. ಮುಂದಿನ ಶೌರ್ಯ ಪ್ರಶಸ್ತಿಗೆ ಆ ಹೆಣ್ಣು ಮಕ್ಕಳನ್ನು ಶಿಫಾರಸು ಮಾಡುವಂತೆ ತಿಳಿಸಿದ್ದೇನೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next