Advertisement

ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಗುರಿ ಇರಬೇಕು

11:31 AM Sep 29, 2018 | Team Udayavani |

ಮೈಸೂರು: ವಿದ್ಯಾರ್ಥಿಗಳು ದಿಕ್ಕು ತಪ್ಪದೆ, ವಿದ್ಯಾರ್ಥಿ ಜೀವನದಲ್ಲೇ ಬದುಕು ರೂಪಿಸಿಕೊಳ್ಳಲು ಶ್ರಮಿಸಬೇಕು ಎಂದು ಸಣ್ಣ ನೀರಾವರಿ ಇಲಾಖೆ ಸಚಿವ ಪುಟ್ಟರಾಜು ಸಲಹೆ ನೀಡಿದರು. ನಗರದ ವಿದ್ಯಾವರ್ಧಕ ಪ್ರಥಮ ದರ್ಜೆ ಕಾಲೇಜಿನ 40ನೇ ವರ್ಷದ ಸಂಭ್ರಮಾಚರಣೆ ಅಂಗವಾಗಿ ಏರ್ಪಡಿಸಿದ್ದ ಅಂತರ ಕಾಲೇಜು ಚರ್ಚಾ ಸ್ಪರ್ಧೆ ಹಾಗೂ ಭಾವಗೀತೆ ಗಾಯನ ಸ್ಪರ್ಧೆ ಉದ್ಘಾಟಿಸಿ ಅವರು ಮಾತನಾಡಿದರು.

Advertisement

ವಿದ್ಯಾರ್ಥಿ ಜೀವನ ಮತ್ತೆ ಸಿಗುವುದಿಲ್ಲ. ಹೀಗಾಗಿಯೇ ವಿದ್ಯಾರ್ಥಿ ಜೀವನ ತುಂಬಾ ಅಮೂಲ್ಯವಾದುದು. ಇಂತಹ ಜೀವನವನ್ನು ಸದುಪಯೋಗಪಡಿಸಿಕೊಂಡು ಓದಿನತ್ತ ಗಮನಹರಿಸಿ ಬದುಕು ರೂಪಿಸಿಕೊಳ್ಳುವ ಮೂಲಕ ತಂದೆ-ತಾಯಿ, ಗುರು, ಓದಿದ ಶಾಲೆಗೆ ಕೀರ್ತಿ ತರಬೇಕು ಎಂದು ಹೇಳಿದರು.

ಯುವ ಪೀಳಿಗೆಯಿಂದಾಗಿ ಭಾರತ ವಿಶ್ವಮಟ್ಟದಲ್ಲಿ ಅಭಿವೃದ್ಧಿ ಪಥದಲ್ಲಿ ದಾಪುಗಾಲಿಕ್ಕುತ್ತಿದೆ. ಆದರೂ ಇತ್ತೀಚಿನ ದಿನಗಳಲ್ಲಿ ಯುವ ಪೀಳಿಗೆ ದಿಕ್ಕು ತಪ್ಪುತ್ತಿರುವ ಅನೇಕ ಉದಾಹರಣೆಗಳು ಕಾಣಸಿಗುತ್ತವೆ. ನಾವು ಹಾಕಿಕೊಂಡಿರುವ ಗುರಿ ಮುಟ್ಟಲು ಅನೇಕ ಅಡೆತಡೆಗಳು ಎದುರಾಗುವುದು ಸಹಜ. ಅವುಗಳನ್ನೆಲ್ಲಾ ಮೆಟ್ಟಿ ನಿಂತು ಸನ್ಮಾರ್ಗದಲ್ಲಿ ಸಾಗುವ ಮೂಲಕ ಗುರಿ ಮುಟ್ಟಬೇಕು. ಆಗ ಮಾತ್ರ ರಾಷ್ಟ್ರದ ಸತøಜೆಯಾಗಲು ಸಾಧ್ಯ ಎಂದರು.

ವಿದ್ಯಾವರ್ಧಕ ಸಂಘ ಗ್ರಾಮೀಣ ವಿದ್ಯಾರ್ಥಿಗಳನ್ನು ಶಿಕ್ಷಿತರನ್ನಾಗಿಸುವ ಉತ್ತಮ ಕೆಲಸ ಮಾಡುತ್ತಿದೆ. ಈ ಸಂಸ್ಥೆಯಲ್ಲಿ ಶಿಕ್ಷಣಪಡೆದ ಅನೇಕ ಮಂದಿ ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿವಿಧ ಹುದ್ದೆಗಳಲ್ಲಿದ್ದು, ವಿದ್ಯೆ ಕಲಿತ ಸಂಸ್ಥೆಗೆ ಉತ್ತಮ ಹೆಸರು ತಂದಿದ್ದಾರೆ. ಅವರಂತೆಯೇ ನೀವು ರಾಷ್ಟ್ರದ ಸತøಜೆಗಳಾಗಿ ಹೊರ ಹೊಮ್ಮುವ ಮೂಲಕ ವಿದ್ಯಾಸಂಸ್ಥೆಗೆ ಕೀರ್ತಿತರಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ನಟ ಕೆ.ಸುಚೇಂದ್ರ ಪ್ರಸಾದ್‌,ವಿದ್ಯಾವರ್ಧಕ ಸಂಘದ ಅಧ್ಯಕ್ಷ ಗುಂಡಪ್ಪಗೌಡ, ಕಾರ್ಯದರ್ಶಿ ಪಿ.ವಿಶ್ವನಾಥ್‌, ಟಿ.ನಾಗರಾಜು ಲಕ್ಷ್ಮೀನಾರಾಯಣ ಮೊದಲಾದವರು ಉಪಸ್ಥಿತರಿದ್ದರು.

Advertisement

ಯುವಪೀಳಿಗೆ ದುಶ್ಚಟಗಳಿಂದ ದೂರವಿರಬೇಕು. ಉತ್ತಮ ಕೆಲಸಗಳಿಗೆ ಮಾತ್ರ ಸಾಮಾಜಿಕ ಜಾಲತಾಣಗಳನ್ನು ಬಳಸಬೇಕು. ಉನ್ನತ ವ್ಯಾಸಗಂದತ್ತ ಗುರಿ ಇರಬೇಕು. ದೇಶದ ಅಭಿವೃದ್ಧಿ ಪೂರಕ ಚಟುವಟಿಕೆಗಳಲ್ಲಿ ಭಾಗವಹಿಸುವ ಮನೋಭಾವ ಬೆಳೆಸಿಕೊಳ್ಳಬೇಕು.
-ಪುಟ್ಟರಾಜು, ಸಣ್ಣ ನೀರಾವರಿ ಸಚಿವ 

Advertisement

Udayavani is now on Telegram. Click here to join our channel and stay updated with the latest news.

Next