Advertisement
ಯುನಿರ್ವಸಿಟಿ ವಿಶ್ವೇಶ್ವರಯ್ಯ ಕಾಲೇಜ್ ಆಫ್ ಎಂಜಿನಿಯರಿಂಗ್(ಯುವಿಸಿಇ) ವತಿಯಿಂದ ಮಂಗಳವಾರ ನಗರದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪದವಿ ಪ್ರಧಾನ ಸಮಾರಂಭದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಭವಿಷ್ಯದಲ್ಲಿ ಹಿಂಜರಿಕೆ ಇಲ್ಲದೇ ಘನೆಯುತವಾಗಿ ಸಮಾಜದಲ್ಲಿ ಬದುಕವಂತ ಕಲೆ ರೂಪಿಸಿಕೊಳ್ಳಬೇಕು ಎಂದು ಹೇಳಿದರು.
ಸಿಟಿಎಸ್‌ನ ಮಾನವ ಸಂಪನ್ಮೂಲ ವಿಭಾಗದ ಹಿರಿಯ ನಿರ್ದೇಶಕ ಶ್ರೀಕಾಂತ್ ಶ್ರೀನಿವಾಸನ್ ಮಾತನಾಡಿ, ಆಧುನಿಕ ಜಗತ್ತಿಗೆ ತಕ್ಕಂತೆ ವಿದ್ಯಾರ್ಥಿಗಳ ಜ್ಞಾನದ ಮಟ್ಟವನ್ನು ಮೇಲ್ದರ್ಜೆಗೆ ಏರಿಸಿಕೊಳ್ಳುತ್ತಿರಬೇಕು. ಸ್ಪರ್ಧಾತ್ಮಕ ಜಗತ್ತಿನ ಏಳು ಬೀಳುಗಳನ್ನು ಅರ್ಥಮಾಡಿಕೊಂಡು ಮುಂದೆ ಸಾಗಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು. ಯುವಿಸಿಇ ನಿವೃತ್ತ ಪ್ರಾಂಶುಪಾಲ ಡಾ.ಕೆ. ಆರ್.ವೇಣುಗೋಪಾಲ್, ಪ್ರಾಂಶುಪಾಲ ಡಾ.ಪಿ.ವಿಜಯಕುಮಾರ್, ಕಾಲೇಜಿನ ಪ್ರಾಧ್ಯಾಪಕರು, ಸಿಬ್ಬಂದಿ ವರ್ಗ ಹಾಗೂ ಒಂದು ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಹಾಜರಿದ್ದರು.