Advertisement

ಉಪನ್ಯಾಸಕನಿಗೆ ವಿದ್ಯಾರ್ಥಿಗಳಿಂದ ಬಿತ್ತು ಧರ್ಮದೇಟು

09:37 AM May 28, 2019 | Team Udayavani |

ದಾವಣಗೆರೆ: ವಿದ್ಯಾರ್ಥಿನಿಯರಿಗೆ ಅಶ್ಲೀಲ ಮೆಸೇಜ್‌ ಮಾಡುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಗಳೇ ಉಪನ್ಯಾಸಕನಿಗೆ ಥಳಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಘಟನೆ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Advertisement

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಬಿ.ಕೆ. ಬಸವರಾಜ್‌ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಕೊಡುತ್ತಿದ್ದ ಎನ್ನಲಾಗುತ್ತಿದೆ. ಕಳೆದ ಹಲವು ದಿನಗಳಿಂದ ಕೆಲ ವಿದ್ಯಾರ್ಥಿನಿಯರ ಜೊತೆ ಅಸಭ್ಯವಾಗಿ ವರ್ತಿಸುತ್ತಾ, ಮೊಬೈಲ್ನಲ್ಲಿ ಮೆಸೇಜ್‌ ಮಾಡುತ್ತಾ ಕಿರುಕುಳ ನೀಡುತ್ತಿದ್ದ ಎಂಬ ಕಾರಣದಿಂದ ಆಕ್ರೋಶಗೊಂಡ ವಿದ್ಯಾರ್ಥಿಗಳು ಬಸವರಾಜ್‌ಗೆ ಥಳಿಸಿದಾಗ ಆತ ತಪ್ಪು ಒಪ್ಪಿಕೊಂಡ ಘಟನೆಯೂ ನಡೆದಿದೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಕಾಲೇಜು ಪ್ರಾಂಶುಪಾಲ ತೂ.ಕ. ಶಂಕರಯ್ಯ ಮಾತನಾಡಿ, ನಾನು ರಜೆಯಲ್ಲಿ ಇದ್ದಿದ್ದರಿಂದ ಶನಿವಾರ ನಡೆದ ಈ ಗಲಾಟೆ ಬಗ್ಗೆ ಸರಿಯಾಗಿ ಮಾಹಿತಿ ಗೊತ್ತಿಲ್ಲ. ಈ ಹಿಂದೆ ಎನ್‌.ಆರ್‌. ಪುರದ ಸರ್ಕಾರಿ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಬಿ.ಕೆ. ಬಸವರಾಜ್‌, ಯಾವುದೋ ದೂರಿನ ಹಿನ್ನೆಲೆಯಲ್ಲಿ ಕಳೆದ ಮೂರ್‍ನಾಲ್ಕು ವರ್ಷಗಳ ಹಿಂದೆ ನಮ್ಮ ಕಾಲೇಜಿಗೆ ವರ್ಗಾವಣೆ ಮಾಡಿಸಿಕೊಂಡು ಬಂದಿದ್ದರು.

ನಮ್ಮ ಕಾಲೇಜಿನಲ್ಲಿ ಉಪನ್ಯಾಸಕ ಬಿ.ಕೆ. ಬಸವರಾಜ್‌, ವಿದ್ಯಾರ್ಥಿನಿಯರಿಗೆ ಅಸಭ್ಯವಾಗಿ ಮೆಸೇಜ್‌ ಮಾಡುತ್ತಿದ್ದರು ಎಂಬ ದೂರುಗಳು ಇದೀಗ ಕೇಳಿಬಂದಿವೆ. ಆದರೆ, ಘಟನೆ ಬಗ್ಗೆ ವಿದ್ಯಾರ್ಥಿನಿಯರಾಗಲಿ, ಪೋಷಕರಾಗಲಿ ಯಾರೂ ದೂರು ಸಲ್ಲಿಸಲು ಬಂದಿಲ್ಲ. ಒಂದು ವೇಳೆ ಪೊಲೀಸರಿಗೆ ದೂರು ನೀಡಿದ್ದಲ್ಲಿ, ನೋಟಿಸ್‌ ನೀಡಲಾಗುತ್ತದೆ. ಮುಂದಿನ ಕ್ರಮವನ್ನು ಶಿಕ್ಷಣ ಇಲಾಖೆ ಕೈಗೊಳ್ಳಲಿದೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next