Advertisement
1ರಿಂದ 9ನೇ ತರಗತಿ ವಿದ್ಯಾರ್ಥಿಗಳನ್ನು ಮೌಲ್ಯಮಾಪನ ಅಥವಾ ಪರೀಕ್ಷೆ ನಡೆಸಿಯೇ ತೇರ್ಗಡೆ ಮಾಡಲಾಗುವುದು ಎಂದು ಸರಕಾರ ಈಗಾಗಲೇ ಸ್ಪಷ್ಪಪಡಿಸಿದೆ. 6ರಿಂದ ಮೇಲ್ಪಟ್ಟ ತರಗತಿಗಳ ವಿದ್ಯಾರ್ಥಿಗಳಿಗೆ ನಿತ್ಯವೂ ಶಾಲೆಯಲ್ಲೇ ತರಗತಿ ನಡೆಯುತ್ತಿರುವುದರಿಂದ ಪರ್ಯಾಯ ಕಲಿಕಾ ವಿಧಾನದ ಆಧಾರದಲ್ಲಿ ಮೌಲ್ಯಮಾಪನ ಹಾಗೂ ತರಗತಿ ಪರೀಕ್ಷೆಗಳು ನಡೆಸಲಾಗುತ್ತದೆ. ಆದರೆ, 1ರಿಂದ 5ನೇ ತರಗತಿ ವಿದ್ಯಾರ್ಥಿಗಳ ಮೌಲ್ಯಮಾಪನ ಹೇಗೆ ಎಂಬ ಬಗ್ಗೆ ಅಧಿಕಾರಿಗಳು ಒಂದು ಸುತ್ತಿನ ಚರ್ಚೆಯನ್ನು ನಡೆಸಿದ್ದಾರೆ. ಆದರೆ ಯಾವುದೇ ತೀರ್ಮಾನ ತೆಗೆದುಕೊಳ್ಳಲು ಸಾಧ್ಯವಾಗಿಲ್ಲ ಎಂಬ ಮಾಹಿತಿ “ಉದಯವಾಣಿ’ಗೆ ಲಭ್ಯವಾಗಿದೆ.
Related Articles
Advertisement
ಸರಕಾರಿ ಶಾಲೆಯಲ್ಲಿ 1ರಿಂದ 5ನೇ ತರಗತಿಗೆ ಆನ್‌ಲೈನ್ ತರಗತಿ ಅಥವಾ ಪೂರ್ವ ಮುದ್ರಿತ ವೀಡಿಯೋ ತರಗತಿ ನಡೆದಿಲ್ಲ. ಕೆಲವು ಶಾಲೆಗಳಲ್ಲಿ ಶಿಕ್ಷಕರು ವಿಶೇಷ ಆಸಕ್ತಿ ವಹಿಸಿ ಪಾಲಕ, ಪೋಷಕರ ವಾಟ್ಸ್‌ಆ್ಯಪ್ ಗ್ರೂಪ್‌ಗ್ಳನ್ನು ರಚಿಸಿಕೊಂಡು, ವಾರಕ್ಕೆ ಒಂದು ಅಥವಾ ಎರಡು ಪಠ್ಯಾಧಾರಿತ ಮಾಹಿತಿಗಳನ್ನು ಅಪ್‌ಲೋಡ್ ಮಾಡುತ್ತಿದ್ದರು. ರೇಡಿಯೋ ಪಾಠ ಪ್ರಸಾರವಾಗುತ್ತಿದೆ. ಆದರೆ, ಅದರ ಆಧಾರದಲ್ಲಿ ಮೌಲ್ಯಮಾಪನ ಸಾಧ್ಯವಿಲ್ಲ. ಹೀಗಾಗಿ ತೇರ್ಗಡೆ ಮಾಡುವುದು ಹೇಗೆ ಎಂಬುದರ ಬಗ್ಗೆ ಗಂಭೀರ ಚರ್ಚೆ ನಡೆಸುತ್ತಿದ್ದೇವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
6ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ತರಗತಿ ನಡೆಯುತ್ತಿರುವುದರಿಂದ ಮೌಲ್ಯಮಾಪನ ಮಾಡುವುದು ಸುಲಭ. ಆದರೆ, 1ರಿಂದ 5ನೇ ತರಗತಿ ಮಕ್ಕಳಿಗೆ ಭೌತಿಕ ತರಗತಿಗಳು ನಡೆಯದೆ ಇರುವುದರಿಂದ ಮೌಲ್ಯಮಾಪನ ಸವಾಲಾಗಿದೆ. ಈ ಬಗ್ಗೆ ಚರ್ಚೆ ನಡೆಸುತ್ತಿದ್ದು, ಒಂದೆರಡು ದಿನದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದ್ದೇವೆ. –ವಿ.ಅನ್ಬುಕುಮಾರ್, ಆಯುಕ್ತ, ಸಾರ್ವಜನಿಕ ಶಿಕ್ಷಣ ಇಲಾಖೆ