Advertisement
ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು.ಜಿಲ್ಲಾ ವಿಶ್ವಕರ್ಮ ಸಮಾಜದ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಮುಖಂಡರು ಹಾಗೂ ವಿದ್ಯಾರ್ಥಿಗಳು ನಗರದ ಮಾಣಿಕ್ ಪ್ರಭು ದೇವಸ್ಥಾನದಿಂದ ಡಿಸಿಕಚೇರಿವರೆಗೆ ಬೃಹತ್ ಪ್ರತಿಭಟನೆ ನಡೆಸಿದರು. ನಟಿ ಹರ್ಷಿಕಾ ಪೂಣಚ್ಚ, ನಟ ಭುವನ್ ಕೂಡ ಪ್ರತಿಭಟನೆಯಲ್ಲಿಪಾಲ್ಗೊಂಡಿದ್ದರು. ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಕಚೇರಿಯೊಳಗೆ ನುಗ್ಗಲೆತ್ನಿಸಿದಾಗ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು. ಈ ವೇಳೆ, ಆಕ್ರೋಶಗೊಂಡ ಯುವಕರು ಕಲ್ಲು ತೂರಾಟ ನಡೆಸಿದರು.
ಮೇಲೆ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಮುಂದಾದಾಗ, ಪೊಲೀಸರು ಅವರನ್ನು ತಡೆದು, ರಿಮ್ಸ್‌ಗೆ ಕರೆದೊಯ್ದರು.ಸ್ಥಳಕ್ಕೆ ಆಗಮಿಸಿದ ಜಿಲ್ಲಾ ಧಿಕಾರಿ ಶರತ್
ಬಿ.ಮನವಿ ಸ್ವೀಕರಿಸಿ, ಸೂಕ್ತ ಕ್ರಮಕೈಗೊಳ್ಳುವ ಭರವಸೆ ನೀಡಿದರು. ಸಿಐಡಿ ತನಿಖೆ ಚುರುಕು: ಈ ಮಧ್ಯೆ, ವಿದ್ಯಾರ್ಥಿನಿ ಶಂಕಾಸ್ಪದ ಸಾವಿನ ಪ್ರಕರಣ ತನಿಖೆ ನಡೆಸುತ್ತಿರುವ ಸಿಐಡಿ ಪೊಲೀಸರು,ಗುರುವಾರ ಆರೋಪಿ ಸುದರ್ಶನ ಯಾದವ ಹಾಗೂ ಯುವತಿ ಮನೆಗಳಿಗೆ ತೆರಳಿ ಮಾಹಿತಿ ಪಡೆದರು.