Advertisement
ಆದರೆ ಜಿಲ್ಲೆಯ ವಸತಿ ನಿಲಯಗಳ ಪ್ರವೇಶಕ್ಕೆ ವಿದ್ಯಾರ್ಥಿಗಳು ಹಿಂದೇಟು ಹಾಕುತ್ತಿದ್ದಾರೆ. ಕಳೆದನಾಲ್ಕು ದಿನಗಳಲ್ಲಿ ಕೇವಲ 28 ವಿದ್ಯಾಥಿಗಳಷ್ಟೇ ವಸತಿ ನಿಲಯಗಳಲ್ಲಿ ವಾಸ್ತವ್ಯಕ್ಕೆ ಮುಂದಾಗಿದ್ದಾರೆ. ಸರ್ಕಾರದ ಆದೇಶದಂತೆ ಜಿಲ್ಲೆಯ ಸಮಾಜಕಲ್ಯಾಣ ಇಲಾಖೆ ಸಿಬ್ಬಂದಿ ವಸತಿ ನಿಲಯಗಳಿಗೆ ವಿದ್ಯಾರ್ಥಿಗಳನ್ನು ಸ್ವಾಗತಿಸಲು ಸಕಲ ಸಿದ್ಧತೆ ನಡೆಸಿದ್ದರು. ಆದರೆ ಬಹುತೇಕ ವಿದ್ಯಾರ್ಥಿಗಳು ಹಾಸ್ಟೆಲ್‌ಗೆ ಬರಲು ಹಿಂದೇಟು ಹಾಕಿದ್ದರಿಂದ ಸಮಾಜ ಇಲಾಖೆ ಸಿಬ್ಬಂದಿ ನಿರಾಸೆಗೊಂಡಿದ್ದಾರೆ.
Related Articles
Advertisement
ಸಕಲ ಸಿದ್ಧತೆ: ಜಿಲ್ಲೆಯ ಎಲ್ಲ ವಸತಿ ನಿಲಯಗಳು ವಿದ್ಯಾರ್ಥಿಗಳನ್ನು ಸ್ವಾಗತಿಸಲು ಸಕಲ ರೀತಿಯಲ್ಲಿ ಸಜ್ಜಾಗಿವೆ. ಸರ್ಕಾರದ ಮಾರ್ಗಸೂಚಿಯನ್ವಯ ಎಲ್ಲವಸತಿ ನಿಲಯ ಸ್ಯಾನಿಟೈಸೇಷನ್ ಮಾಡಲಾಗುತ್ತಿದೆ.ವಸತಿ ನಿಲಯಗಳ ಆಯಕಟ್ಟಿನ ಜಾಗದಲ್ಲಿಸ್ಯಾನಿಟೈಸರ್ ವ್ಯವಸ್ಥೆ ಮಾಡಲಾಗಿದೆ. ಅಡುಗೆ ಮನೆ, ವಿದ್ಯಾರ್ಥಿಗಳ ಕೊಠಡಿಗಳಲ್ಲಿ ಸ್ವತ್ಛತೆಕಾಯ್ದುಕೊಳ್ಳಲಾಗಿದೆ. ಜತೆಗೆ ವಿದ್ಯಾರ್ಥಿಗಳಕೊಠಡಿಗಳಲ್ಲಿ ಪರಸ್ಪರ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಬೆಡ್‌ಗಳ ವ್ಯವಸ್ಥೆ ಮಾಡಲಾಗಿದೆ. ಅಲ್ಲದೇ ಪ್ರತಿನಿತ್ಯ ಥರ್ಮಲ್ ಸ್ಕ್ರೀನಿಂಗ್ ಮಾಡುವುದು,ವಿದ್ಯಾರ್ಥಿಗಳ ಆರೋಗ್ಯ ಸ್ಥಿತಿ ದಾಖಲು ಮಾಡುವ ಕಾರ್ಯಕ್ಕೆ ಸಿಬ್ಬಂದಿ ತಯಾರಿ ನಡೆಸಿದ್ದಾರೆ.
ಸರ್ಕಾರದ ಮಾರ್ಗಸೂಚಿಯಂತೆ ವಸತಿ ನಿಲಯಗಳಲ್ಲಿ ಎಲ್ಲ ರೀತಿಯ ಮುಂಜಾಗ್ರತಾ ಕ್ರಮ ಕೈಗೊಂಡಿದ್ದು, ವಿದ್ಯಾರ್ಥಿಗಳ ಸ್ವಾಗತಕ್ಕೆ ಸಿಬ್ಬಂದಿ ಸಿದ್ಧರಾಗಿದ್ದಾರೆ. ಜಿಲ್ಲೆಯಲ್ಲಿಈವರೆಗೆ 28 ವಿದ್ಯಾರ್ಥಿಗಳು ವಸತಿ ನಿಲಯಗಳಿಗೆಆಗಮಿಸಿದ್ದು, ಕೊರೊನಾ ಆತಂಕದಿಂದಾಗಿ ಹೆಚ್ಚಾಗಿವಿದ್ಯಾರ್ಥಿಗಳು ಹಿಂದೇಟು ಹಾಕುತ್ತಿದ್ದಾರೆ. ಹಂತ ಹಂತವಾಗಿವಿದ್ಯಾರ್ಥಿಗಳು ವಸತಿ ನಿಲಯಗಳತ್ತ ಮುಖ ಮಾಡುವ ನೀರಿಕ್ಷೆಯಿದೆ. – ಚೈತ್ರಾ, ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ
ಕೋವಿಡ್ ಆತಂಕದಿಂದ ಪಾಲಕರು ವಸತಿ ನಿಲಯಕ್ಕೆ ಕಳುಹಿಸಲು ಹಿಂದೇಟು ಹಾಕುತ್ತಿದ್ದಾರೆ. ಕೋವಿಡ್ ಸ್ಥಿತಿಗತಿ ನೋಡಿಕೊಂಡು ಹಾಸ್ಟೆಲ್‌ಗೆ ಸೇರುವಂತೆ ಪಾಲಕರು ಹೇಳಿದ್ದಾರೆ. ಹೀಗಾಗಿ ಕೆಲವುದಿನಗಳ ನಂತರ ಹಾಸ್ಟೆಲ್‌ಗೆ ಸೇರಲು ಯೋಚಿಸುತ್ತಿದ್ದೇನೆ. –ಮಂಜುನಾಥ ನಾಯಕ, ವಿದ್ಯಾರ್ಥಿ
-ವೀರೇಶ ಮಡ್ಲೂರ